ಮಂಗಳೂರು | ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ನಿಧನ

Date:

Advertisements

ಜಾನಪದ ತಜ್ಞ, ಕವಿ, ಕಥೆಗಾರ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರು ಶನಿವಾರ ಬೆಳಗ್ಗೆ 9.15ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದಒಲುಮೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಅಮೃತ ಸೋಮೇಶ್ವರ ಅವರು ತುಳುನಾಡಿನ ಓರ್ವ ಸಾಹಿತಿ. ಹಿರಿಯ ಜಾನಪದ ವಿದ್ವಾಂಸ. ಕಾವ್ಯ, ಸಣ್ಣಕತೆ, ನಾಟಕ, ಯಕ್ಷಗಾನ, ವಿಮರ್ಶೆ ಹಾಗೂ ಜಾನಪದ ಕ್ಷೇತ್ರದಲ್ಲಿ ವಿಶೇಷವಾಗಿ ಕೆಲಸ ಮಾಡಿದವರು.

ಅಮೃತ ಸೋಮೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟಂಬರ್ 27 ರಂದು ಜನಿಸಿದ್ದರು. ಇವರ ತಂದೆ ಚಿರಿಯಂಡ ಮತ್ತು ತಾಯಿ ಅಮುಣಿ ಇವರ ಮಾತೃಭಾಷೆ ಮಲಯಾಳಂ.

Advertisements

ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದ ಅವರು ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ ಮಾಡಿದ್ದಾರೆ. ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ತಾವು ಓದಿದ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ.

ನಿವೃತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು.

ಇವರ ಮಾತೃ ಭಾಷೆ ಮಲಿಯಾಳಂ ಆದರೂ ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಸಾಹಿತ್ಯ ರಚನೆಗೆ ತೊಡಗಿದ್ದರು. ಹೈಸ್ಕೂಲ್‌ ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಬೆಳೆಸಿಕೊಂಡಿದ್ದ ಅವರು ಕಥೆ, ಕವನ ರಚನೆಗೆ ತೊಡಗಿಸಿಕೊಂಡು ಯಕ್ಷಗಾನ ಪ್ರಸಂಗವೊಂದನ್ನೂ ರಚಿಸಿದ್ದರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಇವರಿಗಿದೆ. ಅಮರ ಶಿಲ್ಪಿ ವೀರ ಕಲ್ಕುಡ, ಘೋರ ಮಾರಕ, ಸಹಸ್ರ ಕವಚ ಮೋಕ್ಷ, ಕಾಯಕಲ್ಪ, ಅಮರ ವಾಹಿನಿ, ತ್ರಿಪುರ ಮಥನ, ಆದಿಕವಿ ವಾಲ್ಮೀಕಿ, ಚಾಲುಕ್ಯ ಚಕ್ರೇಶ್ವರ ಮುಂತಾದ ಮೂವತ್ತಕ್ಕೂ ಹೆಚ್ಚು ಕೃತಿ ರಚಿಸಿದ್ದಾರೆ.

ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿ ಗುರುತಿಸಿಕೊಂಡವರು. ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಾಡಿನಕೀರ್ತಿ ಹೆಚ್ಚಿಸಿದ ಅಮೃತರನ್ನು ಮಂಗಳೂರುವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ನೇ ಸಾಲಿನಗೌರವಶ್ರೀ’ ಪ್ರಶಸ್ತಿ, ಮಣಿಪಾಲ ಅಕಾಡೆಮಿಯ ಮಾಹೆ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಯಿಂದ ಸಂಘ ಸಂಸ್ಥೆಗಳ ಸನ್ಮಾನದಿಂದ ಪುರಸ್ಕೃತರಾಗಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನಗೌರವಶ್ರೀ’ ಪ್ರಶಸ್ತಿಯನ್ನು ಅವರ 86ನೇ ಹುಟ್ಟುದಿನದಂದು ಅವರ ಮನೆಯಲ್ಲಿಯೇ ಪ್ರದಾನ ಮಾಡಲಾಗಿತ್ತು.

ತುಳು ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಮೃತರು ಪತ್ನಿ ನರ್ಮದಾ, ಮಕ್ಕಳಾದ ಚೇತನ್, ಜೀವನ್ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸೋಮೇಶ್ವರ ಪುರಸಭೆ ಕಚೇರಿ ಬಳಿಯ ಅವರ ಸ್ವಗೃಹದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, .7ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X