ʼಬಿಪರ್‌ಜಾಯ್ʼ ಚಂಡಮಾರುತ ಆರಂಭ; ರಾಜ್ಯದಲ್ಲಿ ಮುಂಗಾರು ವಿಳಂಬ

Date:

Advertisements

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ʼಬಿಪರ್‌ಜಾಯ್ʼ ಚಂಡಮಾರುತ ಸೃಷ್ಟಿಯಾಗಿದ್ದು, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮೋಚಾ ಸೈಕ್ಲೋನ್ ಬಳಿಕ ಸೃಷ್ಟಿಯಾಗಿರುವ ಬಿಪರ್‌ಜಾಯ್‌ ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವೆಡೆ ಜೋರು ಮಳೆಯಾಗುವ ನಿರೀಕ್ಷೆಯಿದೆ. ಆರಂಭದಲ್ಲಿ ಈ ಸೈಕ್ಲೋನ್‌ ವೇಗ ಪ್ರತಿ ಗಂಟೆಗೆ 45 ರಿಂದ 55 ಕಿಲೋ ಮೀಟರ್ ಇರಲಿದ್ದು, ಗರಿಷ್ಠ 145-155 ಕಿಲೋಮೀಟರ್‌ವರೆಗಿನ ವೇಗದಲ್ಲಿ ಬೀಸುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆಗಳ ಎಚ್ಚರಿಕೆ ನೀಡಲಾಗಿದೆ. 4 ದಿನ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Advertisements

ಚಂಡಮಾರುತದ ಪರಿಣಾಮದಿಂದ ಮುಂಗಾರು ತಡವಾಗಲಿದ್ದು, ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ಮುಂಗಾರು ಕೇರಳ ಪ್ರವೇಶ ಮಾಡುತ್ತಿತ್ತು. ಈ ಬಾರಿ ಅದೂ ತಡವಾಗಿದೆ. ಚಂಡಮಾರುತ ಸೃಷ್ಟಿಸಿರುವ ಗಾಳಿಯು ತೇವಾಂಶವನ್ನು ಚದುರಿಸುವುದರಿಂದ ಈಗಾಗಲೇ ರೂಪುಗೊಂಡಿರುವ ಮೋಡಗಳು ಕೂಡ ಚದುರಲಿವೆ. ಇದರ ಪ್ರಭಾವದಿಂದ ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬಿಪರ್‌ಜಾಯ್‌ ಚಂಡಮಾರುತ ನೇರವಾಗಿ ಕರಾವಳಿಯನ್ನು ಅಪ್ಪಳಿಸುವುದಿಲ್ಲ. ಸಮುದ್ರ ತೀರದಿಂದ ಸ್ವಲ್ಪ ದೂರದಲ್ಲಿರಲಿದೆ. ಆದ್ದರಿಂದ ಹೆಚ್ಚಿನ ಅಪಾಯವಿಲ್ಲ. ಆದರೆ, ಇದು ನೈರುತ್ಯ ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿದ್ದು, ಮಳೆಮಾರುತಗಳನ್ನು ಭಾರತದ ತೀರದಿಂದ ಆಚೆಗೆ ಹಾರಿಸಲಿದೆ. ಹೀಗಾಗಿ ಮಳೆ ಕೊರತೆಯಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X