ಪಕ್ಷದ ಕಾರ್ಯಕರ್ತರಿಗೆ ಅವಕಾಶ, ನಾನು-ನಮ್ಮ ಕುಟುಂಬದವರು ಲೋಕಸಭೆ ಸ್ಪರ್ಧಿಸಲ್ಲ: ಸತೀಶ್​​​ ಜಾರಕಿಹೊಳಿ

Date:

ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್​​​ ಜಾರಕಿಹೊಳಿ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಮಮಂದಿರ ಉದ್ಘಾಟನೆ ಆಮಂತ್ರಣದ ಬಗ್ಗೆ ಮಾತನಾಡಿ, “ರಾಮಮಂದಿರ ಉದ್ಘಾಟನೆ ಒನ್​ ಮ್ಯಾನ್​ ಶೋ ಆಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಲೋಕಸಭಾ ಚುನಾವಣೆ ಬೇರೆ ಬರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಇನ್ನೂ ಸಮಯ ಇದೆ ಆಹ್ವಾನ ಕೊಡಲಿ. ಯಾವ ಸಿಎಂಗೂ ಆಹ್ವಾನ ಕೊಟ್ಟಿಲ್ಲ. ಉತ್ತರ ಪ್ರದೇಶ ಸಿಎಂಗೆ ಮಾತ್ರ ಆಹ್ವಾನ ಇದೆ. ನನಗೆ ಆಹ್ವಾನ ಬಂದ್ರೆ ಹೋಗಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಇದೆ, ಅಲ್ಲೇ ಪೂಜೆ ಮಾಡುತ್ತೇನೆ. ಸದ್ಯ ರಶ್ ಇರುತ್ತೆ, ಮುಂದೆ ಯಾವಾಗಾದರೂ ಹೋಗುವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

ಶ್ರೀಕಾಂತ್ ಪೂಜಾರಿ ಬಂಧನ ಬಗ್ಗೆ ಪ್ರತಿಕ್ರಿಯಿಸಿ, “ಹಳೇ ಕೇಸ್ ಗಳಿವೆ ಎಂದು ಪೋಲಿಸರು ಬಂಧಿಸಿದ್ದಾರೆ. ಇದರಲ್ಲಿ ಗೊಂದಲ ಮಾಡುವ ಅವಶ್ಯಕತೆ ಇಲ್ಲ. ಸರಿಯಾದ ರೀತಿಯಲ್ಲಿ ಇದ್ದರೆ ಪ್ರತಿಭಟನೆ ನಡೆಸಲಿ. ಜನರ ಸಮಸ್ಯೆಗಳ ಸಂಬಂಧ ಪ್ರತಿಭಟನೆ ನಡೆಸಲಿ. ಅದು ಬಿಟ್ಟು ಪ್ರಕರಣಗಳಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ಮಾಡ್ತಿದಾರೆ. ಬೆಳಕು ಚೆಲ್ಲಲು ಕರ್ನಾಟಕದಲ್ಲಿ ಸಾಕಷ್ಟು ವಿಷಯಗಳಿವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...