ಇತ್ತೀಚೆಗೆ, ರಾಜ್ಯ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸೇವೆಗಳಿಗೆ ನೀಡಿದ್ದ ಆದೇಶವನ್ನು ಹಿಂಪಡೆದಿತ್ತು. ಈ ಬಗ್ಗೆ ರ‍್ಯಾಪಿಡೋ ಕಂಪನಿಯೂ, ”ಸರ್ಕಾರ ಹಿಂಪಡೆದಿರುವುದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಆದೇಶವನ್ನು, ಈ ಆದೇಶವು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ” ಎಂದು ಹೇಳಿದೆ.
ರ‍್ಯಾಪಿಡೋ ಹೈಕೋರ್ಟ್ ಆದೇಶದ ಪ್ರಕಾರ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ, ರಾಜ್ಯ ಸರ್ಕಾರದ ಆದೇಶ ಅನ್ವಯವಾಗುವುದಿಲ್ಲ. ರಾಜ್ಯ ಸರ್ಕಾರದ ಆದೇಶವು ಕೇವಲ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಮಾತ್ರ ಸಂಬಂಧಿಸಿದೆ. ಇದು ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಅನ್ವಯವಾಗುವುದಿಲ್ಲ. ಹಾಗಾಗಿ, ರ‍್ಯಾಪಿಡೋ ಸೇವೆ ಯಥಾಪ್ರಕಾರ ಮುಂದುವರೆಯಲಿದೆ ಎಂದು ಹೇಳಿದೆ.
ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್ ಅವರು ಮಾರ್ಚ್ 6 ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು; ಸರ್ಕಾರ ಆದೇಶ
ಸಾರ್ವಜನಿಕ ಸಾರಿಗೆಗಾಗಿ ಹಾಗೂ ಸ್ವಯಂ ಉದ್ಯೋಗಾವಕಾಶ ಕೊಡುವ ಉದ್ದೇಶದಿಂದ 2021ರಲ್ಲಿ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ ಜಾರಿ ಮಾಡಲಾಗಿತ್ತು. ಈಗಾಗಲೇ ಓಲಾ, ಉಬರ್, ರ‍್ಯಾಪಿಡೋದಿಂದ ಬೈಕ್ ಸೇವೆ ಚಾಲನೆಯಲ್ಲಿತ್ತು.