ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ನಡೆದಿದೆ.
ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕುಮಾರಸ್ವಾಮಿ(45), ಪತ್ನಿ ಮಂಜುಳ(39) ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಸುದ್ದಿ ತಿಳಿದ ಕೂಡಲೇ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿದ್ದ ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಪೊಲೀಸರ ಸಮ್ಮುಖದಲ್ಲಿ ಹೊರಗೆ ತರಲಾಯಿತು.
ಈ ಸುದ್ದಿ ಓದಿದ್ದೀರಾ? ರಾಮನಗರ | ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ ನರ್ಸ್ ಸಾವು ; ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಬೀಗ
ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳೆದ ರಾತ್ರಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.