- ಬೆಂಗಳೂರಿನ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ ದಾಳಿ
- ದಿಢೀರ್ ದಾಳಿ ವೇಳೆ ಎಂಟು ಮಂದಿಯನ್ನು ವಶಕ್ಕೆ ಪಡೆದ ಎನ್‌ಐಎ
ಉದ್ಯಾನ ನಗರಿ ಬೆಂಗಳೂರಿನ ಹಲವೆಡೆ ದೊಡ್ಡ ಮಟ್ಟದಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಹಲವೆಡೆ ದಿಢೀರ್ ದಾಳಿ ನಡೆಸಿ ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಅಕ್ರಮವಾಗಿ ಬಾಂಗ್ಲಾ ವಲಸಿಗರು ನೆಲೆ ಕಂಡುಕೊಳ್ಳತೊಡಗಿದ್ದು ಅವರಿಗೆ ಬೇಕಾದ ದಾಖಲೆಗಳನ್ನು ಒದಗಿಸಲು ಕೆಲವರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಎನ್‌ಐಎ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.
ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ನಿನ್ನೆ ರಾತ್ರಿ ದಾಳಿ ಮಾಡಿ ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಇನ್ನಿತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ಎನ್ಐಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಎಕಕಾಲದಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?