ಮುರುಘಾ ಶ್ರೀ ಪ್ರಕರಣ | ಮೂರನೇ ಆರೋಪಿ ಪರಮಶಿವಯ್ಯಗೆ ಜಾಮೀನು ನೀಡಿದ ಹೈಕೋರ್ಟ್‌

Date:

ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ ಎಂದು ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ.

ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ನೆರವು ನೀಡಿದ ಆರೋಪವನ್ನು ಪರಮಶಿವಯ್ಯ ಎದುರಿಸುತ್ತಿದ್ದಾರೆ.

ನ್ಯಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಅವರ ನೇತೃತ್ವದ ಪೀಠದ ಜಾಮೀನು ಮಂಜೂರು ಮಾಡಿದ್ದು, ಮುರುಘಾಶ್ರೀ ಪ್ರಕರಣದಲ್ಲಿ ಜಾಮೀನು ಪಡೆದ ಆರೋಪಿಗಳ ಪೈಕಿ ಪರಮಶಿವಯ್ಯ ಮೊದಲಿಗರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪರಮಶಿವಯ್ಯ

ಪರಮಶಿವಯ್ಯ ಅವರ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್‌ ವಾದಿಸಿದ್ದರೆ, ವಕೀಲರಾದ ಕೆಬಿಕೆ ಸ್ವಾಮಿ ವಕಾಲತ್ತು ವಹಿಸಿದ್ದರು.

ಮುರುಘಾಶ್ರೀ ವಿರುದ್ಧ 2022ರ ಆ.26ರಂದು ಮೊದಲು ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಆ.26ಕ್ಕೆ ಚಿತ್ರದುರ್ಗ ಗ್ರಾಮೀಣ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣದ ಎ1 ಆರೋಪಿ ಮುರುಘಾಶ್ರೀಗಳನ್ನು 2022ರ ಸೆಪ್ಟಂಬರ್‌ 1ರಂದು ಚಿತ್ರದುರ್ಗದ ಮಠದಿಂದಲೇ ಬಂಧಿಸಲಾಗಿತ್ತು.

ಮುರುಘಾಶ್ರೀ ವಿರುದ್ಧ ಒಟ್ಟು ಎರಡು ಪ್ರಕರಣ ದಾಖಲಾಗಿವೆ. 2ನೇ ಪೋಕ್ಸೋ ಪ್ರಕರಣ ಸಂಬಂಧ ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ತನಿಖೆ ನಡೆಸಿರುವ ಪೊಲೀಸರು ಈಗಾಗಲೇ 761 ಪುಟಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಎ ಮತ್ತು ಬಿ ಎರಡು ಭಾಗವಾಗಿ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯರಿಂದ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ: ಬಿ ಎಸ್ ಯಡಿಯೂರಪ್ಪ

"ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ...

ಮೋದಿಯವರ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಸಿಎಂ ಸಿದ್ದರಾಮಯ್ಯ 

"ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ....

ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ....

ಪಕ್ಷ ಸೂಚಿಸಿದರೆ ಕುಮಾರಸ್ವಾಮಿ ಪರ ಪ್ರಚಾರ: ಸುಮಲತಾ ಅಂಬರೀಶ್

“ವಾರದ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಮಂಡ್ಯ ಲೋಕಸಭಾ...