ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ; ಕೆ.ಆರ್ ಪುರದಲ್ಲಿ 15 ದಿನಕ್ಕೊಮ್ಮೆ ಕಾವೇರಿ ನೀರು

Date:

Advertisements

ಅಕಾಲಿಕ ಮಳೆಯ ಹಿನ್ನೆಲೆ, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಮೂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಕೆ.ಆರ್‌ ಪುರ ವಿಧಾನಸಭಾ ಕ್ಷೇತ್ರದ ಹಲವೆಡೆ ನೀರಿನ ಕೊರತೆ ಎದುರಾಗಿದೆ. ಇತ್ತಕಡೆ ಅಂತರ್ಜಲ ಮಟ್ಟ ಕುಸಿದಿದ್ದರೇ, ಮತ್ತೊಂದೆಡೆ ಕಾವೇರಿ ನೀರು 15 ದಿನಕ್ಕೊಮ್ಮೆ ಬರುತ್ತಿದೆ.

ನೀರಿನ ಸಮಸ್ಯೆ ತಲೆದೂರಿದ ಬೆನ್ನಲ್ಲೇ, ಇತ್ತಕಡೆ ಟ್ಯಾಂಕರ್ ನೀರಿನ ದರ ದುಪ್ಪಟ್ಟಾಗಿದೆ. ನೀರಿನ ಸಮಸ್ಯೆಯಿಂದಾಗಿ ಹಲವು ಜನ ಬಾಡಿಗೆದಾರರಿಗೆ ಸಮಸ್ಯೆ ಎದುರಾಗಿದೆ.

ನೀರಿನ ಕೊರತೆಯಿಂದಾಗಿ ಬಾಡಿಗೆದಾರರಿಗೆ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಅಲ್ಲದೇ, ಅಂತರ್ಜಲ ಕುಸಿದು ಕೊಳವೆ ಬತ್ತಿದ ಮನೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಿದೆ. ಇಂತಹ ಸಮಯದಲ್ಲಿ ಹೆಚ್ಚಿನ ಹಣ ಖರ್ಚು ಮಾಡಿ ಟ್ಯಾಂಕರ್ ನೀರು ಹಾಕಿಸಿಕೊಳ್ಳುವಂತಹ ಸ್ಥಿತಿ ಇದೆ. ಇದೀಗ, ಟ್ಯಾಂಕರ್ ಬೆಲೆ ₹500-₹900 ವರೆಗೂ ಇದ್ದು, ಎರಡು, ಮೂರು ಮನೆ ಬಾಡಿಗೆ ಕೊಟ್ಟ ಮಾಲೀಕರು ಎರಡು ದಿನಕ್ಕೊಮ್ಮೆ ಟ್ಯಾಂಕರ್‌ ನೀರು ಹಾಕಿಸಬೇಕಾಗಿದೆ. ಹೀಗಾಗಿ, ಹೆಚ್ಚಿನ ಹಣ ನೀಡಲು ಮನೆಯ ಮಾಲೀಕರು ಬಾಡಿಗೆದಾರರಿಗೆ ತಿಳಿಸುತ್ತಿದ್ದಾರೆ. ಅಲ್ಲದೇ, ನೀರಿನ ಸಮಸ್ಯೆಯಿಂದ ಇದ್ದ ಮನೆ ಖಾಲಿ ಮಾಡಿ ಬೇರೆ ಪ್ರದೇಶಗಳಿಗೆ ಜನರು ತೆರಳುತ್ತಿದ್ದಾರೆ.

Advertisements

ಬೆಂಗಳೂರಿನ ಎಚ್‌ಎಎಲ್‌, ವಿಜ್ಞಾನ ನಗರ, ವಿಜಿನಾಪುರ, ಕೆ.ಆರ್‌.ಪುರ, ದೇವಸಂದ್ರ, ಎ.ನಾರಾಯಣಪುರದ, ರಾಮಮೂರ್ತಿ ನಗರ, ಹೊರಮಾವು ಸೇರಿದಂತೆ ನಾನಾಕಡೆ ಕಾವೇರಿ ನೀರಿನ ಸಮಸ್ಯೆ ಇದೆ.

ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಖ್ಯೆ ಹೆಚ್ಚಿದೆ. ಟ್ಯಾಂಕರ್‌ ನೀರು ದುಬಾರಿಯಾಗಿರುವ ಹಿನ್ನೆಲೆ, ವಸತಿ ಸಮುಚ್ಚಯಗಳಲ್ಲಿ ಮೆಂಟೇನೆನ್ಸ್‌ ದರ ಹೆಚ್ಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಗರಬತ್ತಿ ಕಂಟೈನರ್‌ನಲ್ಲಿ ₹17 ಲಕ್ಷ ಮೌಲ್ಯದ ಚಿನ್ನದ ತುಂಡು ಕಳ್ಳಸಾಗಣೆ

“ನೀರಿನ ಸಮಸ್ಯೆ ತುಂಬಾ ಹೆಚ್ಚಳವಾಗಿದೆ. ಕಾವೇರಿ ನೀರು ಸರ್ಮಪಕವಾಗಿ ಪೂರೈಕೆಯಾಗುತ್ತಿಲ್ಲ. 15 ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಸ್ವಲ್ಪ ಸಮಯವೇ ನೀರನ್ನು ಬಿಡುತ್ತಿದ್ದಾರೆ. ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಕೊಳವೆ ಬಾವಿ 1,200 ಅಡಿ ಕೊರೆದರು ನೀರು ಸಿಗುತ್ತಿಲ್ಲ. ಹೀಗಾಗಿ, ಎಲ್ಲ ವಾರ್ಡ್‌ಗಳಲ್ಲೂ ಜನರು ಟ್ಯಾಂಕರ್‌ ನೀರನ್ನು ಅವಲಂಬಿಸುವಂತಾಗಿದೆ” ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X