ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

Date:

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. “ನೇಹಾ ಆತನೊಂದಿಗೆ ಮಾತನಾಡಲು ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಆರೋಪಿ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ” ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ. 

- Advertisement -

ನೇಹಾ ಹಿರೇಮಠ ಹತ್ಯೆ ಪ್ರಕರಣ ಕರ್ನಾಟಕ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ. ಸಿನಿಮಾ ರಂಗದ ನಟ, ನಟಿಯರು ಸೇರಿದಂತೆ ಇಡೀ ರಾಜ್ಯದ ಜನತೆ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೊಲೆ ಆರೋಪಿ ಫಯಾಜ್‌ನನ್ನು ಬಂಧಿಸಿರುವ ಪೊಲೀಸರು ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದ ಸಿಬ್ಬಂದಿ ಎದುರು ಆರೋಪಿ ಕೊಲೆ ವಿಚಾರ ಬಾಯಿಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

“ಒಂದು ವಾರದಿಂದ ನೇಹಾ ಜತೆಗೆ ಮಾತನಾಡಿಸಲು ಪ್ರಯತ್ನಿಸಿದೆ. ಆದರೆ, ನೇಹಾ ನನ್ನ ಜತೆಗೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡುತ್ತಿದ್ದಳು. ಬಿವಿಬಿ ಕಾಲೇಜಿಗೆ ಏ.18 ರಂದು ಅವಳು ಪರೀಕ್ಷೆ ಬರೆಯಲು ಬಂದಿದ್ದಳು. ಆಗ ನಾನು ಮತ್ತೆ ಕಾಲೇಜಿಗೆ ಹೋದೆ, ನೇಹಾ ಪರೀಕ್ಷೆ ಮುಗಿಯುವವರೆಗೂ ಕಾದೆ. ಅವಳು ಹೊರಗಡೆ ಬಂದ ಬಳಿಕ ಮಾತನಾಡಿಸಲು ಪ್ರಯತ್ನಿಸಿದೆ. ಆದರೆ, ಅವಳು ಮಾತನಾಡುವುದಿಲ್ಲ ಎಂದಳು. ಹಾಗಾಗಿ, ಅವಳಿಗೆ ಚಾಕುವಿನಿಂದ ಚುಚ್ಚಿದೆ” ಎಂದು ಕಾರಾಗೃಹ ಸಿಬ್ಬಂದಿಗೆ ಫಯಾಜ್​ ಹೇಳಿಕೊಂಡಿದ್ದಾನೆ ಎಂದು ‘ಟಿವಿ9’ ವರದಿ ಮಾಡಿದೆ. 

“ನೇಹಾಳಿಗೆ ಚಾಕು ಹಾಕುವ ಸಮಯದಲ್ಲಿ ನನ್ನ ಎರಡು ಕೈ ಬೆರಳು ಮತ್ತು ಕಾಲಿಗೆ ಗಾಯವಾಗಿದೆ. ಏನಾಗಿದೆ ಎಂಬ ಬಗ್ಗೆ ಗೊತ್ತಿಲ್ಲ” ಎಂದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಪಕ್ಷ ಸೂಚಿಸಿದರೇ ಕುಮಾರಸ್ವಾಮಿ ಪರ ಪ್ರಚಾರ: ಸುಮಲತಾ ಅಂಬರೀಶ್

ಏ.18ರಂದು ಮಧ್ಯಾಹ್ನ ಆರೋಪಿ ಫಯಾಜ್ ಕಾಲೇಜಿನ ಕ್ಯಾಂಪಸ್‌ ಒಳಗೆ ನುಗ್ಗಿ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಗೆ ಚಾಕುವಿನಿಂದ ಹತ್ತಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದನು.

ಆರೋಪಿ ಫಯಾಜ್ (23) ಮೊದಲ ವರ್ಷದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (ಎಂಸಿಎ) ವಿದ್ಯಾರ್ಥಿಯಾಗಿದ್ದನು. ಚಾಕು ಮತ್ತು ಮಾಸ್ಕ್ ಧರಿಸಿ ಕಾಲೇಜು ಕ್ಯಾಂಪಸ್ ಒಳಗೆ ಹೋಗಿ ಮಧ್ಯಾಹ್ನ 3.30 ರ ಸುಮಾರಿಗೆ ನೇಹಾಳ ಎದೆ ಮತ್ತು ಕುತ್ತಿಗೆಗೆ ಹಲವು ಬಾರಿ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಎಂಸಿಎ ಬಿಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...