‘ಶಕ್ತಿ ಯೋಜನೆ’ ದುರುಪಯೋಗ; ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ

Date:

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವರ್ಷ ಕಳೆದಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಜಾರಿ ಬಂದಾಗಿನಿಂದ ಇದರ ದುರುಪಯೋಗ ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.

- Advertisement -

ಹೌದು, ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಸರ್ಕಾರಿ ಬಸ್‌ಗಳಲ್ಲಿ ನಿರ್ವಾಹಕರು ಮಹಿಳೆಯರಿಗೆ ಫ್ರೀ ಟಿಕೆಟ್ ನೀಡುತ್ತಿದ್ದು, ಈ ಟಿಕೆಟ್ ಹಣವನ್ನು ಸರ್ಕಾರ ನಿಗಮಗಳಿಗೆ ನೀಡುತ್ತದೆ. ಅಲ್ಲದೆ, ಯೋಜನೆಯಡಿ ಬಸ್ ನಿರ್ವಾಹಕರಿಗೆ ಶೇ.3ರಷ್ಟು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಹೀಗಾಗಿ, ಹೆಚ್ಚಿನ ಪ್ರೋತ್ಸಾಹ ಧನ ಪಡೆಯಲು ನಿರ್ವಾಹಕರು ಮಹಿಳೆಯರು ಇಳಿಯುವ ನಿಲ್ದಾಣಗಳಿಗಿಂತ ಮುಂದಿನ ಸ್ಥಳಗಳಿಗೆ ಶೂನ್ಯ ಟಿಕೆಟ್ ನೀಡುತ್ತಿದ್ದಾರೆ. ಇನ್ನು ಮಹಿಳೆಯರು ಬಸ್‌ಗಳಲ್ಲಿ ಇಲ್ಲದೇ, ಇದ್ದರೂ ಕೂಡ ಬೇಕಾಬಿಟ್ಟಿಯಾಗಿ ಟಿಕೆಟ್ ಹರಿಯುತ್ತಿದ್ದಾರೆ. ಇಲ್ಲವೇ, ಶಕ್ತಿ ಯೋಜನೆಯ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೆ ನೀಡುತ್ತಿರುವುದು, ಓರ್ವ ಮಹಿಳೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡುವುದು ಸೇರಿದಂತೆ ಇನ್ನಿತರ ಬಗ್ಗೆ ದೂರುಗಳು ಕೇಳಿಬಂದಿವೆ. ಸದ್ಯ ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದ್ದು, ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈಗಾಗಲೇ, ನಿರ್ವಾಹಕರ ವಿರುದ್ಧ ದೂರಗಳು ಕೇಳಿಬಂದಾಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹಾಗೂ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡು ನಿರ್ವಾಹಕರಿಗೆ ಎಚ್ಚರಿಕೆ ನೀಡಿವೆ.

ಈ ಸುದ್ದಿ ಓದಿದ್ದೀರಾ? ಡೆಂಘೀ ಪ್ರಕರಣ ನಿಯಂತ್ರಿಸಲು ಮನೆ-ಮನೆ ಸಮೀಕ್ಷೆ: ತುಷಾರ್ ಗಿರಿ ನಾಥ್

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಈಗಾಗಲೇ ಈ ಬಗ್ಗೆ ಆದೇಶ ಹೊರಡಿಸಿದ್ದು, “ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರಿಗೆ ಉಚಿತ ಟಿಕೆಟ್ ನೀಡದಿದ್ದರೆ ಕಂಡಕ್ಟರ್‌ಗಳು ದಂಡ ಕಟ್ಟಬೇಕಾಗುತ್ತದೆ” ಎಂದಿದೆ.

ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಕಂಡಕ್ಟರ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಟಿಕೆಟ್ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುವುದು, ಮಹಿಳಾ ಉಚಿತ ಟಿಕೆಟ್ ನೀಡದೇ ಇದ್ದಲ್ಲಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು, ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲು ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...