ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.70 ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ; ಶೀಘ್ರ ಜಾರಿ ಸಾಧ್ಯತೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.