ಕಾನೂನು ಗೌರವಿಸದ ಪೊಲೀಸ್ ಅಧಿಕಾರಿಗೆ ಸಹಾನುಭೂತಿ ಇಲ್ಲ: ಹೈಕೋರ್ಟ್

Date:

ನ್ಯಾಯಾಲಯ ನೀಡಿದ ಆದೇಶವನ್ನು ಗೌರವಿಸದೆ, ಆರೋಪಿಗೆ ನೀಡಲಾದ ಜಾಮೀನಿನ ಪ್ರತಿ ಹರಿದು, ನ್ಯಾಯಧೀಶರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯದ ಸಹಾನುಭೂತಿ ಇಲ್ಲ. ಇನ್ಸ್‌ಪೆಕ್ಟರ್‌ ಹರೀಶ್‌ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲಾಗದು ಎಂದು ಹೈಕೋರ್ಟ್‌ ಹೇಳಿದೆ.

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ನಾರಾಯಣಸ್ವಾಮಿ ಅವರು ಇನ್ಸ್‌ಪೆಕ್ಟರ್‌ ಹರೀಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ತಮ್ಮ ವಿರುದ್ಧ ಮೊಕದ್ದಮೆಯನ್ನು ಪ್ರಶ್ನಿಸಿ ಹರೀಶ್ ಅವರು 2021ರ ಜುಲೈ 30ರಂದು ಆನೇಕಲ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರು ಹರೀಶ್ ಅವರ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಏನಿದು ಪ್ರಕರಣ?
ಸಬ್ ಇನ್ಸ್‌ಪೆಕ್ಟರ್ ಹರೀಶ್ 2021ರಲ್ಲಿ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದರು. 2021ರ ಜುಲೈ 10ರಂದು ಪ್ರಕರಣವೊಂದರ ವಿಚಾರಣೆಗಾಗಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ನಾರಾಯಣಸ್ವಾಮಿ ಅವರನ್ನು ಹುಳಿಮಾವು ಪೊಲೀಸ್ ಠಾಣೆಗೆ ಇನ್ಸ್‌ಪೆಕ್ಟರ್ ಕರೆದೊಯ್ದಿದ್ದರು. ಬಳಿಕ, ಅವರನ್ನು ಬಂಧಿಸಿ, ಕೋರಮಂಗಲದಲ್ಲಿರುವ ಡಿಸಿಪಿ ಕಚೇರಿಗೆ ಕರೆತಂದಿದ್ದರು. ಅಲ್ಲಿ, ನ್ಯಾಯಾಲಯದ ಜಾಮೀನಿನ ಮೇಲೆ ನಾರಾಯಣಸ್ವಾಮಿ ಅವರನ್ನು ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅದೇ ದಿನ ಸಂಜೆ 4 ಗಂಟೆ ಸುಮಾರಿಗೆ ನನ್ನನ್ನು ಬಂಧಿಸಲು ಹರೀಶ್ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಡಿಸಿಪಿ ಕಚೇರಿಗೆ ಬಂದರು. ಸರ್ಜಾಪುರ ಪೊಲೀಸರು ದಾಖಲಿಸಿರುವ ಅಪರಾಧ ಪ್ರಕರಣದಲ್ಲಿ ದೂರುದಾರರಿಗೆ ಈಗಾಗಲೇ, ನಿರೀಕ್ಷಣಾ ಜಾಮೀನು ನೀಡಿರುವ ಬಗ್ಗೆ ವಕೀಲರು ಇನ್ಸ್‌ಪೆಕ್ಟರ್‌ ಹರೀಶ್‌ಗೆ ಮಾಹಿತಿ ನೀಡಿದರು. ಆದರೆ, ಜಾಮೀನು ಆದೇಶದ ಪ್ರತಿಯನ್ನು ಸ್ವೀಕರಿಸಿದ ಹರೀಶ್, ಅದನ್ನು ಹರಿದು ನೆಲದ ಮೇಲೆ ಎಸೆದಿದ್ದಾರೆ. ಅಲ್ಲದೇ, ತಮ್ಮ ಠಾಣೆಗೆ ನ್ಯಾಯಾಧೀಶರು ಎಂದು ಹೇಳಿಕೆ ನೀಡಿದ್ದಾರೆ. ಜಾಮೀನು ನೀಡಿದ ನ್ಯಾಯಾಧೀಶರನ್ನು ಅಸಭ್ಯ ಭಾಷೆಯಲ್ಲಿ ನಿಂದಿಸಿದ್ದಾರೆ. ದೂರುದಾರರಿಗೆ ತಾವು ಜಾಮೀನು ನೀಡಬೇಕೆ, ಹೊರತು ಯಾವುದೇ ನ್ಯಾಯಾಲಯವಲ್ಲ” ಎಂದು ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ: ಬೆಂಬಲ ಕೋರಿ ‘ಜಾಗೃತ ಕರ್ನಾಟಕ’ಕ್ಕೆ ಪತ್ರ

ದೂರುದಾರರನ್ನು ಠಾಣೆಗೆ ಕರೆದುಕೊಂಡು ಹೋಗಿ ರಿವಾಲ್ವರ್‌ನಿಂದ ಬೆದರಿಸಿ ‘ಎನ್‌ಕೌಂಟರ್‌’ನಲ್ಲಿ ಮುಗಿಸಿ ಶವವನ್ನು ಹೂಳುವುದಾಗಿ ಬೆದರಿಕೆ ಹಾಕಿದ್ದಾರೆ.

ಇದೇ ವೇಳೆ, ಸ್ಥಳದಲ್ಲಿದ್ದ ಇಬ್ಬರು ವಕೀಲರು ಹರೀಶ್ ಅವರ ವರ್ತನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಆರೋಪಿ ಪೊಲೀಸ್ ಅಧಿಕಾರಿ ನ್ಯಾಯಾಲಯದ ವಿರುದ್ಧ ಅಸಭ್ಯವಾಗಿ ವರ್ತಿಸಿದ ಘಟನೆಗೆ ಪ್ರತ್ಯಕ್ಷದರ್ಶಿಗಳು ಮತ್ತು ದೂರುದಾರ ನಾರಾಯಣಸ್ವಾಮಿ ಅವರಾಗಿದ್ದಾರೆ. ಹಾಗಾಗಿ, ಅರ್ಜಿದಾರರು ವಿಚಾರಣೆಗೆ ಹೋಗಬೇಕಾಗುತ್ತದೆ ಎಂದು ನ್ಯಾಯಾಲಯವು ಹೇಳಿದೆ.

ಆರೋಪಿಗೆ ನೀಡಲಾದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು ನೆಲದ ಮೇಲೆ ಎಸೆದು, ಜಾಮೀನು ನೀಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

“ಅರ್ಜಿದಾರರು ಪೊಲೀಸ್ ಅಧಿಕಾರಿಯಾಗಿ ನ್ಯಾಯಾಲಯದ ಆದೇಶವನ್ನು ದೂಷಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು ಹರಿದು ಹಾಕಿದ್ದಾರೆ ಮತ್ತು ಅದನ್ನು ನೆಲದ ಮೇಲೆ ಎಸೆದು ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿದ್ದಾರೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ಹೊಲಸು ಭಾಷೆಯಲ್ಲಿ ನಿಂದಿಸಿದ್ದಾರೆ. ಅಂತಹ ಪೋಲೀಸ್ ಅಧಿಕಾರಿಯನ್ನು ಕಾನೂನು ಪ್ರಕಾರ ವಿಚಾರಣೆಗೆ ಒಳಪಡಿಸಿ ಶಿಕ್ಷಿಸಲಾಗುವುದು. ಪೊಲೀಸ್ ಇಲಾಖೆಯು ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಬೇಕು. ಕಾನೂನಿನ ಬಗ್ಗೆ ಗೌರವವಿಲ್ಲದ ಇಂತಹ ವ್ಯಕ್ತಿಗೆ ನ್ಯಾಯಾಲಯವು ಯಾವುದೇ ಸಹಾನುಭೂತಿ ತೋರಿಸಲು ಸಾಧ್ಯವಿಲ್ಲ. ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಇದು ಯೋಗ್ಯವಾದ ಪ್ರಕರಣವಲ್ಲ” ಎಂದು ನ್ಯಾಯಮೂರ್ತಿ ಕೆ.ನಟರಾಜನ್ ಅವರು ಹರೀಶ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...