ಹುಬ್ಬಳಿ-ಧಾರವಾಡ ಪೂರ್ವ | ಗೊಂದಲ ಸೃಷ್ಟಿಸಿರುವ ಬಿಜೆಪಿ ಅಭ್ಯರ್ಥಿಯ ಜಾತಿ ದಾಖಲಾತಿ

Date:

  • ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಬೆಂಬಲಿತ ಅಭ್ಯರ್ಥಿ ಡಾ. ಕ್ರಾಂತಿಕಿರಣ
  • ಸರ್ಕಾರಿ ದಾಖಲೆಯಲ್ಲಿ ಒಕ್ಕಲಿಗ, ಟಿಕೆಟ್ ಕೊಟ್ಟಿರುವುದು ಮೀಸಲು ಕ್ಷೇತ್ರಕ್ಕೆ

ಧಾರವಾಡ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಐದು ಕ್ಷೇತ್ರದ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದು, ಹುಬ್ಬಳಿ-ಧಾರವಾಡ ಪೂರ್ವ ಎಸ್ಸಿ ಮೀಸಲು ಕ್ಷೇತ್ರಕ್ಕೆ ನರರೋಗ ತಜ್ಞ ಡಾ. ಕ್ರಾಂತಿ ಕಿರಣ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಆದರೆ, ಡಾ. ಕ್ರಾಂತಿಕಿರಣ ಅವರ ಜಾತಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ದಾಖಲೆಯೊಂದು ಗೊಂದಲ ಸೃಷ್ಟಿಸಿದೆ.

- Advertisement -

ಹುಬ್ಬಳಿ-ಧಾರವಾಡ ಪೂರ್ವ ಎಸ್ಸಿ ಮೀಸಲು ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷ ಒಕ್ಕಲಿಗ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಿತಾ? ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಾ. ಕ್ರಾಂತಿಕಿರಣ ಅವರ ಸರ್ಕಾರಿ ನೌಕರಿ ಮಾಹಿತಿ ಕುರಿತು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ನಿರ್ದೇಶಕರು ಸಹಿ ಮಾಡಿರುವ ದಾಖಲೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಡಾ. ಕ್ರಾಂತಿಕಿರಣ ಅವರ ಜಾತಿ ʼಒಕ್ಕಲಿಗʼ ಎಂದು ನಮೂದಾಗಿದೆ. ಇವರಿಗೆ ಟಿಕೆಟ್ ಕೊಡಿಸುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಸಕ್ತಿ ವಹಿಸಿದ್ದರು ಎನ್ನುವುದು ಕೂಡ ಚರ್ಚೆಯಾಗುತ್ತಿದೆ.

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡುವುದು ಜನಪ್ರತಿನಿಧಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದ್ದು, ಡಾ. ಕ್ರಾಂತಿ ಕಿರಣ ಅವರು ಒಕ್ಕಲಿಗರಾಗಿದ್ದುಕೊಂಡು ಅವರು ಹೇಗೆ ಎಸ್ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಜಾತಿ ದಾಖಲಾತಿ ಗೊಂದಲ ವಿಚಾರವಾಗಿ ಡಾ. ಕ್ರಾಂತಿಕಿರಣ ಅವರನ್ನು ಈ ದಿನ. ಕಾಮ್‌, “ನಾನು ಪರಿಶಿಷ್ಟ ಜಾತಿಗೆ ಸೇರಿದ್ದೇನೆ. ನನ್ನ ಜಾತಿ ಬಗ್ಗೆ ನನಗೆ ಯಾವುದೇ ಗೊಂದಲಗಳು ಇಲ್ಲ. ಇಂತಹದೊಂದು ನಕಲಿ ದಾಖಲಾತಿ ಹೇಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂಬುದು ನನಗೆ ಆಶ್ಚರ್ಯವಾಗಿದೆ. ನನ್ನ ಜಾತಿಯ ಬಗ್ಗೆ ಅನುಮಾನ ಇದ್ದವರು ಸರ್ಕಾರಿ ದಾಖಲಾತಿಗಳನ್ನು ಪರಿಶೀಲಿಸಬಹುದು” ಎಂದು ಸ್ಪಷ್ಟಪಡಿಸಿದರು.

ಹುಬ್ಬಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಗ್ಗೆ ಮಾತನಾಡುವುದಾದರೆ, ಛಲವಾದಿ ಸಮುದಾಯಕ್ಕೆ ಸೇರಿದ ಪ್ರಸಾದ ಅಬ್ಬಯ್ಯ 2013 ಮತ್ತು 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದಾರೆ. 2008ರಲ್ಲಿ ಬಿಜೆಪಿಯ ವೀರಭದ್ರಪ್ಪ ಹಾಲಹರವಿ (ಮಾದಿಗ ಜನಾಂಗ) ಅವರು ಗೆದ್ದು ಶಾಸಕರಾಗಿದ್ದರು. 2018ರಲ್ಲಿ ಬಿಜೆಪಿಯಿಂದ ಚಂದ್ರಶೇಖರ ಗೋಕಾಕ್ ಸ್ಪರ್ಧಿಸಿ ಸೋಲು ಕಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| 2023ರ ಐಟಿ ನಿಯಮಗಳು- ಅಭಿವ್ಯಕ್ತಿ ಸ್ವಾತಂತ್ರ್ಯ ಹಣಿಯುವ ಮತ್ತೊಂದು ಹುನ್ನಾರ?

ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರತಿನಿಧಿಸುವ ಸೆಂಟ್ರಲ್ ಹಾಗೂ ಕಲಘಟಗಿ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಳ್ಳಲಾಗಿದೆ. ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕರು ಇರುವ ಕುಂದಗೋಳ ಹಾಗೂ ಹುಬ್ಬಳಿ, ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಹುಬ್ಬಳಿ-ಧಾರವಾಡ ಸೆಂಟ್ರಲ್ ಹಾಗೂ ಕಲಘಟಗಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾಗಲೂ ಆ ಎರಡೂ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಸೆಸ್ಪೆನ್ಸ್ ಇಡಲಾಗಿದೆ.

ಹುಬ್ಬಳಿ, ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಬಿಜೆಪಿ ಹಾಲಿ ಶಾಸಕ ಅರವಿಂದ ಬೆಲ್ಲದ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಹಾಲಿ ಶಾಸಕ ಅಮೃತ ದೇಸಾಯಿ ಹಾಗೂ ನವಲಗುಂದ ಕ್ಷೇತ್ರಕ್ಕೆ ಹಾಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಕ್ಷೇತ್ರಕ್ಕೆ ಎಂ.ಆರ್.ಪಾಟೀಲ ಅವರ ಹೆಸರು ಅಂತಿಮಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...