ರಾಜ್ಯ ಬಿಜೆಪಿಯಲ್ಲಿ ಒಳಜಗಳ, ಬಂಡಾಯ, ಆಂತಿರಿಕ ಬಿಕ್ಕಟ್ಟು ಮುನ್ನೆಲೆಯಲ್ಲಿದೆ. ಬಿಜೆಪಿ ಹೈಕಮಾಂಡ್ ಎಷ್ಟೇ ಪ್ರಯತ್ನಿಸಿದರೂ, ನೋಟಿಸ್ ಕೊಟ್ಟರು ಆಂತರಿಕ ಬಿಕ್ಕಟ್ಟಿಗೆ ‘ಫುಲ್ ಸ್ಟಾಪ್’ ಬಿದ್ದಿಲ್ಲ. ಅಲ್ಲದೆ, ನಾಯಕತ್ವ ಬದಲಾವಣೆ, ಯತ್ನಾಳ್ ಉಚ್ಚಾಟನೆಯ ಕುರಿತು ಊಹಾಪೋಹ, ವದಂತಿ, ಗುಸು-ಗುಸು ಚರ್ಚೆಗಳು ನಡೆಯುತ್ತಿವೆ. ಇದೆಲ್ಲದರ ನಡುವೆ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯೂ ನಡೆದಿದೆ. ಸದ್ಯ, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಜೊತೆಗೆ, ಬಿಜೆಪಿ ಶಾಸಕರಾದ ಎಸ್.ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡಲು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ.
ಶನಿವಾರ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆದಿದೆ. ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಸಂಸದ ಗೋವಿಂದ್ ಕಾರಜೋಳ, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಭಾಗವಹಸಿದ್ದರು. ಸಭೆಯಲ್ಲಿ, “ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾಣವೆ ಇಲ್ಲ. ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳನ್ನು ಪಕ್ಷವು ವಿಜಯೇಂದ್ರ ನೇತೃತ್ವದಲ್ಲಿಯೇ ಎದುರಿಸಲಿದೆ” ಎಂದು ಮೋಹನ್ ದಾಸ್ ಅಗರ್ವಾಲ್ ಹೇಳಿರುವುದಾಗಿ ತಿಳಿದುಬಂದಿದೆ.
ಅಲ್ಲದೆ, ಪಕ್ಷದ ಸಿದ್ಧಾಂತಕ್ಕೆ ಬದ್ದರಾಗಿ ಎಲ್ಲರೂ ಕೆಲಸ ಮಾಡಬೇಕು. ಪಕ್ಷವನ್ನು ಬಪಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರಿಗೆ ಸೂಚನೆ ನೀಡಲು ಸಭೆಯು ತೀರ್ಮಾನಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ, ತಮ್ಮದೇ ಬಣ ಕಟ್ಟಿಕೊಂಡಿರುವ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ಬಂದ ಬಳಿಕ ಕ್ರಮ ಕೈಗೊಳ್ಳವುದಾಗಿಯೂ ನಿರ್ಧರಿಸಿದೆ ಎಂದು ವರದಿಯಾಗಿದೆ.
ಈ ವರದಿ ಓದಿದ್ದೀರಾ?: ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಆಗ್ರಹ
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಗರ್ವಾಲ್, “ಮುಂದಿನ ವರ್ಷ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಪಕ್ಷವು ಪ್ರಬಲವಾಗಿ ಎದುರಿಸಲಿದೆ. ನಾವು ಕರ್ನಾಟಕದಲ್ಲಿ 71 ಲಕ್ಷ ಕಾರ್ಯಕರ್ತರನ್ನು ಹೊಂದಿದ್ದೇವೆ. ರಾಜ್ಯದಲ್ಲಿ ಯತ್ನಾಳ್ ವರ್ಸಸ್ ವಿಜಯೇಂದ್ರ ಆಥವಾ ಯತ್ನಾಳ್ ವರ್ಸಸ್ ಬಿಜೆಪಿ ಎಂಬುದೇನೂ ಇಲ್ಲ” ಎಂದು ಹೇಳಿದ್ದಾರೆ.
“ಕೆಲ ನಾಯಕರು ಅಶಿಸ್ತಿನಿಂದ ವರ್ತಿಸುತ್ತಿದ್ದಾರೆ. ಅವರಿಗೆ ಕಡಿವಾಣ ಹಾಕುವ ಬಗ್ಗೆ ಚರ್ಚಿಸಲಾಗಿದೆ, ಕಳೆದ ಕೆಲವು ತಿಂಗಳಿಂದ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಅಮಾನತು ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲು ನಿರ್ಧರಿಸಿದ್ದೇವೆ” ಎಂದು ವಿಜಯೇಂದ್ರ ಹೇಳಿದ್ದಾರೆ.
ಅಧಿಕಾರ ಇಲ್ಲದೆ ಹಂಚಿಕೊಳ್ಳಲು ಏನೂ ಇಲ್ಲ ಆದರೂ ಇಷ್ಟು ಕಿತ್ತಾಡತವ್ರೆ,, ಇನ್ನು ಅಧಿಕಾರದಲ್ಲಿ ಇದ್ದರೆ ಎಷ್ಟು ಕಿತ್ತಾಟ ಮಾಡಬಹುದು,,, ಕೂಸು ಚೂಟಿ ಅಳಲು ಹಚ್ಚಿ,, ಪಕ್ಷದಲ್ಲಿ ಒಗ್ಗಟ್ಟು ಇದೆಯೆಂದು ಪುಂಗಿ ಊದತವ್ರಲ್ಲಾ,,,ಜನರ ಕಿವಿಗೆ ಹೂ