ಮೈ ಶುಗರ್ ಕಾರ್ಖಾನೆ; ಪುನಶ್ಚೇತನಕ್ಕೆ 50 ಕೋಟಿ ರೂಪಾಯಿ ಬಿಡುಗಡೆ

Date:

ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ತಕ್ಷಣಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

- Advertisement -

ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸರ್ಕರೆ ಕಾರ್ಖಾನೆ ಮಂಡ್ಯದ ಮೈ ಶುಗರ್ ಅನ್ನು ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದರು. ಆ ಭರವಸೆಯಂತೆ ರೋಗಗ್ರಸ್ಥವಾಗಿದ್ದ ಕಾರ್ಖಾನೆಯ ಪುನಶ್ಚೇತನಕ್ಕೆ 15 ಕೋಟಿ ರೂ ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳಕ್ಕೆ 35 ಕೋಟಿ ರೂ ಬಿಡುಗಡೆಗೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಕಳೆದ ವಾರ ಅನುಮೋದನೆ ನೀಡಿದ್ದರು. ಆ ಪ್ರಕಾರ ಇಂದು ಆರ್ಥಿಕ ಇಲಾಖೆ 50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ನೇತೃತ್ವದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಶಾಸಕರ ಮತ್ತು ಜನಪ್ರತಿನಿಧಿಗಳ ನಿಯೋಗ ಮೈ ಶುಗರ್ ಪುನಶ್ಚೇತನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.‌ 37 ಸಾವಿರ ಕಬ್ಬು ಬೆಳೆಗಾರ ರೈತರಿಂದ 5 ಲಕ್ಷ ಟನ್ ಕಬ್ಬು ಸರಬರಾಜು ಮಾಡುವ ಒಪ್ಪಂದವಾಗಿತ್ತು. ಈ ಒಪ್ಪಂದದಂತೆ ರೈತರಿಗೆ ಸಕಾಲದಲ್ಲಿ ಹಣ ಒದಗಿಸುವ ಅಗತ್ಯವಿದೆ ಎಂದು ನಿಯೋಗ ಮನವಿ ಮಾಡಿತ್ತು.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷಗಿರಿ; ರ್ಕಾರಕ್ಕೆ ಇರಲಿ ಎಚ್ಚರ

ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಬಿಡುಗಡೆ ಮಾಡಿದ್ದು, ತಕ್ಷಣಕ್ಕೆ 50 ಕೋಟಿ ರೂ ಬಿಡುಗಡೆ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ ಎಂದು ನಿಯೋಗ ಅಭಿನಂದನೆ ಸಲ್ಲಿಸಿದೆ. ಸರ್ಕಾರದ ಈ ಕ್ರಮದಿಂದ 37 ಸಾವಿರ ಕಬ್ಬು ಬೆಳೆಗಾರರಿಗೆ ಚೈತನ್ಯ ನೀಡಿದಂತಾಗುತ್ತದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...