ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

Date:

Advertisements

ಬೆಂಗಳೂರಿನ ಆನೇಕಲ್‌ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಹರ್ಷಿತ್ ಕೊಂಟಾಳ ಎಂದು ಗುರುತಿಸಲಾಗಿದೆ. ಈತ ಆನೇಕಲ್‌ನ ಅಲಯೆನ್ಸ್​ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದು,​ ಉತ್ತರಾಖಂಡದ ಹಾಲ್‌ಧ್ವನಿ ಎಂಬಲ್ಲಿನ ನಿವಾಸಿ ಎಂದು ತಿಳಿದು ಬಂದಿದೆ.

ಹರ್ಷಿತ್ ಫೆ.21ರಿಂದ ಕಾಣೆಯಾಗಿದ್ದನು. ಈ ಬಗ್ಗೆ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ, ಆನೇಕಲ್ ಬಳಿಯ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿ ಶವ ಸುಟ್ಟು ಹಾಕಿರುವ ರೀತಿಯಲ್ಲಿ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಮೃತದೇಹ ಪತ್ತೆಯಾಗಿರುವ ಬಗ್ಗೆ ಆನೇಕಲ್ ಠಾಣೆಗೆ ಮಾಹಿತಿ ನೀಡಿದ್ದಾರೆ.

Advertisements

ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಪಕ್ಕ ಕಾಲೇಜು ಬ್ಯಾಗ್​, ಮೊಬೈಲ್​ ದೊರೆತಿದೆ.

ಇದನ್ನು ಪರಿಶೀಲಿಸಿದಾಗ ಈತ ಗುಮ್ಮಳಾಪುರ ಹಾಸ್ಟೇಲ್ ನಿಂದ ಕಾಣೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಪೊಲೀಸರು ತನಿಖೆ ನಡೆಸಿದ್ದಾರೆ. ಫೆ.21ರಂದು ವಿದ್ಯಾರ್ಥಿ ಹಾಸ್ಟೆಲ್ ಹೊರಗಡೆ ಕಾಣಿಸಿಕೊಂಡ ಕೊನೆಯ ವಿಡಿಯೋ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯ; ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ ಕೊಲೆ

‘ಡ್ರಂಕ್ ಆಂಡ್ ಡ್ರೈವ್’ ನೆಪ ಹೇಳಿ ಹಣ ಪೀಕಿದ ಸಂಚಾರ ಪೊಲೀಸರು : ಆರೋಪ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಹೆಸರಿನಲ್ಲಿ ಫೆ.24ರಂದು ರಾತ್ರಿ ಮಹಿಳೆಯಿಂದ ಗೂಗಲ್‌ ಪೇ ಮೂಲಕ ಜೀವನ್ ಭೀಮಾ ನಗರ ಸಂಚಾರ ಠಾಣೆ ಪೊಲೀಸರು ಹಣ ಪಡೆದಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಫೆ.23ರ ರಾತ್ರಿ 11 ಗಂಟೆ ಸುಮಾರಿಗೆ ಮಹಿಳೆ ಬೈಕ್​ನಲ್ಲಿ ಬರುತ್ತಿದ್ದ ವೇಳೆ ಸಂಚಾರ ಪೊಲೀಸರು ತಪಾಸಣೆ ನಡೆಸದೆಯೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ, ಕುಡಿದು ವಾಹನ ಚಾಲನೆ ಮಾಡುತ್ತಿರುವುದಾಗಿ ಹೆದರಿಸಿದ್ದಾರೆ.

ಹಣ ಕೇಳಿದ ಪೊಲೀಸರು ಮೊದಲಿಗೆ ₹15 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಗೂಗಲ್ ಪೇ ಮೂಲಕ ₹5 ಸಾವಿರ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಈ ಕುರಿತು ಮಹಿಳೆಯ ತಂದೆ ಎಕ್ಸ್ ಆ್ಯಪ್ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X