‘ನಾಸೀರ್ ಸಾಬ್ ಜಿಂದಾಬಾದ್’ ಘೋಷಣೆ ತಿರುಚಿದ ಬಿಜೆಪಿ; ಆದರೂ, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್‌

Date:

ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ನ ಅಜಯ್‌ ಮಾಕನ್‌, ಸೈಯದ್‌ ನಾಸಿರ್‌ ಹುಸೇನ್‌, ಜಿ.ಸಿ.ಚಂದ್ರಶೇಖರ್‌ ಮತ್ತು ಬಿಜೆಪಿಯ ನಾರಾಯಣ ಭಾಂಡಗೆ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿದ ಬಳಿಕ ಮಂಗಳವಾರ ವಿಧಾನಸೌಧದಲ್ಲಿ ಸೈಯದ್‌ ನಾಸೀರ್‌ ಹುಸೇನ್‌ ಬೆಂಬಲಿಗರು ಎನ್ನಲಾದ ವ್ಯಕ್ತಿಯೊಬ್ಬರು ‘ನಾಸೀರ್ ಸಾಬ್ ಜಿಂದಾಬಾದ್‘ ಎಂದು ಕೂಗಿದ್ದ ಘೋಷಣೆಯನ್ನು ಬಿಜೆಪಿ ಮತ್ತು ಕೆಲ ಮಾಧ್ಯಮಗಳು ‘ಪಾಕ್‌ ಪರ‘ ಘೋಷಣೆಯೆಂದು ತಿರುಚಿ, ಸುಳ್ಳು ಹಬ್ಬಿಸುತ್ತಿವೆ. ಕಾಂಗ್ರೆಸ್‌ ನಾಯಕರು ಈ ಬಗ್ಗೆ ಸ್ಪಷ್ಟನೆ, ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೂ, ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

- Advertisement -

ಘೋಷಣೆಯನ್ನು ತಿರುಚಿ, ಸುಳ್ಳು ಹಬ್ಬಿಸುತ್ತಿದ್ದರೂ, ‘ಪಾಕ್ ಪರ ಘೋಷಣೆ’ ಕೂಗಲಾಗಿದೆಯೆಂದು ವಿಧಾನಸೌಧ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಸೆಕ್ಷನ್‌ 505(1)(B), 153B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ಘೋಷಣೆ ಕೂಗಿದವರ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಒಂದು ತಂಡ ತಾಂತ್ರಿಕ ಮಾಹಿತಿ ಅಧರಿಸಿ ಪತ್ತೆ ಕಾರ್ಯದಲ್ಲಿ ತೊಡಗಿದೆ. ಮತ್ತೊಂದು ತಂಡ ವಿಧಾನಸೌಧಕ್ಕೆ ನಾಸೀರ್‌ ಹುಸೇನ್ ಜತೆಗೆ ಬಂದವರ ಮಾಹಿತಿ ಸಂಗ್ರಹಿಸಲು ಮುಂದಾಗಿದೆ. ಇನ್ನೊಂದು ತಂಡ ಘಟನೆಯ ವಿಡಿಯೋ ಪರಿಶೀಲಿಸಿ ಅಪರಿಚಿತ ಆರೋಪಿಯ ಪತ್ತೆಗೆ ಹುಡುಕಾಟ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆ ಬೆದರಿಸಿ ಹಣ ಸುಲಿಗೆ ಮಾಡಿದ್ದ ನಾಲ್ವರು ಸಂಚಾರ ಪೊಲೀಸರ ಅಮಾನತು

ಕೇಂದ್ರ ವಿಭಾಗದ ಡಿಸಿಪಿ ಶೇಖ‌ರ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖಾಧಿಕಾರಿಯಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಸಿರ್ ಹುಸೇನ್, “ಆ ರೀತಿ ಘೋಷಣೆ ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ. ನಾನು ಅಲ್ಲಿದ್ದ ವೇಳೆ ನನಗೆ ಕೇಳಿಸಿಲ್ಲ. ಆ ರೀತಿ ಘೋಷಣೆ ಕೂಗಿದ್ದಲ್ಲಿ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...