ಜನವರಿ 25ರಿಂದ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಸುದ್ದಿ ಹರಿದಾಡುತ್ತಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿಕೆಗೆ ಇದೀಗ ನಟಿ ಪವಿತ್ರಾ ಗೌಡ ಪ್ರತಿಕ್ರಿಯೆ ನೀಡಿದ್ದು, ”ನಾನು ಮತ್ತು ದರ್ಶನ್ ಶ್ರೀನಿವಾಸ ಅವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ” ಎಂದು ಹೇಳಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಪವಿತ್ರಾ ಬರೆದುಕೊಂಡಿದ್ದು ಏನು?
”ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು, ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ಜೀವನದಲ್ಲಿ ಉಂಟಾದ ತೊಂದರೆಗಳಿಂದ ನಾನು ಸಂಜಯ್ ಅವರಿಂದ ವಿಚ್ಛೇದನ ಪಡೆದಿದ್ದೇನೆ. ಇಲ್ಲಿಯವರೆಗೂ ಖುಷಿ ಗೌಡ ನಟ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ” ಎಂದು ಪವಿತ್ರಾ ಗೌಡ ಹೇಳಿದ್ದಾರೆ.

”ನಾನು ಮತ್ತು ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ. ‘ಯಾವುದೇ ಸ್ವಂತ ವೈಯಕ್ತಿಕ ಅಗತ್ಯತೆಗಳು ಮತ್ತು ಕಾರ್ಯಸೂಚಿಗಾಗಿ ನಾನು ಇಲ್ಲಿಲ್ಲ’ ದಯವಿಟ್ಟು ಇದನ್ನು ಗಮನಿಸಿ. ಇದು 10 ವರ್ಷಗಳ ಕಾಲ ಶುದ್ಧ ಪ್ರೀತಿ ಮತ್ತು ಕಾಳಜಿಯ ಬಗ್ಗೆ ಇದು ಸುಲಭವಲ್ಲ, ಈ ವಿಷಯ ವಿಜಯಲಕ್ಷ್ಮೀ ಅವರಿಗೂ ಮೊದಲೇ ತಿಳಿದಿರುತ್ತದೆ. ಈ ವಿಚಾರವಾಗಿ ವಿಜಯಲಕ್ಷ್ಮೀ ಅವರೆ ನನಗೆ ಹಲವಾರು ಸಾರಿ ಕರೆ ಮಾಡಿ ನನ್ನ ಬಳಿ ಮಾತನಾಡಿದ್ದು, ವಿಜಯಲಕ್ಷ್ಮೀ ಅವರಿಗೆ ಯಾವುದೇ ರೀತಿಯ ತೊಂದರೆ ಇಲ್ಲವೆಂದು ತಿಳಿಸಿದ್ದಾರೆ. (ಅದರ ಕೆಲವು ದಾಖಲೆಗಳು ಹಾಗೂ ನನ್ನ ವಿಚ್ಛೇದನ ದಾಖಲೆಗಳು ಸಮಯ ಬಂದಾಗ ಹಂಚಿಕೊಳ್ಳುತ್ತೇನೆ)” ಎಂದು ಬರೆದುಕೊಂಡಿದ್ದಾರೆ.
View this post on Instagram
”ಇದೀಗ ವಿಜಯಲಕ್ಷ್ಮೀಯವರು ನನ್ನ ವಿರುದ್ಧವಾಗಿ ಪೋಸ್ಟ್ಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ ವಯಸ್ಕ ಮಗಳಾದ ಖುಷಿ ಗೌಡಳ ಬಗ್ಗೆ ವಿಜಯಲಕ್ಷ್ಮೀ ದರ್ಶನ್ ಎಂಬ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಬಹಳಷ್ಟು ಜನ ಕೆಟ್ಟ ಭಾಷೆಯಿಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೆ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ವೈಯಕ್ತಿಕ ಫೋಟೋಗಳನ್ನು ಪೋಸ್ಟ್ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ‘ಕಾನೂನು ಕ್ರಮ ಕೈಗೊಳ್ಳುವೆ’ ಎಂದು ಪವಿತ್ರಾ ಗೌಡಗೆ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ
”ನನಗೂ ಲೀಗಲ್ ಆಕ್ಷನ್ ತಗೊಳೋ ಹಕ್ಕಿದೆ. ಆದರೂ, ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ. ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. ಅವರ ನಡುವಿನ ಸಮಸ್ಯೆಗಳ ಬಗ್ಗೆ ನಿಮಗೆಲ್ಲರಿಗೂ ತಿಳಿದಿದೆ ಎಂದು ಭಾವಿಸುತ್ತೇನೆ. ನಾನು ಅವರ ಜೀವನದಲ್ಲಿ ಬರುವ ಮುಂಚೆ ಅವರು ಏನೆಲ್ಲ ಕಷ್ಟಗಳನ್ನು ಅನುಭವಿಸಿದ್ದಾರೆ ಎಂದು ತಿಳಿದಿದೆ. ದಯವಿಟ್ಟು ಅದನ್ನು ನೆನಪಿಸಿಕೊಳ್ಳಿ. ಸ್ವಾಭಿಮಾನವು ಎಲ್ಲಕ್ಕಿಂತ ಹೆಚ್ಚು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.
ಸದ್ಯ ಪವಿತ್ರ ಗೌಡ ಪೋಸ್ಟ್ ವೈರಲ್ ಆಗ್ತಿದ್ದು, ನಟ ದರ್ಶನ್ ಮೌನ ಸಾಕಷ್ಟು ಕುತೂಹಲ ಮೂಡಿಸಿದೆ.
ನಟಿ ಪವಿತ್ರಾ ಗೌಡ ಅವರು ನಟ ದರ್ಶನ್ ಅವರೊಂದಿಗಿನ ಸಂಬಂಧಕ್ಕೆ 10 ವರ್ಷ ತುಂಬಿದೆ ಎಂದು ದರ್ಶನ್ ಅವರ ಜತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ, ಪವಿತ್ರಾ ಗೌಡ ಅವರ ಹಲವು ಫೋಟೋಗಳನ್ನು ಹಂಚಿಕೊಂಡು ‘ಇದು ಇವರ ನೈಜ ಮುಖ’ ಎಂದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದರು.