ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ: ದೂರು ದಾಖಲು

Date:

ಬೆಂಗಳೂರಿನಲ್ಲಿ ಜನರಿಗೆ ವಂಚನೆ ಮಾಡುವ ಜಾಲಗಳು ಹೆಚ್ಚಾಗಿ ಸಕ್ರಿಯವಾಗುತ್ತಿವೆ. ಇದೀಗ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಸಬ್ಸಿಡಿಯಲ್ಲಿ ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ಮಹಿಳೆಯೊಬ್ಬರು ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

- Advertisement -

ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಮಾಡಿಕೊಂಡು ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಪವಿತ್ರ ವಿರುದ್ಧ ಸದ್ಯ ಆನೇಕಲ್, ಚಂದಾಪುರ, ಸೂರ್ಯನಗರ, ಹೊಸಕೋಟೆ ಅತ್ತಿಬೆಲೆಯಲ್ಲಿ ವಂಚನೆ ಪ್ರಕರಣ ಬಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪವಿತ್ರಾ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಆಲ್ಬರ್ಟ್ ಮಾರ್ಟಿನ್, ಹೇಮಲತಾ ಹಾಗೂ ಶಾಲಿನಿ ಎಂಬವರು ಆರೋಪಿಗಳು ಎನ್ನಲಾಗಿದೆ.

ಆರೋಪಿಗಳು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಸಬ್ಸಿಡಿ ಸಾಲದ ಆಮಿಷವೊಡ್ಡಿ ಅಮಾಯಕರಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

ಆರೋಪಿಗಳು ತಾವು ಆರಂಭಿಸಿದ ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್‌ಗೆ ಕೇಂದ್ರ ಸರ್ಕಾರದಿಂದ ₹17,000 ಕೋಟಿ ಹಣ ಬಂದಿದೆ. ನಿರ್ಮಲಾ ಸೀತಾರಾಮನ್ ಅವರು ನಮಗೆ ಹಣ ವರ್ಗಾವಣೆ ಮಾಡಿದ್ದಾರೆ. ಅಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನರಿಗೆ ವಂಚಿಸಿದ್ದಾರೆ.

ವಂಚಕಿ
ಆರೋಪಿ ಪವಿತ್ರಾ

ಈ ಹಣವನ್ನು ಟ್ರಸ್ಟ್ ಮೂಲಕ ಸಬ್ಸಿಡಿಯಲ್ಲಿ ಸಾಲ ವಿತರಿಸುತ್ತೇವೆ. ಅಮೆರಿಕದಿಂದಲೂ ನಮ್ಮ ಟ್ರಸ್ಟ್‌ಗೆ ಹಣ ಸಂದಾಯ ಆಗಿದೆ. ಆ ಹಣವನ್ನು ಲೋನ್ ಮೂಲಕ ನಿಮಗೆ ಕೊಡುತ್ತೇವೆ. ₹10 ಲಕ್ಷ ಸಾಲ ಪಡೆದರೆ ₹5 ಲಕ್ಷ ಮಾತ್ರ ವಾಪಸ್ ಕಟ್ಟಿದರೆ ಸಾಕು. ₹5 ಲಕ್ಷ ನಿಮಗೆ ಸಬ್ಸಿಡಿಯಾಗಿ ಸಿಗುತ್ತದೆ. ಆದರೆ, ನೀವು ಲೋನ್ ಪಡೆಯಬೇಕು ಎಂದರೆ ಮುಂಚಿತವಾಗಿ ಹಣ ಕಟ್ಟಬೇಕು ಎಂದು ನಂಬಿಸಿ ನಯವಂಚಕರ ತಂಡ ಹಣ ಪಡೆದು ವಂಚಿಸಿದೆ ಎಂದು ದೂರಲಾಗಿದೆ.

ಮಹಿಳೆಯರನ್ನು ಕೇಂದ್ರೀಕರಿಸಿ ಕಾರ್ಯಾಚರಿಸಿದ ವಂಚಕರ ತಂಡ ನೂರಾರು ಮಹಿಳೆಯರಿಂದ ಈ ರೀತಿ ಹಣ ವಸೂಲಿ ಮಾಡಿದೆ. ಅಲ್ಲದೇ, ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ. 2019ರಿಂದ ನಿರಂತರವಾಗಿ ಐದು ಸಾವಿರದಿಂದ ಇಪ್ಪತ್ತೈದು ಸಾವಿರ ರೂ.ವರೆಗೆ ಮಹಿಳೆಯರು ಈ ಟ್ರಸ್ಟ್‌ಗೆ ಹಣ ಕಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಪ್ರೀತಿಸಿದ ಯುವತಿಗೆ ಮತ್ತೊಬ್ಬನೊಂದಿಗೆ ವಿವಾಹೇತರ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ತಿಂಗಳುಗಳು ಕಳೆದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಳಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಈಕೆ ವಂಚನೆ ಮಾಡಿದ್ದು, ನೂರಾರು ಮಂದಿಗೆ ಮಹಿಳೆ ವಂಚಿಸಿದ್ದಾಳೆ.

ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಆಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆನೇಕಲ್, ಚಂದಾಪುರ, ಸೂರ್ಯನಗರ, ಹೊಸಕೋಟೆ, ಅತ್ತಿಬೆಲೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...