ಡಿ.1ರಂದು ಮಂಡಲ್‌ ವರದಿ ಕುರಿತು ವಿಚಾರ ಸಂಕಿರಣ, ವಿ ಪಿ ಸಿಂಗ್‌ ಪ್ರಶಸ್ತಿ ಪ್ರದಾನ ಸಮಾರಂಭ

Date:

  • ಮಂಡಲ್‌ ವರದಿ ಆಗಿದ್ದೇನು? ಕುರಿತು ವಿಚಾರ ಸಂಕಿರಣ ಆಯೋಜನೆ
  • ಎಚ್‌ ಎಂ ರೇವಣ್ಣ, ವಿ ಆರ್‌ ಸುದರ್ಶನ್‌, ಎಚ್‌ ಆಂಜನೇಯ ಭಾಗಿ

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ಮಂಡಲ್‌ ವರದಿ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಡಿಸೆಂಬರ್‌ 1ರಂದು ಬೆಂಳಗೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ನಡೆಯಲಿದೆ.

ಇದೇ ವಿಚಾರ ಸಂಕಿರಣದಲ್ಲಿ ಡಾ. ಎಂ ಎಸ್‌ ಮಣಿ ಅವರ ‘ಗವಿಮಾರ್ಗ’ ಪುಸ್ತಕ ಬಿಡುಗಡೆ ಮತ್ತು ವಿ ಪಿ ಸಿಂಗ್‌ ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ನಡೆಯಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾಜಿ ಸಚಿವ ಎಚ್‌ ಎಂ ರೇವಣ್ಣ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ ಆರ್‌ ಸುದರ್ಶನ್‌ ಅವರು ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಎಚ್‌ ಆಂಜನೇಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ ಆರ್‌ ನೀಲಕಂಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಪ್ಪಿದ ಘೋರ ದುರಂತ- ಆಳುವವರ ಅಲಕ್ಷ್ಯ ಅಕ್ಷಮ್ಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಆದಿಜಾಂಬವ ಬೃಹನ್ಮಠದ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ ಅವರು ಗವಿ ಮಾರ್ಗ ಪುಸ್ತಕ ಕುರಿತು ಮಾತನಾಡಲಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ಮತ್ತು ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಡಾ. ಮನೋಹರ್ ಯಾದವ್ ಅವರು ವಿಷಯ ಮಂಡಿಸಲಿದ್ದಾರೆ. ಪ್ರಜಾಪ್ರಗತಿ ಕನ್ನಡ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ ಎಂ ರಾಮಚಂದ್ರಪ್ಪ ಅವರು ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.

ವಿ ಪಿ ಸಿಂಗ್ ಪ್ರಶಸ್ತಿ ಪುರಸ್ಕೃತರು

ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎಂ ಸಿದ್ದರಾಜು, ಟಿ ಎಸ್‌ ಆರ್‌ ಪ್ರಶಸ್ತಿ ಪುರಸ್ಕೃತ ಗಂಗಾಧರ ಮೊದಲಿಯಾರ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್‌ ಕಾಂತರಾಜ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್‌, ಜನಮನ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಗೌರವ ಅಧ್ಯಕ್ಷ ಬಿ ಕೆ ರವಿ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಲು ‘ಸಂವಾದ’ ಫೌಂಡೇಶನ್‌ಗೆ ಏನು ಆಸಕ್ತಿ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬಗ್ಗೆ ಖಾಸಗಿ ಎಫ್‌ಎಸ್‌ಎಲ್‌...

2032ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ಗಾತ್ರ: ಎಂ ಬಿ ಪಾಟೀಲ್‌ ಭರವಸೆ

ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ...

ಗುತ್ತಿಗೆದಾರರಿಂದ ಐದು ಪೈಸೆ ಲಂಚ ಪಡೆದಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್...