ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಎಷ್ಟೇ ಕ್ರಮ ಕೈಗೊಂಡರು ಯುವಕರು ಮಾತ್ರ ಬುದ್ಧಿ ಕಲಿಯುತ್ತಿಲ್ಲ. ವ್ಹೀಲಿಂಗ್ ಮಾಡುತ್ತಿದ್ದ ಯುವಕನೊಬ್ಬ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆದರೂ, ಯುವಕರು ಈ ಹುಚ್ಚಾಟವನ್ನು ಮಾತ್ರ ನಿಲ್ಲಿಸುತ್ತಿಲ್ಲ. ಇದೀಗ, ಬೆಂಗಳೂರು ಸಂಚಾರ ಪೊಲೀಸರು ಕಳೆದ ಹದಿನೈದು ದಿನಗಳಿಂದ ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆ ನಡೆಸಿ, ಎಫ್‌ಐಆರ್‌ ದಾಖಲಿಸುತ್ತಿದ್ದಾರೆ.

- Advertisement -

ಬೆಂಗಳೂರಿನ ಸಂಚಾರ ಪೊಲೀಸರು ನಡೆಸುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ತನಿಖೆ ನಡೆಸಿ ಪ್ರಕರಣ ದಾಖಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಯುವಕರು ವ್ಹೀಲಿಂಗ್ ಮಾಡಿ ಅದಕ್ಕೊಂದು ಸಾಂಗ್ ಹಾಕಿ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾರೆ. ವ್ಹೀಲಿಂಗ್ ಮಾಡುವುದು ತಮಗೆ ಮತ್ತು ಸುತ್ತಮುತ್ತ ಜನಕ್ಕೆ ಅಪಾಯಕಾರಿ ಎಂದು ತಿಳಿದಿದ್ದರು. ಯುವಕರು ಕ್ರೇಜ್‌ಗೆಂದು ನಗರದ ಪ್ರಮುಖ ರಸ್ತೆಗಳಲ್ಲಿಯೂ ವ್ಹೀಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ, ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಬೆಂಗಳೂರಿನ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ಸ್‌ಪೆಕ್ಟರ್​ಗಳಿಗೆ ವ್ಹೀಲಿಂಗ್ ಕಂಟ್ರೋಲ್​ ಮಾಡಬೇಕೆಂದು ನಗರದ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸೂಚನೆ ನೀಡಿದ್ದಾರೆ.

ಸದ್ಯ ಕಳೆದ 15 ದಿನದಿಂದ ಕಾರ್ಯಾಚರಣೆ ಆರಂಭಿಸಿರುವ ಸಂಚಾರ ಪೊಲೀಸರು ನೈಸ್‌ ರಸ್ತೆ ಸೇರಿದಂತೆ ಹಲವೆಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೆಲವರ ವಿರುದ್ಧ ಪ್ರಕರಣ ದಾಖಲು ಮಾಡಿದರೇ, ಇನ್ನು ಕೆಲವರ ಬಳಿ ಬಾಂಡ್ ಬರೆಸಿಕೊಂಡು ಪೋಷಕರ ಎದುರಲ್ಲೇ ಎಚ್ಚರಿಕೆ ಕೊಟ್ಟು ಕಳುಹಿಸುತ್ತಿದ್ದಾರೆ.

ಫೆ.25 ರಂದು ಏರ್‌ಪೋರ್ಟ್, ಕೆ.ಜಿ.ಹಳ್ಳಿ ಮತ್ತು ಜೆ.ಬಿ.ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವವರನ್ನು ಪತ್ತೆ ಮಾಡಲು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಠಾಣಾ ವ್ಯಾಪ್ತಿಯ ಸುರಂಜನ್ ದಾಸ್ ರಸ್ತೆ, ಹೆಚ್.ಬಿ.ಆರ್ ಲೇಔಟ್ 80 ಅಡಿ ರಸ್ತೆ ಹಾಗೂ ನರೆಂದ್ರ ಟೆಂಟ್ ರಸ್ತೆಯಲ್ಲಿ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ವ್ಹೀಲಿಂಗ್ ಮಾಡುತ್ತಿದ್ದ ಐದು ದ್ವಿಚಕ್ರ ವಾಹನ ಮತ್ತು ಸವಾರರನ್ನು ಏರ್‌ಪೋರ್ಟ್, ಕೆ.ಜಿ.ಹಳ್ಳಿ ಮತ್ತು ಜೆ.ಬಿ.ನಗರ ಸಂಚಾರ ಠಾಣೆಯ ಪೊಲೀಸರು ಪತ್ತೆ ಮಾಡಿ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

“ವಿಚಾರಣೆ ವೇಳೆ, ವ್ಹೀಲಿಂಗ್ ಮಾಡುತ್ತಿದ್ದ ನಾಲ್ಕು ದ್ವಿಚಕ್ರ ವಾಹನ ಸವಾರರು ವಯಸ್ಕರಾಗಿದ್ದು, ಮತ್ತೊಬ್ಬ ದ್ವಿಚಕ್ರ ವಾಹನ ಸವಾರ ಅಪ್ರಾಪ್ತ ವಯಸ್ಕನಾಗಿದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ, ಸವಾರನ ಪೋಷಕರಿಗೆ ಅಥವಾ ವಾಹನ ಮಾಲೀಕರ ವಿರುದ್ದ ಪ್ರತ್ಯೇಕ ಒಟ್ಟು 5 ಪ್ರಥಮ ವರ್ತಮಾನ ವರದಿ (ಎಫ್‌ಐಆರ್‌) ಅನ್ನು ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ₹2.3 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ: ಪೊಲೀಸ್ ಆಯುಕ್ತ ದಯಾನಂದ

ಫೆ.26 ರಂದು ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಟರಾಯನಪುರ ಜಂಕ್ಷನ್ ಬಳಿ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರನನ್ನು ವಾಹನ ಸಮೇತ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇನ್ನು ಫೆ.24 ರಂದು ಬಾಣಸವಾಡಿ 100 ಅಡಿ ಮುಖ್ಯ ರಸ್ತೆಯಲ್ಲಿ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ವ್ಹೀಲಿಂಗ್ ಮಾಡುತ್ತಿದ್ದ ಮೂವರು ದ್ವಿಚಕ್ರ ವಾಹನ ಸವಾರರು ಮತ್ತು ವಾಹನಗಳನ್ನು ಬಾಣಸವಾಡಿ ಸಂಚಾರ ಠಾಣೆಯ ಪೊಲೀಸರು ಪತ್ತೆ ಮಾಡಿ ಜಪ್ತಿ ಮಾಡಿದ್ದಾರೆ.

“ವಿಚಾರಣೆ ವೇಳೆ, ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರು ವಯಸ್ಕರಾಗಿದ್ದು, ಈ ಇಬ್ಬರು ಸವಾರರ ವಿರುದ್ದ ಎರಡು ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಬ್ಬ ದ್ವಿಚಕ್ರ ವಾಹನ ಸವಾರ ಅಪ್ರಾಪ್ತ ವಯಸ್ಕನಾಗಿದ್ದು, ಹಾಗಾಗಿ, ಸವಾರನ ಪೋಷಕರು ಅಥವಾ ವಾಹನದ ಮಾಲೀಕರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದರು.

ಫೆ.25 ರಂದು ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಟರಾಯನಪುರ ಜಂಕ್ಷನ್ ಬಳಿ ವ್ಹೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರನನ್ನು ವಾಹನ ಸಮೇತ ಪತ್ತೆಮಾಡಿ ಪ್ರಕರಣ ದಾಖಲು ಮಾಡಲಾಗಿದೆ. ಹಾಗೇಯೇ, ಎಚ್‌ಎಸ್‌ಆರ್‌ ಲೇಔಟ್‌ ಬಳಿ ವ್ಹೀಲಿಂಗ್ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಫೆ.24 ರಂದು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ, ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ, ಅಂಬೇಡ್ಕರ್ ನಗರ ಕೂಡ್ಲುಗೇಟ್ ಬಳಿ, ಓಂ ಶಕ್ತಿ ದೇವಸ್ಥಾನದ ಹತ್ತಿರ, ಎನ್.ಜಿ.ಆರ್ ಲೇಔಟ್ ರೂಪೇನ ಅಗ್ರಹಾರ ಬೊಮ್ಮನಹಳ್ಳಿ ಬಳಿ ವ್ಹೀಲಿಂಗ್ ಮಾಡುತ್ತಿದ್ದವರನ್ನು ವಶಕ್ಕೆ ಪಡೆದು, ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....