ಮುಂಗಾರು ಕ್ಷೀಣ: ರಾಜ್ಯಾದ್ಯಂತ ಆವರಿಸಿದ ಬರಗಾಲದ ಛಾಯೆ

Date:

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡ ಬೆನ್ನಲ್ಲೇ ಬರಗಾಲದ ಛಾಯೆ ಘಾಡವಾಗಿ ಆವರಿಸಿದೆ. ಕೆರೆ,ಜಲಾಶಯ ಸೇರಿದಂತೆ ಎಲ್ಲಾ ಜಲ ಮೂಲಗಳು ಬತ್ತಿಹೋಗಿದ್ದು ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಸರ್ಕಾರ ಆದೇಶಿಸಿದೆ.

ರಾಜ್ಯದ 31 ಜಿಲ್ಲೆಗಳಲ್ಲೂ ಮಳೆ ಕಡಿಮೆಯಾಗಿದೆ. ಶೇ.9 ರಿಂದ ಶೇ.68 ರಷ್ಟು ಕೊರತೆ ಕಾಣಿಸಿಕೊಂಡಿದೆ. 26 ಜಿಲ್ಲೆಗಳಲ್ಲಿ ಮಳೆ ಅಭಾವ ಸೃಷ್ಟಿಯಾಗಿದೆ. 178 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆ ಕೊರತೆಯಿದ್ದರೆ, ಉಳಿದ 20 ತಾಲೂಕುಗಳಲ್ಲಿ ತೀವ್ರ ಕೊರತೆಯುಂಟಾಗಿದೆ. ಇಡೀ ರಾಜ್ಯದ ಚಿತ್ರಣ ಗಮನಿಸಿದರೆ ಜೂನ್ 1 ರಿಂದ ಜುಲೈ 17 ರವರೆಗೆ ಸರಾಸರಿ 346 ಮಿಲಿ ಮೀಟರ್​ ಮಳೆಯಾಗಬೇಕಾದ ಕಡೆ ಕೇವಲ 215 ಮಿ.ಮೀ ಮಾತ್ರ ಮಳೆಯಾಗಿದೆ. ರಾಜ್ಯವ್ಯಾಪಿ ಶೇ.37 ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ನದಿಗಳಿಗೆ ನೀರು ಪೂರೈಸುವ ಮಲೆನಾಡಿನಲ್ಲಿ ಶೇ.43 ರಷ್ಟು ಕೊರತೆಯಾಗಿದೆ. ಕರಾವಳಿಯಲ್ಲಿ ಶೇ.35, ಉತ್ತರ ಒಳನಾಡಿನಲ್ಲಿ ಶೇ.33, ದಕ್ಷಿಣ ಒಳನಾಡಿನಲ್ಲಿ ಶೇ.31 ಮಿ.ಮೀ ಕಡಿಮೆಯಾಗಿದೆ.

ಜೂನ್ 1ರಿಂದ ಜುಲೈ 17ರವರೆಗೆ ರಾಜ್ಯಕ್ಕೆ ಸರಾಸರಿ 346 ಮಿಲಿ ಮೀಟರ್ ಮಳೆಯಾಗಬೇಕಾದ್ದರಲ್ಲಿ ಕೇವಲ 215 ಮಿ.ಮೀ ಮಾತ್ರ ಮಳೆಯಾಗಿದೆ. ರಾಜ್ಯವ್ಯಾಪಿ ಶೇ.37ರಷ್ಟು ಮಳೆ ಕೊರತೆ ದಾಖಲಾಗಿದೆ. ನದಿಗಳಿಗೆ ನೀರು ಪೂರೈಸುವ ಮಲೆನಾಡಿನಲ್ಲಿ ಶೇ.43, ಕರಾವಳಿಯಲ್ಲಿ ಶೇ.35, ಉತ್ತರ ಒಳನಾಡಿನಲ್ಲಿ ಶೇ.33 ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.31ರಷ್ಟು ಕೊರತೆಯಾಗಿದೆ.

- Advertisement -

ಮಲೆನಾಡು ಪ್ರದೇಶದಲ್ಲಿ ಹಳ್ಳ-ಕೊಳ್ಳ, ನಾಲೆಗಳು ಬರಿದಾಗಿವೆ. ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಜಿಲ್ಲೆಯ ಕೆಲವೆಡೆ ಬರಗಾಲದ ಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿಗೂ ಹಾಹಾಕಾರ ಸೃಷ್ಟಿಯಾಗಿದೆ. ಹೇಮಾವತಿ, ಯಗಚಿ ಮತ್ತು ವಾಟೇಹೊಳೆ ಜಲಾಶಯಗಳಲ್ಲಿ ನೀರಿನ ಮಟ್ಟ ಇಂಗಿದ್ದು, 15 ಟಿಎಂಸಿ ನೀರಿನ ಕೊರತೆ ಉಂಟಾಗಿದೆ. ಪ್ರಸ್ತುತ ಜನ-ಜಾನುವಾರುಗಳ ಕುಡಿಯುವ ನೀರಿನ ಆದ್ಯತೆ ಪೂರೈಸಲು 300 ಕ್ಯೂಸೆಕ್ ನೀರು ನಾಲೆಗಳಿಗೆ ಬಿಡಲಾಗುತ್ತಿದೆ.

ವಿಜಯನಗರ ಜಿಲ್ಲೆಯಲ್ಲಿ ಶೇ.62ರಿಂದ 67ರಷ್ಟು ತೀವ್ರ ಕೊರತೆ ದಾಖಲಾಗಿದೆ. ಮೈಸೂರು (ಶೇ.57), ಹಾವೇರಿ (ಶೇ.50), ದಾವಣಗೆರೆ (ಶೇ.48), ಕೊಡಗು (ಶೇ.46), ಶಿವಮೊಗ್ಗ (ಶೇ.44), ಚಿಕ್ಕಮಗಳೂರು (ಶೇ.43) ಮತ್ತು ಕಲಬುರಗಿ (ಶೇ.42) ಜಿಲ್ಲೆಗಳಲ್ಲಿ ಗಣನೀಯ ಕೊರತೆ ಕಂಡುಬಂದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ (ಶೇ.39), ದಕ್ಷಿಣ ಕನ್ನಡ (ಶೇ.38) ಮತ್ತು ಉತ್ತರ ಕನ್ನಡ (ಶೇ.28)ಗಳಲ್ಲೂ ಮಳೆ ಕಡಿಮೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಬಾಗಲಕೋಟೆ, ವಿಜಯಪುರ, ಬೆಳಗಾವಿ, ಬೆಂಗಳೂರು ಗ್ರಾಮೀಣ, ತುಮಕೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆ ದಾಖಲಾಗಿದೆ.

ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಕಳೆದ ವರ್ಷಕ್ಕಿಂತ ಸುಮಾರು ಶೇ.40–42 ಕಡಿಮೆಯಾಗಿದೆ. ಕಾವೇರಿ ಜಲಾನಯನದ ಕೆಆರ್‌ಎಸ್, ಹೇಮಾವತಿ ಮತ್ತು ಕಬಿನಿ ಜಲಾಶಯಗಳ ಮಟ್ಟ ತೀವ್ರವಾಗಿ ಕುಸಿದಿದೆ. ಹೈಡಲ್ ಜಲಾಶಯಗಳಾದ ಲಿಂಗನಮಕ್ಕಿ, ಸುಪಾ ಮತ್ತು ವರಾಹಿಗಳಲ್ಲಿ ಸಾಮರ್ಥ್ಯದ ಶೇ.23ರಷ್ಟು ಮಾತ್ರ ನೀರು ಇದೆ. ಕೃಷ್ಣಾ ಜಲಾನಯನದ ಅಲಮಟ್ಟಿ ಜಲಾಶಯದಲ್ಲಿ ಮಾತ್ರ ಪರಿಸ್ಥಿತಿ ಬಿಗಡಾಯಿಸಿಲ್ಲ.

ಕೆಆರ್‌ಎಸ್ (ಕೃಷ್ಣರಾಜಸಾಗರ) ಜಲಾಶಯದಲ್ಲಿ ಪ್ರಸ್ತುತ ಸುಮಾರು 17.13 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷದ ಇದೇ ಅವಧಿಯ 48 ಟಿಎಂಸಿಗೆ ಹೋಲಿಸಿದರೆ ಗಣನೀಯವಾಗಿ ಕಡಿಮೆಯಾಗಿದೆ (ಸಾಮರ್ಥ್ಯ 49.45 ಟಿಎಂಸಿ). ಹೇಮಾವತಿ ಜಲಾಶಯದಲ್ಲಿ ಸುಮಾರು 23 ಟಿಎಂಸಿ ನೀರು ಇದ್ದು, ಕಳೆದ ವರ್ಷಕ್ಕಿಂತ ಗಣನೀಯ ಕೊರತೆ ಕಂಡುಬಂದಿದೆ. ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಹಾರಂಗಿ ಜಲಾಶಯವು ಉತ್ತಮ ಸ್ಥಿತಿಯಲ್ಲಿದ್ದು, ಸುಮಾರು 7.58 ಟಿಎಂಸಿ ನೀರು ಸಂಗ್ರಹವಾಗಿದೆ (ಸಾಮರ್ಥ್ಯ 8.5 ಟಿಎಂಸಿ). ಅಲಮಟ್ಟಿ ಜಲಾಶಯದಲ್ಲಿ ಸುಮಾರು 106 ಟಿಎಂಸಿ ನೀರು ಇದ್ದು, ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ ಮತ್ತು ಒಳಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ಸುಮಾರು 38.76 ಟಿಎಂಸಿ (ಸಾಮರ್ಥ್ಯ 151.75 ಟಿಎಂಸಿ), ಸುಪಾ ಜಲಾಶಯದಲ್ಲಿ ಸುಮಾರು 46.79 ಟಿಎಂಸಿ ಮತ್ತು ವರಾಹಿ ಜಲಾಶಯದಲ್ಲಿ ಸುಮಾರು 9–10 ಟಿಎಂಸಿ ನೀರು ಸಂಗ್ರಹವಾಗಿದೆ.

ಸರ್ಕಾರವು ಬರಗಾಲ ನಿರ್ವಹಣೆಗೆ ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಜಲಾಶಯಗಳ ನೀರನ್ನು ಕುಡಿಯುವುದಕ್ಕೆ ಮಾತ್ರ ಮೀಸಲಿಡುವಂತೆ ಸೂಚನೆ ನೀಡಿದೆ. ನೂರಾರು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದ್ದರೂ, ಪ್ರಸ್ತುತ ಪರಿಸ್ಥಿತಿ ಗಂಭೀರವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ ಮೂಲಭೂತ ಹಕ್ಕುಗಳ ಮೇಲೇಕೆ ತೂಗುಕತ್ತಿ?

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ...

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...