2023ರ ಮೈಸೂರು ದಸರಾ ಹಬ್ಬದ ಪ್ರಯುಕ್ತ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ನಾನಾ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮವು ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲಿಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜತೆಗೆ ಹೊಸ ಪ್ಯಾಕೇಜ್‌ನ ಸೇವೆಯ ಬಸ್‌ಗಳು ಕಾರ್ಯನಿರ್ವಹಿಸಲಿವೆ.
ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ 2,000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಅ.10 ರಿಂದ ಅ.26 ರವರೆಗೆ ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ನಾನಾ ಸ್ಥಳಗಳಿಗೆ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಕಾರ್ಯಾಚರಣೆ ಆರಂಭಿಸಲಿವೆ ಎಂದು ತಿಳಿಸಿದೆ.
ರಾಜ್ಯದ ಮತ್ತು ಅಂತರರಾಜ್ಯದ ನಾನಾ ಸ್ಥಳಗಳಿಂದ ಬೆಂಗಳೂರಿಗೆ ಅ.24 ರಿಂದ ಅ.29 ರವರೆಗೆ ವಿಶೇಷ ವಾಹನಗಳು ಕಾರ್ಯಾಚರಣೆ ನಡೆಸಲಿವೆ
ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳು ಕಾರ್ಯಾಚರಣೆ ನಡೆಸಲಿವೆ ಎಂದು ನಿಗಮ ಮಾಹಿತಿ ನೀಡಿದೆ.
ಮೈಸೂರು ದಸರಾ-2023 ಪ್ರಯುಕ್ತ ಕರಾರಸಾ ನಿಗಮದಿಂದ 600 ವಿಶೇಷ ಸಾರಿಗೆ ವ್ಯವಸ್ಥೆ
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ನಡೆಸಲಿವೆ. ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣಿಕಟ್ಟು/ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 600 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ ಎಂದು ಹೇಳಿದೆ.
- ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ “ಪ್ಲೈ ಬಸ್” ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.
- ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ.
- ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ: ವಯಸ್ಕರಿಗೆ ₹400 ಮತ್ತು ಮಕ್ಕಳಿಗೆ ₹250)
ಈ ಸುದ್ದಿ ಓದಿದ್ದೀರಾ? ‘ಅವರು ಹೆಚ್ಚು ಭ್ರಷ್ಟ್ರರು’ ಎನ್ನುವ ರಾಜಕಾರಣಿಗಳೇ ತುಂಬಿದ್ದಾರೆ: ಮುಖ್ಯಮಂತ್ರಿ ಚಂದ್ರು ಬೇಸರ
ಜಲದರ್ಶಿನಿ: ಗೋಲ್ಡನ್ ಟೆಂಪಲ್, ದುಬಾರೆ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್ (ಪ್ರಯಾಣ ದರ: ವಯಸ್ಕರಿಗೆ ₹450 ಮತ್ತು ಮಕ್ಕಳಿಗೆ ₹250)
ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ: ವಯಸ್ಕರಿಗೆ ₹400 ಮತ್ತು ಮಕ್ಕಳಿಗೆ ₹250)
ಮಡಿಕೇರಿ ಪ್ಯಾಕೇಜ್: ನಿಸರ್ಗಧಾಮ, ಗೋಲ್ಡನ್ ಟೆಂಪಲ್, ಹಾರಂಗಿ, ರಾಜಾಸೀಟ್, ಅಬ್ಬಿಫಾಲ್ಸ್ (ಐಷಾರಾಮ ಕ್ಲಬ್ ಕ್ಲಾಸ್ ಪ್ರಯಾಣ ದರ: ವಯಸ್ಕರಿಗೆ ₹1,200 ಮತ್ತು ಮಕ್ಕಳಿಗೆ ₹1,000)