ಬೆಂಗಳೂರಿನಲ್ಲಿ ಮಳೆಯ ಅಬ್ಬರ: ಹಲವು ಬಡಾವಣೆಗಳು ಜಲಾವೃತ, ವಾಹನ ಸವಾರರ ಪರದಾಟ

Date:

Advertisements

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಸೋಮವಾರದಿಂದ (ನ.06) ಸುರಿಯುತ್ತಿರುವ ಮಳೆಗೆ ಉದ್ಯಾನ ನಗರಿ ಬೆಂಗಳೂರು ತತ್ತರಿಸಿದೆ.

ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನವೇ ಜೋರು ಮಳೆ ಶುರುವಾಯಿತು. ಬೈಯ್ಯಪ್ಪನಹಳ್ಳಿ ರಸ್ತೆಯಲ್ಲಿ ಒಂದು ಅಡಿಗೂ ಹೆಚ್ಚು ನೀರು ನಿಂತು ಸವಾರರು ಪರದಾಡಿದರು. ಯಲಹಂಕ ಕೆರೆ ಕೋಡಿ ಬಿದ್ದು ಕೋಗಿಲು ಸರ್ಕಲ್, ಕೇಂದ್ರೀಯ ಅಪಾರ್ಟ್‍ಮೆಂಟ್, ಏರ್‌ಪೋರ್ಟ್ ರೋಡ್ ಜಲಾವೃತವಾಗಿದೆ. ಹಲವು ಕಾರುಗಳು ಮುಳುಗಡೆ ಆಗಿವೆ.

ಕುರುಬರಹಳ್ಳಿಯ ತಗ್ಗುಪ್ರದೇಶದಲ್ಲಿರುವ ಮನೆಗಳು ಜಲಾವೃತವಾಗಿ ಜನರು ತೊಂದರೆ ಅನುಭವಿಸಿದ್ದಾರೆ. ಮಾಗಡಿ ರಸ್ತೆ ಜಿಟಿ ಮಾಲ್ ಬಳಿಯ ರಾಜಕಾಲುವೆಯ ನೀರು ಮನೆಗಳಿಗೆ ನುಗ್ಗಿದೆ. ಮೈಸೂರು ರಸ್ತೆಯ ಗಾಳಿ ಆಂಜನೇಯ ದೇಗುಲದ ಆವರಣ ಎಂದಿನಂತೆ ಮೋರಿ ನೀರಿಂದ ತುಂಬಿಹೋಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ತನಿಖಾ ಸಂಸ್ಥೆಗಳಿಂದ ಸರ್ಕಾರ ನಡೆಸಲು ಸಾಧ್ಯವಾಗದು; ಪತ್ರಿಕಾ ಸ್ವಾತಂತ್ರ್ಯದ ಪರ ಸುಪ್ರೀಂ ಬ್ಯಾಟಿಂಗ್

ಯಲಹಂಕದಲ್ಲಿ ಗರಿಷ್ಠ 164 ಮಿಲಿಮೀಟರ್ ಮಳೆ ಆಗಿದೆ. ರಾಜ್ಯದ ವಿವಿಧೆಡೆಯೂ ಭಾರೀ ಮಳೆ ಆಗಿದೆ. ಕಡೂರಿನ ಮಚ್ಚೇರಿಯಲ್ಲಿ ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಚನ್ನಗಿರಿಯ ದೊಡ್ಡಟ್ಟಿ ಬಳಿ ತುಂಬಿ ಹರಿದ ಹಳ್ಳ ದಾಟುವ ದುಸ್ಸಾಹಸ ಮಾಡಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕರೊಬ್ಬರನ್ನು ರಕ್ಷಿಸಲಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಮಳೆ

ಮಂಡ್ಯದ ಕೆ ಆರ್ ಪೇಟೆ ಬಸ್ ನಿಲ್ದಾಣ ಜಲಾವೃತವಾಗಿದೆ. ಮಂಡ್ಯದ ಹುಲಿಕೆರೆ ಬಳಿ ವಿಸಿ ನಾಲೆಯ ಸುರಂಗ ಕುಸಿದಿದ್ದು, ಮನೆಯೊಂದು ಅಪಾಯದ ಅಂಚಿನಲ್ಲಿದೆ. ತುಮಕೂರಿನ ಹಲವು ರಸ್ತೆಗಳು ಕೆರೆಯಂತಾಗಿದೆ. ಕೊಪ್ಪಳ, ಮಡಿಕೇರಿ ಸೇರಿ ಹಲವೆಡೆ ಬೆಳೆ ಹಾನಿ ಸಂಭವಿಸಿದೆ.

ರಾಮನಗರದ ಚಾಕನಹಳ್ಳಿಯಲ್ಲಿ 166 ಮಿಲಿಮೀಟರ್, ಮೈಸೂರು ನಗರದಲ್ಲಿ 148 ಮಿಲಿಮೀಟರ್, ಕೋಲಾರದ ಚೌಡೇನಹಳ್ಳಿಯಲ್ಲಿ 135 ಮಿಲಿಮೀಟರ್, ಮಂಡ್ಯದ ಮಲ್ಲಿಗೆರೆಯಲ್ಲಿ 134 ಮಿಲಿಮೀಟರ್, ಚಿಕ್ಕಬಳ್ಳಾಪುರದ ಗೆದರೆಯಲ್ಲಿ 130 ಮಿಲಿಮೀಟರ್, ತುಮಕೂರಿನ ತಿಮ್ಲಾಪುರದಲ್ಲಿ 128 ಮಿಲಿಮೀಟರ್ ಮಳೆಯಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ್ದು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಭಾಗ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.7 ರಿಂದ ನವೆಂಬರ್‌ 9ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ.

ಈ ಸುದ್ದಿ ಓದಿದ್ದೀರಾ? ದೆಹಲಿ ವಾಯು ಮಾಲಿನ್ಯ: 4 ರಾಜ್ಯಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರೀಂ ಆದೇಶ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X