ಮೈಕ್ರೋ ಫೈನಾನ್ಸ್ ಕಿರುಕುಳ | ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಲ್ಲಿರುವ ಪ್ರಮುಖಾಂಶಗಳೇನು?

Date:

Advertisements

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿತ್ತು.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಲವಾರು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಲು ಮುಂದಾಗಿದೆ. ಮುಂದಿನ ಅಧಿವೇಶನದಲ್ಲಿ ಅದರ ಸಾಧಕ ಮತ್ತು ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ನಿರ್ಧಾರ ಮಾಡಬೇಕಿದೆ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ- 2025ರ ಮುಖ್ಯಾಂಶಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

Advertisements

ಮಸೂದೆಯ ಮುಖ್ಯಾಂಶಗಳು

  1. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
  2. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
  3. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
  4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
  5. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
  6. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
  7. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.
  8. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
  9. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
  10. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
  11. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತಃ (Suo moto) ಪ್ರಕರಣವನ್ನು ದಾಖಲಿಸಬಹುದು.
  12. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
  13. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X