ಹೊಸ ವರ್ಷಾಚರಣೆ | ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ: ಆಯುಕ್ತ ಬಿ.ದಯಾನಂದ್

Date:

Advertisements

2023 ಕಳೆದು 2024ರ ಹೊಸ ವರ್ಷಕ್ಕೆ ಹೆಜ್ಜೆ ಇಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ರಾಜಧಾನಿ ಜನರು ಕಾತರದಿಂದ ಕಾಯುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ನಗರದ ಬ್ರಿಗೇಡ್ ರೋಡ್‌ನಲ್ಲಿ ₹14 ಲಕ್ಷ ವೆಚ್ಚದಲ್ಲಿ ವಿಶೇಷವಾಗಿ ದೀಪಾಲಂಕಾರ ಮಾಡಲಾಗುತ್ತಿದೆ. ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸರು ಸನ್ನದ್ಧರಾಗಿದ್ದು, ಈ ಬಾರಿ ರಾತ್ರಿ 1 ಗಂಟೆಯವರೆಗೆ ಹೊಸ ವರ್ಷಾಚರಣೆ ಸಂಭ್ರಮಿಸಲು ಅವಕಾಶ ನೀಡಲಾಗಿದೆ

ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಮಾರ್ಗಸೂಚಿ ಬಿಡುಗಡೆ ಮಾಡಿದ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಅವರು, “ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಹೊಸ ವರ್ಷದ ದಿನ ರಾತ್ರಿ 1 ವರೆಗೂ ಕ್ಲಬ್‌ಗಳಿಗೆ ಅವಕಾಶ ನೀಡಲಾಗಿದೆ. ರಾತ್ರಿ 12 ಗಂಟೆವರೆಗೂ ವೈನ್ ಶಾಪ್​ಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

“ಇನ್ನು ಸಂಭ್ರಮಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಭದ್ರತೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ. ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 45 ಎಸಿಪಿ, 160 ಪಿಐ, 600 ಸಬ್​​ಇನ್ಸ್​​ಪೆಕ್ಟರ್​​ಗಳು, 600 ಎಎಸ್​​ಐ, 1800 ಹೆಡ್​ಕಾನ್ಸ್​ಟೆಬಲ್ಸ್​, 5,200 ಕಾನ್ಸ್​ಟೆಬಲ್​​ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗುವುದು. ಸಿವಿಲ್​​ ಡ್ರೆಸ್​​ಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ” ಎಂದು ತಿಳಿಸಿದರು.

Advertisements

“ಬೆಂಗಳೂರಿನ ವಿಮಾನ ನಿಲ್ದಾಣದ ರಸ್ತೆ ಹೊರತುಪಡಿಸಿ, ಉಳಿದ ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ಜತೆಗೆ ಡ್ರೋನ್ ಕ್ಯಾಮರಾ ಕಾರ್ಯಾಚರಣೆ ನಡೆಯಲಿದೆ. ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆಗಳಲ್ಲಿ ಹೆಚ್ಚಿನ ಭದ್ರತೆ ನೀಡಲಾಗುತ್ತದೆ” ಎಂದರು.

“ಬಿಬಿಎಂಪಿ, ಮೆಟ್ರೋ, ಬಿಎಂಟಿಸಿ, ಅಬಕಾರಿ, ಆರೋಗ್ಯ ಇಲಾಖೆ, ಅಗ್ನಿಶಾಮಕ, ಮಾಲಿನ್ಯ ನಿಯಂತ್ರಣ ಮಂಡಳಿ, ಬಿಎಂಆರ್​ಸಿಎಲ್, ಬೆಸ್ಕಾಂ ಜತೆಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ, ಫಿನಿಕ್ಸ್ ಮಾಲ್, ಕ್ಲಬ್​ಗಳ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಮಾಡಲಾಗುತ್ತದೆ. ಮಹಿಳೆಯರ ಸುರಕ್ಷತೆಗಾಗಿ ಸೇಫ್ ಟೀಂ ಐಲ್ಯಾಂಡ್​ಗಳ ಸ್ಥಾಪಿಸಲಾಗುತ್ತಿದೆ” ಎಂದು ಹೇಳಿದರು.

“ಇನ್ನು ನಗರದ ಮೇಲ್ಸೇವೆಗಳ​ ಮೇಲೆ ವೇಗವಾಗಿ ವಾಹನ ಚಲಾಯಿಸುವುದು. ವ್ಹೀಲಿಂಗ್​ ಮಾಡುವುದನ್ನು ತಡೆಗಟ್ಟಲು ಎಲ್ಲ ಮೇಲ್ಸೇತುವೆ​ಗಳನ್ನು ಹೊಸ ವರ್ಷಾಚರಣೆಯ ದಿನದಂದು ಸಾಯಂಕಾಲ 6ರಿಂದ ಬೆಳಗ್ಗೆ 6ವರೆಗೆ ಬಂದ್ ಮಾಡಲಿದ್ದೇವೆ” ಎಂದು ಮಾಹಿತಿ ನೀಡಿದರು.

“ಈಗಾಗಲೇ, ಹೊಸ ವರ್ಷಾಚರಣೆಯ ಹಿನ್ನೆಲೆ, ಡ್ರಗ್ಸ್‌ ಮಾರಾಟ ಮಾಡಲು ಬೇರೆ ದೇಶಗಳಿಂದ ಆಮದು ಮಾಡಿಕೊಂಡ ಡ್ರಗ್ಸ್‌ಗಳನ್ನು ಸೀಜ್ ಮಾಡಲಾಗಿದೆ. ಡ್ರಗ್ಸ್ ಉಪಟಳಕ್ಕೆ ಕಡಿವಾಣ ಹಾಕಲು ನಗರದಾದ್ಯಂತ ಒಂದು ವಾರದಿಂದ ನಿರಂತರ ಪರಿಶೀಲನೆ ನಡೆಯುತ್ತಿದೆ. ಸಿಸಿಬಿ ಅಧಿಕಾರಿಗಳು ಮಾದಕ ವಸ್ತು ಸಂಗ್ರಹಿಸಿದ್ದ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕ ಲಿಕ್ಕರ್ ಶೇಖರಣೆ, ಅನಧಿಕೃತ ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದೇವೆ. ಆಯಕಟ್ಟಿನ ಪ್ರದೇಶದಗಳಲ್ಲಿ ಪೊಲೀಸ್ ಚೌಕಿಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? 2024ರ ಜನವರಿಯಲ್ಲಿ ಎಷ್ಟು ದಿನ ಬ್ಯಾಂಕ್‌ಗೆ ರಜೆ: ಇಲ್ಲಿದೆ ನೋಡಿ

“ಮಕ್ಕಳು ಕಾಣೆಯಾದರೆ ಕಳವು ಬಗ್ಗೆ ಮಾಹಿತಿ ನೀಡಲು ಪೊಲೀಸ್ ಕಿಯೋಸ್ಕ್​ಗಳು ಇರಲಿವೆ. ಸೂಕ್ತ ಕಣ್ಗಾವಲು ಪ್ರದೇಶದಲ್ಲಿ ವಾಚ್ ಟವರ್‌ಗಳ ನಿರ್ಮಾಣ, ಬೈನಾಕುಲರ್ ಮೂಲಕ ವೀಕ್ಷಣೆ ಮಾಡಲಾಗುತ್ತದೆ. ನಗರಾದ್ಯಂತ 10 ಸಾವಿರಕ್ಕೂ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಹೋಂ ಗಾರ್ಡ್​ಗಳನ್ನು ಸಹ ನಿಯೋಜನೆ ಮಾಡಲಾಗುತ್ತದೆ” ಎಂದು ತಿಳಿಸಿದರು.

“48 ನಾಕಾಬಂದಿಗಳನ್ನ ಮಾಡಲಾಗಿದೆ. ವ್ಹೀಲಿಂಗ್ ಹಾಗೂ ಡ್ರ್ಯಾಗ್ ರೇಸಿಂಗ್’ಗೆ ಕಡಿವಾಣ ಹಾಕಲು ಸಿದ್ಧತೆ ಮಾಡಲಾಗಿದೆ. 48 ಕಡೆಗಳಲ್ಲಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ. ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧವಿದ್ದು, ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಇದೆ. ಇದರಿಂದ ಮನೆಗೆ ಹೋಗಲು ಅನುಕೂಲವಾಗುತ್ತದೆ. ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ ವ್ಯವಸ್ಥೆ ಇರಲಿದೆ” ಎಂದು ಬಿ.ದಯಾನಂದ್  ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X