ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

Date:

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

“ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಲು ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಆ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಗಿದ್ದು, ಅದಕ್ಕೆ ಎಲ್ಲ ಸಂಸ್ಥೆಗಳು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಆಯಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತಪ್ಪದೆ ಮತ ಚಲಾಯಿಸಲು ಅರಿವು ಮೂಡಿಸುವ ಕೆಲಸ ಮಾಡಲು ತಿಳಿಸಲಾಗಿದೆ” ಎಂದರು.

“ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಹಬ್ ಇದ್ದು, ಲಕ್ಷಾಂತರ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗರದಲ್ಲಿ ಹೆಚ್ಚು ಐಟಿ-ಬಿಟಿ ಸಂಸ್ಥೆಗಳಿರುವ ಕಡೆ ಹಾಗೂ ಕಡಿಮೆ ಮತದಾನವಾಗಿರುವ ಸಂಸ್ಥೆಗಳಲ್ಲಿ ಹೆಚ್ಚಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲು ತಿಳಿಸಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಐಟಿ-ಬಿಟಿ ಸಂಸ್ಥೆಗಳಲ್ಲಿ ಹೆಚ್.ಆರ್.ಎಂ.ಎಸ್ ವ್ಯವಸ್ಥೆಯಿದ್ದು, ಆ ಮೂಲಕ ಸಿಬ್ಬಂದಿಗಳಿಗೆ ತಪ್ಪದೆ ಮತದಾನ ಮಾಡಲು ಸಂದೇಶ ಕಳುಹಿಸುವ, ಎಲ್ಲ ಭಾಷೆಯನ್ನೊಳಗೊಂಡ ‘ಮೈ ಭಾರತ್ ಹೂ’ ಚುನಾವಣಾ ಗೀತೆ ಹಾಗೂ ಇನ್ನಿತರೆ ಜಾಗೃತಿ ಸಂದೇಶಗಳ ದೃಶ್ಯಾವಳಿಗಳನ್ನು ಎಲ್ಲ ಸಂಸ್ಥೆಗಳ ಎಲ್‌ಇಡಿ ಪರದೆಗಳಲ್ಲಿ ಹಾಕಲು ಸೂಚಿಸಲಾಗಿದೆ” ಎಂದು ಹೇಳಿದರು.

“ಸಾಕಷ್ಟು ಸಿಬ್ಬಂದಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಬೇರೆ ರಾಜ್ಯಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿ ಮತದಾನದ ಹಕ್ಕನ್ನು ಹೊಂದಿರುವುದಿಲ್ಲ. ಇನ್ನು ಕೆಲವರು ಮನೆಯಿಂದ ಕೆಲಸ ಮಾಡುತ್ತಿರುವ ಕಾರಣ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಸಾಧ್ಯವಾಗುವುದಿಲ್ಲ. ಅದಲ್ಲದೆ ಮತಗಟ್ಟೆಗಳಲ್ಲಿ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂಬ ಮನೋಭಾವವಿರುತ್ತದೆ. ಈ ಪೈಕಿ ಮತಗಟ್ಟೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಇರುವುದಾಗಿ ಮಾಹಿತಿ ನೀಡಲಾಗಿದ್ದು, ಈ ಬಾರಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಹೆಚ್ಚು ಮತದಾನವಾಗುವ ನಿರೀಕ್ಷೆಯಿದೆ” ಎಂದು ತಿಳಿಸಿದರು.

ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿಯಾದ ಏಕ್ ರೂಪ್ ಕೌರ್ ರವರು ಮಾತನಾಡಿ, “ಲೋಕಸಭಾ ಚುನಾವಾಣೆ ಹಿನ್ನೆಲೆ ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಮತದಾನದ ಕುರಿತು ತಿಳುವಳಿಕೆಯನ್ನು ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

“ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲ ಸಂಸ್ಥೆಗಳಿಗೂ ಮತದಾನದ ದಿನವಾದ ಏಪ್ರಿಲ್ 26ರಂದು ರಜೆ ನೀಡಿ ಎಲ್ಲ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜೊತೆಗೆ ಎಲ್ಲ ಸಿಬ್ಬಂದಿಗಳಿಗೆ ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ” ಎಂದು ಹೇಳಿದರು.

ಸಿಬ್ಬಂದಿಗೆ ವೇತನ ಸಹಿತ ರಜೆ

“ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135ಬಿ ಅಡಿಯಲ್ಲಿ ಎಲ್ಲ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಸರ್ಕಾರವು ಮಾರ್ಚ್‌ 30ರಂದು ಅಧಿಸೂಚನೆ ಹೊರಡಿಸಿತದೆ. ಅಧಿಸೂಚನೆಯಂತೆ ಎಲ್ಲ ಐಟಿ-ಬಿಟಿ ಸಂಸ್ಥೆಗಳ ಸಿಬ್ಬಂದಿಗೆ ರಜೆ ನೀಡಬೇಕು” ಎಂದು ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆಗಾಲ ಶುರು: ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...