ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಮುಂದಿನ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ. ಈ ವರ್ಷ ಮಾತ್ರ ಗ್ರೇಸ್‌ ಮಾರ್ಕ್ಸ್ ಕೊಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಕೊಟ್ಟಿರುವ ಗ್ರೇಸ್‌ ಮಾರ್ಕ್ಸ್‌ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ” ಎಂದು ತಿಳಿಸಿದ್ದಾರೆ.

- Advertisement -

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನೀಡಿದ 20% ಗ್ರೇಸ್ ಅಂಕಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ರಾಜ್ಯಾದ್ಯಂತ ತೀವ್ರ ಚರ್ಚೆಯಾದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಿಎಂ ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 20%ರಷ್ಟು ಗ್ರೇಸ್ ಮಾರ್ಕ್ಸ್‌ ನೀಡಿದರ ಬಗ್ಗೆ ಚರ್ಚೆ ನಡೆಸಲಾಗಿದೆ. ಯಾರನ್ನ ಕೇಳಿ ಹೆಚ್ಚುವರಿ ಅಂಕ ಕೊಟ್ಟಿದ್ದೀರಾ? ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಸಲ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿದೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗ್ರೇಸ್ ಮಾರ್ಕ್ಸ್ ಕೊಡೋದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹೀಗಾಗಿ, ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಮೇ 17ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಕೊಂಡರು. ಈ ಹಿನ್ನೆಲೆ, ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

“ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೂ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ 20% ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರಲ್ಲ. ಇನ್ನು ಮುಂದೆ ಹಿಂದಿನ ಪದ್ಧತಿಯೇ ಮುಂದುವರಿಯಲಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಪರೀಕ್ಷಾ ನಡವಳಿಕೆ ಸರಿ ಮಾಡಲು ಮುಂದಾಗಿದ್ದೆವು. ಈ ವರ್ಷ ಮಾತ್ರ ಗ್ರೇಸ್ ಮಾರ್ಕ್ಸ್ ಕೊಡುವ ತೀರ್ಮಾನ ಮಾಡಲಾಗಿತ್ತು. ಯಾವಾಗಲೂ 5% ಗ್ರೇಸ್ ಅಂಕ ಇರ್ತಿತ್ತು. ಕೋವಿಡ್ ವೇಳೆ 10% ಮಾಡಲಾಗಿತ್ತು. ಇದೀಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಪಾಸಾಗುವಂತೆ ಮಾಡಲು 20% ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದು ಈ ವರ್ಷಕ್ಕೆ ಯಾವ ಸಮಸ್ಯೆ ಇಲ್ಲ. ಮುಂದಿನ ವರ್ಷದಿಂದ ಇದು ಇರಲ್ಲ” ಎಂದು ತಿಳಿಸಿದ್ದಾರೆ.

ಗ್ರೇಸ್ ನೀಡುವ ಪದ್ಧತಿಯು ಅತ್ಯಂತ ಹಾಸ್ಯಾಸ್ಪದ

“ರಾಜ್ಯದಾದ್ಯಂತ ಈ ಗ್ರೇಸ್ ನೀಡಿ ಪ್ರಕಟಿಸಿರುವ ಫಲಿತಾಂಶ ಪ್ರಶ್ನಾರ್ಹವಾಗಿದೆ ಮತ್ತು ತಾರತಮ್ಯದಿಂದ ಕೂಡಿದೆ.  ಗಡಿನಾಡು ಅನ್ಯ ಭಾಷಾ ವಿದ್ಯಾರ್ಥಿಗಳು ಮತ್ತು ಹಿಂದುಳಿದ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತುಂಬಲಾರದ ನಷ್ಟವಾಗಿದೆ. ಹೀಗಾಗಿ, ಈ ಗ್ರೇಸ್ ನೀಡುವ ಪದ್ಧತಿಯು ಅತ್ಯಂತ ಹಾಸ್ಯಾಸ್ಪದವಾಗಿದೆ” ಎಂದು ಅಭಿವೃಧ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ .ವಿ.ಪಿ ಹೇಳಿದ್ದಾರೆ.

“ಇಷ್ಟಕ್ಕೂ ಶೈಕ್ಷಣಿಕ ಗುಣಮಟ್ಟವು  ಕೇವಲ ಮೌಲ್ಯಮಾಪನದಿಂದ ಕಂಡುಕೊಳ್ಳುವುದಲ್ಲ. ಶಾಲಾ ಶೈಕ್ಷಣಿಕ ಮೂಲಸೌಕರ್ಯದ ನಿಟ್ಟಿನಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತದೆ. ಎಷ್ಟು ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಇದೆ. ಖಾಯಂ ಶಿಕ್ಷಕರಿರಬೇಕಾದ ಜಾಗದಲ್ಲಿ ಸುಮಾರು 35 ಸಾವಿರ ಅತಿಥಿ ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಣವು ದಿನದಿಂದ ದಿನಕ್ಕೆ ಸೊರಗುತ್ತಿದೆ. ಹೀಗಿರುವಾಗ, ಮಂಡಳಿಯ ಪರೀಕ್ಷಾ ಮೌಲ್ಯಮಾಪನ ಪದ್ಧತಿ, ತೇರ್ಗಡೆಯ ನಿಯಮಗಳು ಹಾಗೂ ಈ ಗ್ರೇಸ್ ನೀಡುವಂತಹ ವಿಧಾನವು ಅನ್ಯಾಯದ ಪರಮಾವಧಿಯಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ಕನ್ನಡ ನಾಶ : ರಮೇಶ್‌ ಬೆಳ್ಳಮ್ಕೊಂಡ

“ಶಿಕ್ಷಣ ಇಲಾಖೆಯ ಈ ಹೆಗ್ಗಳಿಕೆ ರಾಜ್ಯದಲ್ಲಿ ಕಲಿಕಾ ಬಿಕ್ಕಟ್ಟಿನ ಉದ್ದ ಆಳ ಅಗಲವನ್ನು ಪ್ರತಿಬಿಂಬಿಸುತ್ತದೆ. ಇದು ಸಂತೋಷಪಡುವುದಕ್ಕಿಂತ ನಾಚಿಕೆಯಿಂದ ತಲೆ ತಗ್ಗಿಸುವ ವಿಷಯ” ಎಂದಿದ್ದಾರೆ.

“ಈ ಬಾರಿಯ ಶೇಕಡ ಫಲಿತಾಂಶ 54% ಕ್ಕಿಂತ ಕಡಿಮೆ ದಾಖಲಿಸಿದ ಕಾರಣ, ಪರೀಕ್ಷಾ ಮಂಡಳಿಯು ಗ್ರೇಸ್ ಅಂಕಗಳನ್ನು ನೀಡಿ ಫಲಿತಾಂಶವನ್ನು ಏರಿಸಿದೆ.  ಮೊದಲನೆಯದಾಗಿ ಈ ಗ್ರೇಸ್ ಏಕೆ? ಈ ನಿರ್ದೇಶನ ನೀಡಿದವರು ಯಾರು? ತಮ್ಮ ಗಮನಕ್ಕೆ ಬಂದಿತ್ತೆ? ಒಂದು ಕ್ಷಣ  ಗ್ರೇಸ್ ಒಪ್ಪುವುದಾದರು, ಅದರಲ್ಲಿ ತಾರತಮ್ಯ ಏಕೆ?  ಈ ನಿಯಮದ ಬಗ್ಗೆ ಸಮಾಜಕ್ಕೆ, ಪೋಷಕರಿಗೆ  ಮತ್ತು ವಿದ್ಯಾರ್ಥಿಗಳಿಗೆ ಇಲಾಖೆ ತಿಳಿಸಿತ್ತೆ? ಇದು ನ್ಯಾಯ ಸಮ್ಮತವೇ?  ಎಂಬ ಎಲ್ಲ ಪ್ರಶ್ನೆಗಳು ಸಹಜವಾಗಿಯೇ ಮೂಡುತ್ತವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವೈಚಾರಿಕ ತಳಹದಿಯ ಚರ್ಚೆಗೆ ಸದಾ ಸ್ವಾಗತವಿದೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...