ಮೆಟ್ರೋ ಕಾಮಗಾರಿ | ಏಪ್ರಿಲ್ 1ರಿಂದ ‘ಒಂದು ವರ್ಷ’ ಈ ರಸ್ತೆಯಲ್ಲಿ ಸಂಚಾರ ಬಂದ್

Date:

ಬೆಂಗಳೂರಿನ ಲಕ್ಕಸಂದ್ರ ಸುರಂಗ ಮಾರ್ಗ, ಮೆಟ್ರೋ ನಿಲ್ದಾಣದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಬನ್ನೇರುಘಟ್ಟ ಮುಖ್ಯರಸ್ತೆಯ ‘ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌’ ನಡುವೆ ವಾಹನ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮಾಹಿತಿ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಮಾರ್ಗವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧಿಸಲಾಗಿದೆ” ಎಂದು ಹೇಳಿದೆ.

“ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಸೈಬರ್ ವಂಚನೆ | ಭಾರತದವರನ್ನು ಬಳಸಿಕೊಂಡು ಭಾರತೀಯರಿಗೆ ಮೋಸ: ಕಾಂಬೋಡಿಯಾದಲ್ಲಿ ಸಿಕ್ಕಿಬಿದ್ದಿರುವ 5,000 ಭಾರತೀಯರು

ತುರ್ತಾಗಿ ಮೆಟ್ರೋ ಕಾಮಗಾರಿ

ನಗರದ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್.ಪುರಂ ಮೆಟ್ರೋ ಸ್ಟೇಷನ್ ನಿಲ್ದಾಣದ ಬಳಿ ತುರ್ತಾಗಿ ಮೆಟ್ರೋ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯೂ ಮಾರ್ಚ್ 29 ರಿಂದ ಏಪ್ರಿಲ್ 1ವರಗೆ ನಡೆಯುತ್ತಿದೆ. ಹಾಗಾಗಿ, ಸಿಟಿ ಕಡೆ ಹಾಗೂ ಹೆಬ್ಬಾಳ ಕಡೆಗೆ ಹೋಗುವ ರಸ್ತೆಯ ಅರ್ಧ ಭಾಗ ಮುಚ್ಚಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ...

ಬೆಂಗಳೂರು | ಬಿಜೆಪಿಗೆ ಸೇರಿದ 2 ಕೋಟಿ ಹಣವನ್ನು ವಶಪಡಿಸಿಕೊಂಡ ಚುನಾವಣಾಧಿಕಾರಿಗಳು: ಎಫ್‌ಐಆರ್

ಬಿಜೆಪಿಗೆ ಸೇರಿದ ಸುಮಾರು ಎರಡು ಕೋಟಿಯಷ್ಟು ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ...

ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ...

ಸಿದ್ದರಾಮಯ್ಯರಿಂದ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ: ಬಿ ಎಸ್ ಯಡಿಯೂರಪ್ಪ

"ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ...