ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್. ನಿಜಲಿಂಗಪ್ಪನವರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಿಜಲಿಂಗಪ್ಪನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್. ನಿಜಲಿಂಗಪ್ಪನವರು ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ನಿಜಲಿಂಗಪ್ಪನವರು ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಾಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

Advertisements

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

ಕಾಂಗ್ರೆಸ್‌ನವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ

ಜಾರ್ಖಂಡ್ ಸಂಸದರ ಮನೆಯಲ್ಲಿ ಐಟಿ ದಾಳಿಯಾಗಿ ಹಣ ದೊರೆತಿದ್ದು, ಅಲ್ಪಸಂಖ್ಯಾತರಿಗೆ ಆರ್ಥಿಕ ಸೌಲಭ್ಯವಿಲ್ಲವೆನ್ನುವ ಕಾಂಗ್ರೆಸ್‌ನವರ ಮನೆಯಲ್ಲಿಯೇ ಅಪಾರ ಹಣ ದೊರೆಯುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನುರೀತ್ಯ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು. ಆದರೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಪಕ್ಷದವರ ಮೇಲೆ ಐಟಿದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದರು.

ಈ ಸಂದರ್ಭದಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X