ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ ಭಾಗ್ಯ’

Date:

Advertisements

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ ಯೋಜನೆ ಹಲವು ಜನರಿಗೆ ಅಕ್ಷಯ ಪಾತ್ರೆಯಾಗಿದೆ. ಸಂಕ್ರಾತಿ ಹಬ್ಬಕ್ಕೆ ಹೊಸ ಆಹಾರದ ಪಟ್ಟಿಯೊಂದಿಗೆ ಮುನ್ನುಗ್ಗಬೇಕಾಗಿದ್ದ ಇಂದಿರಾ ಕ್ಯಾಂಟೀನ್‌ನಲ್ಲಿ ಏಪ್ರಿಲ್ ನಂತರ ಮುದ್ದೆ, ಸಾರು ದೊರೆಯುವ ಸಾಧ್ಯತೆ ಇದೆ.

ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಟೆಂಡರ್ ವಿಳಂಬವಾಗಿದ್ದು, ಏಪ್ರಿಲ್ ನಂತರ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಸಾರು ದೊರೆಯುವ ಸಾಧ್ಯತೆ ಇದೆ.

ಈ ಹಿಂದೆ ಇಂದಿರಾ ಕ್ಯಾಂಟೀನ್​ಗಳಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಕೇವಲ ರೈಸ್‌ಬಾತ್​, ಅನ್ನ ಸಾಂಬಾರ್​, ಮೊಸರನ್ನ ನೀಡಲಾಗುತ್ತಿತ್ತು. ಆದರೆ, ಹಿರಿಯ ನಾಗರಿಕರು ಹಾಗೂ ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಇತರರು ಊಟ ಮಾತ್ರ ಬೇಡ ಮುದ್ದೆ, ಚಪಾತಿ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಊಟದ ಮೆನು ಬದಲಾವಣೆ ಮಾಡಿ ಮುದ್ದೆ, ಸಾರು, ಚಪಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು.

Advertisements

ಕಳೆದ ಆಗಸ್ಟ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದು, ಹೊಸ ಟೆಂಡರ್ ಪ್ರಕ್ರಿಯೆ ನಡೆಯದ ಹಿನ್ನೆಲೆ ಹಳೆ ಗುತ್ತಿಗೆದಾರರನ್ನು ಮುಂದುವರಿಸಲಾಗಿತ್ತು. ಡಿಸೆಂಬರ್‌ನಲ್ಲಿ ಟೆಂಡರ್ ಆಹ್ವಾನಿಸಲು ಸರ್ಕಾರ ಅನುಮೋದನೆ ನೀಡಿದೆ.

ಬಿಬಿಎಂಪಿ ಈ ಬಾರಿ ಕೇಂದ್ರೀಕೃತ ಟೆಂಡರ್ ಆಹ್ವಾನಿಸದೆ 8 ವಲಯಗಳಿಗೆ ಪ್ರತ್ಯೇಕ ಟೆಂಡರ್ ಆಹ್ವಾನಿಸುವುದಕ್ಕೆ ನಿರ್ಧರಿಸಿ ನಾಲ್ಕು ಪ್ಯಾಕೇಜ್‌ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿದೆ.

ಟೆಂಡರ್ ಪ್ರಕ್ರಿಯೆ ಇನ್ನು ಪೂರ್ಣಗೊಂಡಿಲ್ಲ. ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನು ಕನಿಷ್ಠ ಒಂದು ತಿಂಗಳು ಬೇಕಾಗಬಹುದು. ಇಂದಿರಾ ಕ್ಯಾಂಟೀನ್ ಆಹಾರ ಪೂರೈಕೆ ಗುತ್ತಿಗೆದಾರರಿಗೆ ಈ ಬಾರಿ ಮುದ್ದೆ, ಸಾರು ನೀಡುವುದನ್ನು ಕಡ್ಡಾಯಗೊಳಿಸಿದ್ದು, ಏಪ್ರಿಲ್‌ನಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಆನಂತರ ಲಭ್ಯವಾಗಲಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.10ರಂದು ರೈತ ನಾಯಕ ಪ್ರೊ. ಎಂಡಿಎನ್ ನೆನಪಿನಲ್ಲಿ ಬೃಹತ್ ರೈತ ಸಮಾವೇಶ

2017ರಲ್ಲಿ ಇಂದಿರಾ ಕ್ಯಾಂಟೀನ್ ಆರಂಭ

ಅತಿ ಕಡಿಮೆ ದರದಲ್ಲಿ ಬಡವರಿಗೆ ಮೂರು ಹೊತ್ತು ಊಟ ನೀಡಲು ಕ್ಯಾಂಟೀನ್‌ಗಳನ್ನು 2017ರ ಆಗಸ್ಟ್ 16ರಂದು ಆರಂಭಿಸಲಾಯಿತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಉದ್ಘಾಟಿಸಲಾಗಿತ್ತು. ತಮಿಳುನಾಡಿನ ‘ಅಮ್ಮಾ ಕ್ಯಾಂಟೀನ್’ ಮಾದರಿಯಲ್ಲಿ ಈ ಯೋಜನೆ ರೂಪಿಸಲಾಗಿತ್ತು.

ಆದರೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಚಾಲ್ತಿಯಲ್ಲಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ನಡೆಸಲು ಆಗಿನ ಬಿಜೆಪಿ ಸರ್ಕಾರ ಅನುದಾನ ನೀಡುವುದನ್ನೇ ನಿಲ್ಲಿಸಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ಯಾಂಟೀನ್ ಅನ್ನು ನಿರ್ವಹಣೆ ಮಾಡುತ್ತಿತ್ತು.

2023-24ನೇ ಸಾಲಿನ ಬಜೆಟ್‌ನಲ್ಲಿ ಕ್ಯಾಂಟೀನ್‌ಗೆ ಬಿಬಿಎಂಪಿ ₹50 ಕೋಟಿ ಮೀಸಲಿಟ್ಟಿತ್ತು. ಹೊರತಾಗಿ ಆಹಾರದ ಗುತ್ತಿಗೆಯ ಕಂಪನಿಗಳಿಗೆ ಬಾಕಿ ಬಿಲ್ ಮಾಡಲು ಕೂಡ ಬಿಬಿಎಂಪಿ ಸಂಕಷ್ಟ ಎದುರಿಸುತ್ತಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X