ಈ ಹಿಂದೆ ಸತತ ಮೂರು ವರ್ಷಗಳ ಕಾಲ ಕೊರೊನಾ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಈ ಸೋಂಕು ಹಲವು ಜನರನ್ನು ಬಾಧಿಸಿತ್ತು. ಇದೀಗ, ಚೇತರಿಸಿಕೊಂಡು ಸಾಮಾನ್ಯ ಜೀವನದತ್ತ ಮರಳಿದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು, ಚೀನಾದಲ್ಲಿ ಹೊಸ ಮಾದರಿಯ ಸೋಂಕೊಂದು ಪತ್ತೆಯಾಗಿದೆ. ಈ ಹಿನ್ನೆಲೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ.
ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಲವು ಸೂಚನೆ ನೀಡಲಾಗಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು, 5 ರಿಂದ 7 ದಿನ ದೇಹದಲ್ಲಿರುತ್ತದೆ.
ಈ ಸುದ್ದಿ ಓದಿದ್ದೀರಾ? ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ
ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
- ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು.
- ಸಾಬೂನು ಮತ್ತು ನೀರಿನಿಂದ ಆಗಾಗ ಕೈ ತೊಳೆಯಬೇಕು.
- ಕಣ್ಣು, ಮೂಗು, ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸಿಕೊಳ್ಳಬಾರದು.
- ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ, ಹೋಗುವುದಾದರೆ ಮಾಸ್ಕ್ ಬಳಸಬೇಕು.
- ನಿದ್ದೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ, ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು.
- ಸಾಕಷ್ಟು ನೀರು, ಪೌಷ್ಟಿಕ ಆಹಾರ ಸೇವಿಸಬೇಕು.
- ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು
- ಇನ್ ಫ್ಲುಯೆಂಜಾ ಇತರೆ ಉಸಿರಾಟ ಕಾಯಿಲೆಗಳ ಹೆಚ್ಚಿನ ಸಂಭವ ಇರುವ ಸ್ಥಳಗಳಿಗೆ ಹೋಗಬೇಡಿ.
- ರೋಗಲಕ್ಷಣ ಉಲ್ಬಣಗೊಂಡರೆ ಸಮೀಪದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ.
- ವೈದ್ಯರನ್ನು ಸಂಪರ್ಕಿಸದೆ ಸ್ವಯಂ ಔಷಧಿಗಳನ್ನು ತೆಗೆದುಕೊಳ್ಳಬೇಡಿ