ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ 70 ಮರ ಕಡಿಯಲು ಮುಂದಾದ ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು

Date:

ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ ನಿಗದಿಪಡಿಸಲಾಗಿದ್ದ ಸ್ಥಳಗಳಲ್ಲಿರುವ ಸುಮಾರು 70 ಗಿಡ-ಮರಗಳನ್ನು ತೆರವುಗೊಳಿಸಲು ಆಸ್ಪತ್ರೆ ಅಧಿಕಾರಿಗಳು ಮುಂದಾಗಿರುವುದು ಖಂಡನೀಯ ಎಂದು ವೃಕ್ಷ ಬಚಾವೋ ಆಂದೋಲನ ಸಮಿತಿ ಮುಖ್ಯಸ್ಥ ಪರಿಸರ ಮಂಜು ಹೇಳಿದ್ದಾರೆ.

- Advertisement -

ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿ ಭಾಗಶಃ ಮುಕ್ತಾಯದ ಹಂತದಲ್ಲಿದೆ. ಸದರಿ ಕಾಮಗಾರಿಯೊಂದಿಗೆ ಅನುಮೋದನೆಯಾಗಿರುವ ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ ಸ್ಥಳ ನಿಗದಿಪಡಿಸಲಾಗಿದ್ದು, ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಗಿಡ-ಮರ ಇರುವುದರಿಂದ ಕಾಮಗಾರಿ ಪ್ರಾರಂಭಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಸದರಿ ಮರಗಳನ್ನು ತೆರವುಗೊಳಿಸಲು ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಲು ಸಹಕರಿಸಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು ಬಿಬಿಎಂಪಿ ಅರಣ್ಯ ಘಟಕದ ಉಪ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವೃಕ್ಷ ಬಚಾವೋ ಆಂದೋಲನ ಸಮಿತಿ ಮುಖ್ಯಸ್ಥ ಪರಿಸರ ಮಂಜು, “ಈ ಸಾರ್ವಜನಿಕ ಆಸ್ಪತ್ರೆ ಸ್ವಚ್ಛ ಗಾಳಿ ಮತ್ತು ಉತ್ತಮ ಪರಿಸರ ನೀಡುವ ತಾಣವಾಗಿದೆ. ಈ ಆಸ್ಪತ್ರೆಯಲ್ಲಿ 36 ಫಿಕಸ್ ಬೆಂಜಮಿನ್, 10 ಹೊಂಗೆಮರ, 10 ಮಹಾಗನಿ, 4 ಉವರ್ಸಿ, 10 ಟಬಿಬಿಯಾ ರೋಜ್, 5 ಬೂರುಗ ಇಂತಹ ಸುಮಾರು 70ಕ್ಕೂ ಹೆಚ್ಚು ಬಹು ಉಪಯೋಗಿ ವೃಕ್ಷಗಳನ್ನು ಕಡಿಯಲು ಮುಂದಾಗಿರುವುದು ಸರಿಯಲ್ಲ” ಎಂದು ಹೇಳಿದರು. ‌

ಈ ಸುದ್ದಿ ಓದಿದ್ದೀರಾ? ಬಿಟ್ ಕಾಯಿನ್ ಪ್ರಕರಣ | ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

“ಈ ಸ್ಥಳವನ್ನು ಸಾರ್ವಜನಿಕರ ವಿಶ್ರಾಂತಿಗಾಗಿ ಪಾರ್ಕಿಂಗ್‌ಗಾಗಿ ನಿಗದಿಪಡಿಸಬಹುದು. ಶವಾಗಾರ ಘಟಕ ನಿರ್ಮಾಣಕ್ಕೆ ಬೇರೆಡೆ ಸ್ಥಳ ನಿಗದಿ ಮಾಡಲಿ. ಇಲ್ಲಿನ ಮರಗಳನ್ನು ಯಾವುದೇ ಕಾರಣಕ್ಕೂ ಕಡಿಯಬಾರದು.‌ ನಾವು ಮರದ ಒಂದು ರೆಂಬೆ ಅಥವಾ ಕೊಂಬೆಯನ್ನು ಕಡಿಯಲು ಬಿಡುವುದಿಲ್ಲ. ದೊಡ್ಡ ಸಂಖ್ಯೆಯಲ್ಲಿ ವೃಕ್ಷ ಪ್ರೇಮಿಗಳಿಂದ ಚಳುವಳಿ ಮಾಡಿಯಾದರು ಮರಗಳ ಜೀವ ಉಳಿಸುತ್ತೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...