ಕೈಕೊಟ್ಟ ಮುಂಗಾರು: ಕರ್ನಾಟಕದ 141 ತಾಲೂಕುಗಳಿಗೆ ಎಲ್‌ ನಿನೊ ಪೆಟ್ಟು

Date:

ಕರ್ನಾಟಕದ 240 ತಾಲೂಕುಗಳ ಪೈಕಿ 141 ತಾಲೂಕುಗಳು ಎಲ್‌ ನಿನೊ ಪರಿಣಾಮದಿಂದ ಮಳೆ ಅಭಾವಕ್ಕೆ ತುತ್ತಾಗಿವೆ. ಖಾರಿಫ್ ಬಿತ್ತನೆಯ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದ್ದು, ಹಲವೆಡೆ ಬರಗಾಲದ ಛಾಯೆ ಆವರಿಸಿದೆ.

- Advertisement -

ಎಲ್ ನಿನೊ ಕಾರಣದಿಂದ 2026ರ ನೈಋತ್ಯ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯನ್ನು ಈ ಮೊದಲೇ ಹವಾಮಾನ ಇಲಾಖೆ ಅಂದಾಜಿಸಿತ್ತು. ಜುಲೈ 11, 2026ರ ಅವಧಿಯೊಳಗೆ ಕರ್ನಾಟಕದಲ್ಲಿ 292 ಮಿಮೀ ವಾಡಿಕೆ ಪ್ರಮಾಣದ ಬದಲು ಕೇವಲ 203 ಮಿಮೀ ಮಳೆ ಮಾತ್ರ ದಾಖಲಾಗಿದೆ. ಇದು ಮಾನ್ಸೂನ್ ಕೊರತೆಗೆ ಕಾರಣವಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳು ತೀವ್ರ ಮಳೆ ಕೊರತೆಗೆ ತುತ್ತಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇತ್ತೀಚೆಗೆ ಖಾರಿಫ್ ಬಿತ್ತನೆಯ ಪ್ರಮಾಣದಲ್ಲಿ ಅಸಾಧಾರಣ ಇಳಿಕೆ ಕಂಡುಬಂದಿದ್ದು, ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದ ರಾಜ್ಯದಲ್ಲಿ ಈ ಬಾರಿ ಭಾಗಶಃ ಪ್ರಮಾಣದ ಬಿತ್ತನೆಯೂ ನಡೆದಿಲ್ಲ. ಜುಲೈ ಮೊದಲ ವಾರದಲ್ಲಿ 84.10 ಲಕ್ಷ ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಇದ್ದೆಡೆ ಕೇವಲ 28.36 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಖಾರಿಫ್ ಬಿತ್ತನೆ ನಡೆದಿದೆ.

ರಾಜ್ಯದ ಬಹುತೇಕ ನೀರಿನ ಮೂಲಗಳನ್ನು ಭರ್ತಿಯಾಗಿಸುತ್ತಿದ್ದ ಮಲೆನಾಡಿನಲ್ಲಿ ಮುಂಗಾರು ಕ್ಷೀಣಿಸಿದ್ದರಿಂದ ಕಾವೇರಿ, ತುಂಗಭದ್ರಾ ಹಾಗೂ ಭದ್ರಾ ಜಲಾನಯನಗಳು ಬತ್ತಿವೆ. ಮಲೆನಾಡಿನಲ್ಲಿ 34% ಮಳೆ ಅಭಾವ ಸೃಷ್ಟಿಯಾಗಿದ್ದು, ಕರಾವಳಿ ಕರ್ನಾಟಕದಲ್ಲಿ 30% ಮಳೆ ಕೊರತೆಯಾಗಿದೆ. ಉತ್ತರ ಒಳನಾಡಿನಲ್ಲಿ 24% ಮತ್ತು ದಕ್ಷಿಣ ಒಳನಾಡಿನಲ್ಲಿ 18% ಮಳೆಯ ಅಭಾವ ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...