ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ : ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ

Date:

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ನ್ಯುಮೋನಿಯಾ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಭಾರತದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸನ್ನದ್ಧತೆಯ ಕುರಿತು ತಕ್ಷಣವೇ ಪರಿಶೀಲನೆ ನಡೆಸುವಂತೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಜತೆಗೆ, ಕರ್ನಾಟಕ ಸೇರಿದಂತೆ ಒಟ್ಟು ಆರು ರಾಜ್ಯಗಳಿಗೆ ಅಲರ್ಟ್‌ ಆಗಿರುವಂತೆ ಸೂಚಿಸಿದೆ.

ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಹರಿಯಾಣ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ. ಹಾಗೆಯೇ, ರಾಜ್ಯಗಳಲ್ಲಿ ಎಲ್ಲ ಆರೋಗ್ಯ ಮೂಲಸೌಕರ್ಯಗಳನ್ನು ಪರಿಶೀಲನೆ ಮಾಡಿ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ಕ್ರಮವಹಿಸುವಂತೆ ತಿಳಿಸಿದೆ. ರಾಜ್ಯಗಳು ಎಲ್ಲ ರೀತಿಯ ಪರೀಕ್ಷೆಗೂ ಸಿದ್ದತೆ ಮಾಡಿಕೊಳ್ಳವಂತೆ ಹೇಳಿದೆ.

ಕರ್ನಾಟಕ ರಾಜ್ಯ ಸರ್ಕಾರ ಈ ಸೋಂಕಿನ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುತ್ತಿದ್ದು, ಈ ಸೋಂಕಿನ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದಲ್ಲಿ ಯಾವುದೇ ಆತಂಕದ ಸ್ಥಿತಿ ಇಲ್ಲ. ಆದರೂ ವೈದ್ಯಕೀಯ ಸಿಬ್ಬಂದಿ ಜಾಗರೂಕರಾಗಿರಿ, ಮಕ್ಕಳ ಮತ್ತು ಔಷಧಿ ವಿಭಾಗಗಳಲ್ಲಿ ಸಾಕಷ್ಟು ವ್ಯವಸ್ಥೆ ಮಾಡಬೇಕು ಎಂದು ರಾಜಸ್ಥಾನ ಆರೋಗ್ಯ ಇಲಾಖೆ ಹೇಳಿದೆ.

ಈ ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಗುಜರಾತ್ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇನ್ನು ಉತ್ತರಾಖಂಡದ ಮೂರು ಜಿಲ್ಲೆಗಳಾದ ಚಮೋಲಿ, ಉತ್ತರಕಾಶಿ ಹಾಗೂ ಪಿಥೋರಗಢ ಚೀನಾದೊಂದಿಗೆ ಗಡಿ ಹಂಚಿಕೊಂಡಿವೆ. ಹಾಗಾಗಿ, ಉಸಿರಾಟ ಖಾಯಿಲೆಗಳ ಪ್ರಕರಣಗಳಿಗೆ ಹೆಚ್ಚು ಕಣ್ಗಾವಲು ವಹಿಸುವಂತೆ ಉತ್ತರಾಖಂಡ ಆರೋಗ್ಯ ಇಲಾಖೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಅಸಾಧಾರಣ ಕಾಯಿಲೆಗಳು ಕಂಡುಬಂದರೂ, ಅದನ್ನು ತಕ್ಷಣವೇ ವರದಿ ಮಾಡಬೇಕು ಎಂದು ಹರಿಯಾಣ ಆರೋಗ್ಯ ಇಲಾಖೆ ತಿಳಿಸಿದೆ.

ಸೋಂಕಿನ ಹಿನ್ನೆಲೆ, ಆಸ್ಪತ್ರೆಗಳು ಸಿದ್ಧತೆಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಮಿಳುನಾಡು ಆರೋಗ್ಯ ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

2032ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ಗಾತ್ರ: ಎಂ ಬಿ ಪಾಟೀಲ್‌ ಭರವಸೆ

ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ...

ಗುತ್ತಿಗೆದಾರರಿಂದ ಐದು ಪೈಸೆ ಲಂಚ ಪಡೆದಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್...

ಕಡಬ | ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ; ಕಿಡಗೇಡಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಮುಸುಕುದಾರಿ ಯುವಕನೊಬ್ಬ...