“ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವ ಘಟನೆಗಳು ಹೆಚ್ಚಾಗುತ್ತಿವೆ. ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ದಂಡದ ಮೊತ್ತವನ್ನು ₹10 ಸಾವಿರಕ್ಕೆ ಏರಿಸಿದ್ದು, ಜತೆಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದೆ.
ಮೆಟ್ರೋದಲ್ಲಿ ಮಿತಿಮೀರುತ್ತಿರುವ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು ಬಿಎಂಆರ್‌ಸಿಎಲ್ ಮುಂದಾಗಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬಿಎಂಆರ್ಸಿಎಲ್ ದಂಡ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ಮಹಿಳೆಯರ ಜತೆಗೆ ಅಸಭ್ಯವಾಗಿ ವರ್ತಿಸುವುದು ಹಾಗೂ ಲೈಂಗಿಕ ಕಿರುಕುಳ ನೀಡುವುದು ಅಥವಾ ನಿಯಮ ಉಲ್ಲಂಘನೆ ಮಾಡಿದರೆ ಅಂತಹವರಿಗೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ಜತೆಗೆ ಆ ವ್ಯಕ್ತಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಸುರಂಗ ರಸ್ತೆ ನಿರ್ಮಾಣ: ಮೋಹನ್ ದಾಸರಿ
ಈ ಹಿಂದೆ ಮಹಿಳೆಯರ ಜತೆಗೆ ಅನುಚಿತ ವರ್ತನೆ ತೋರಿದರೆ, ಮೆಟ್ರೋ ಆಕ್ಟ್ ಪ್ರಕಾರ ₹500 ದಂಡ ವಿಧಿಸಲಾಗುತ್ತಿತ್ತು. ಇದೀಗ, ದಂಡದ ಮೊತ್ತವನ್ನು ₹10 ಸಾವಿರಕ್ಕೆ ಏರಿಸಲಾಗಿದೆ.