ಡಿ.25ರಂದು 125 ಮಂದಿಗೆ ಕೊರೋನಾ ಸೋಂಕು ದೃಢ : ಮೂವರು ಸಾವು

Date:

Advertisements

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಡಿ.25 ರಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನು 34 ಜನರಿಗೆ ಜೆಎನ್ 1 ರೂಪಾಂತರಿ ಕೊರೋನಾ ವೈರಸ್ ತಗುಲಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 125 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿ 94 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,089,587 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 436ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸೋಮವಾರ 3,155 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ 436 ಸಕ್ರಿಯ ಕೊರೋನಾ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 3.96 ರಷ್ಟು ಇದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ.

Advertisements

ದಕ್ಷಿಣ ಕನ್ನಡ 5, ಹಾಸನ 5, ಮೈಸೂರು 13, ಶಿವಮೊಗ್ಗ 2, ವಿಜಯಪುರ 2, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ವೈರಸ್ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ.

ಕೊರೋನಾ ರೂಪಾಂತರಿ ಜೆಎನ್ 1 ವೈರಸ್‌ನ 35 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಈ ಮೊದಲು ಕೇರಳದಲ್ಲಿ ಉಪತಳಿ ಪತ್ತೆಯಾಗಿತ್ತು. ಇದೀಗ ದೇಶದ ಕೆಲವು ರಾಜ್ಯಗಳಲ್ಲಿ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಚ್ಚು ಕೆಲಸ ಮಾಡು ಎಂದ ಸಹೋದ್ಯೋಗಿ ಕೊಲೆಗೈದ ಆರೋಪಿ ಬಂಧನ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆಯೂ ಏರಿಕೆ ಕಂಡಿದೆ. 36 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 36 ರಲ್ಲಿ 7 ಜನರು ಐಸಿಯುವಿನಲ್ಲಿದ್ದಾರೆ. 400 ಜನ ಹೋಮ್ ಐಸೊಲೇಷನ್‌ನಲ್ಲಿದ್ದಾರೆ.

ರಾಜ್ಯದಲ್ಲಿ 192 ಸೋಂಕಿತರ ಮಾದರಿಯನ್ನು ವಂಶವಾಹಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 60 ಮಾದರಿಗಳ ಫಲಿತಾಂಶ ಲಭ್ಯವಾಗಿದ್ದು, 34 ಮಂದಿಯಲ್ಲಿ ಹೊಸ ವೈರಾಣು ಜೆಎನ್ 1 ಪತ್ತೆಯಾಗಿದೆ. ಈ ಪೈಕಿ ಈಗಾಗಲೇ ಮೂರು ಮಂದಿ ಸಾವಿಗೀಡಾಗಿದ್ದು, ಉಳಿದ 31 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ...

Download Eedina App Android / iOS

X