ನಮ್ಮ ಮೆಟ್ರೋ | ‘ಚಾಲಕ ರಹಿತ ರೈಲು’ ಸಂಚಾರಕ್ಕೆ ಶೀಘ್ರದಲ್ಲೇ ಸಿಗ್ನಲಿಂಗ್ ಟೆಸ್ಟ್

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಚಾಲಕ ರಹಿತ ರೈಲು ಶೀಘ್ರದಲ್ಲಿಯೇ ಹಳಿಗಳ ಮೇಲೆ ಇಳಿಯಲಿದೆ. ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟಿಗ್ರೇಷನ್ ಟೆಸ್ಟಿಂಗ್​ ‘ಯೆಲ್ಲೋ ಲೈನ್’​ನಲ್ಲಿ ನಡೆಯಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್​ಸಿಎಲ್) ತಿಳಿಸಿದೆ.

ಫೆಬ್ರವರಿ 20ರಂದು ಚೀನಾದಿಂದ ಚಾಲಕ ರಹಿತ ರೈಲಿನ ಆರು ಬೋಗಿಗಳ ಮೊದಲ ಸೆಟ್ ಹೆಬ್ಬಗೋಡಿ ಮೆಟ್ರೋ ಡಿಪೋ ತಲುಪಿತ್ತು. ಸದ್ಯ ಚಾಲಕ ರಹಿತ ರೈಲುಗಳ ಮುಖ್ಯ ಪರೀಕ್ಷೆ ಸಿಗ್ನಲಿಂಗ್ ಟೆಸ್ಟ್ ಆಗಿದೆ. ಇದೀಗ, ಕೋಚ್‌ಗಳು ಸ್ಟ್ಯಾಟಿಕ್ ಮತ್ತು ಎಲೆಕ್ಟ್ರಿಕಲ್ ಸರ್ಕ್ಯೂಟ್ ಪರೀಕ್ಷೆಗೆ ಒಳಗಾಗುತ್ತಿವೆ. ಅವುಗಳನ್ನು ಶೀಘ್ರದಲ್ಲೇ ಮುಖ್ಯ ಪರೀಕ್ಷೆಗೆ ಒಳಪಡಿಸಲಾಗುವುದು. ಮುಂಬರುವ ಟೆಸ್ಟಿಂಗ್​ಗಳು ಸಿಗ್ನಲಿಂಗ್, ಟೆಲಿಕಮ್ಯುನಿಕೇಷನ್ಸ್ ಮತ್ತು ವಿದ್ಯುತ್ ಪೂರೈಕೆಯೊಂದಿಗೆ ವ್ಯವಸ್ಥೆಯನ್ನು ವಿಲೀನಗೊಳಿಸುವ ಗುರಿಯನ್ನು ಹೊಂದಿವೆ. ರೈಲನ್ನು ಒಟ್ಟು 37 ಟೆಸ್ಟಿಂಗ್​ಗೆ ಒಳಪಡಿಸಲಾಗುವುದು” ಎಂದು ಯೋಜನೆಯ ಭಾಗವಾಗಿರುವ ಅಧಿಕಾರಿಗಳು ತಿಳಿಸಿದ್ದಾರೆ.

“ರಿಸರ್ಚ್ ಡಿಸೈನ್ಸ್ ಆಂಡ್ ಸ್ಟ್ಯಾಂಡರ್ಡ್ಸ್ ಆರ್ಗನೈಸೇಶನ್ ಮತ್ತು ಕಮಿಷನರ್ ಆಫ್ ಮೆಟ್ರೋ ರೈಲು ಸೇಫ್ಟಿಯಿಂದ ಸುರಕ್ಷತಾ ತಪಾಸಣೆಗಳು ನಡೆಯಬೇಕಿದೆ. ಸಂಚಾರ ಆರಂಭಿಸುವ ಮುನ್ನ ಆರ್‌ಡಿಎಸ್‌ಒ ಮತ್ತು ಸಿಎಮ್‌ಆರ್‌ಎಸ್‌ನಿಂದ ಸಲಹೆಗಳನ್ನು ಪಡೆಯುವ ಮತ್ತು ರೈಲ್ವೆ ಮಂಡಳಿಯಿಂದ ಅನುಮೋದನೆ ಪಡೆಯುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಅಗತ್ಯವಿದೆ” ಎಂದು ಬಿಎಂಆರ್‌ಸಿಎಲ್ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವರ್ಷದ ಅಂತ್ಯದ ವೇಳೆಗೆ ಸುಮಾರು 18.82 ಕಿಲೋಮೀಟರ್‌ ಉದ್ದ ಯೆಲ್ಲೋ ಲೈನ್ ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಲಿದೆ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕಿಸುತ್ತದೆ. ಇದು 16 ನಿಲ್ದಾಣಗಳನ್ನು ಹೊಂದಿರುವ ಸಂಪೂರ್ಣ ಎತ್ತರದ ಮೆಟ್ರೋ ಮಾರ್ಗವಾಗಿದೆ (ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರ್ ರಸ್ತೆ, ಇಂಪೋಸಿಸ್ ಫೌಂಡೇಷನ್-ಕೋಣಪ್ಪನ ಅಗ್ರಹಾರ, ಎಲೆಟ್ರಾನಿಕ್ ಸಿಟಿ, ಬಿರಟೆನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕುಡುಲು ಗೇಟ್, ಹೊಂಗಸಂದ್ರ, ಬೊಮ್ಮನ ಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿ.ಟಿ.ಎಂ ಲೇಔಟ್, ಜಯದೇವ ಹಾಸ್ಪಿಟಲ್, ರಾಗಿ ಗುಡ್ಡ ಮತ್ತು ಆರ್.ವಿ ರಸ್ತೆ).

ಇದು ಆರ್‌ವಿ ರಸ್ತೆ ನಿಲ್ದಾಣದಲ್ಲಿ ಬೆಂಗಳೂರು ಮೆಟ್ರೋದ ಹಸಿರು ಮಾರ್ಗದೊಂದಿಗೆ ಮತ್ತು ಜಯದೇವ ಆಸ್ಪತ್ರೆ ನಿಲ್ದಾಣದಲ್ಲಿ ಗುಲಾಬಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸುತ್ತದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಭಾರೀ ಸಂಚಾರ ದಟ್ಟಣೆಯನ್ನು ನಿವಾರಿಸಲು ರಾಗಿ ಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ 3.13 ಕಿಲೋಮೀಟರ್ ಉದ್ದದ ಸಂಯೋಜಿತ ಮೆಟ್ರೋ ಮತ್ತು ರಸ್ತೆ ಮೇಲ್ಸೇತುವೆ ಇದೆ.

ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ರೈಲು

ಈ ರೈಲು ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಉದಾಹರಣೆಗೆ ಚಾಲಕ ರಹಿತ ರೈಲು ಕಾರ್ಯಾಚರಣೆ (UTO), ಕಾರ್ಯಾಚರಣೆಯ ನಿಯಂತ್ರಣ ಕೇಂದ್ರದಿಂದ ವರ್ಧಿತ ಮೇಲ್ವಿಚಾರಣೆ ಸಾಮರ್ಥ್ಯ (OCC), ಟ್ರ್ಯಾಕ್ ಮಾನಿಟರಿಂಗ್ ಸಿಸ್ಟಮ್, ಹಾಟ್ ಆಕ್ಸಲ್ ಪತ್ತೆ ವ್ಯವಸ್ಥೆ, ಅಡಚಣೆ ಮತ್ತು ಡಿರೈಲ್ಮೆಂಟ್ ಡಿಟೆಕ್ಷನ್ ವ್ಯವಸ್ಥೆ ಇತ್ಯಾದಿ. ಈ, ಬೋಗಿಗಳು ಮಾರ್ಗಗಳು, ಜಾಹೀರಾತುಗಳು, ಸೂಚನೆಗಳು, ಮಾಹಿತಿ ಇತ್ಯಾದಿಗಳನ್ನು ಪ್ರದರ್ಶಿಸಲು ಬಾಗಿಲುಗಳ ಮೇಲೆ ವಿದ್ಯುತ್ ಸಂಕೇತಗಳನ್ನು ಹೊಂದಿರುತ್ತವೆ.

ಇದಲ್ಲದೇ, ಸಿಬಿಟಿಸಿಗಾಗಿ ಮಾದರಿ ರೈಲು, ಡಿಟಿಜಿ ಸಿಗ್ನಲಿಂಗ್‌ನೊಂದಿಗೆ ಮತ್ತೊಂದು ಮೂಲಮಾದರಿಯ ರೈಲು ಚೀನಾದ ಸಿಆರ್‌ಆರ್‌ಸಿನಿಂದ ಸರಬರಾಜು ಆಗಲಿದೆ. ಉಳಿದ 34 ರೈಲು ಸೆಟ್‌ಗಳನ್ನು (14 CBTC & 20 DTG) ಭಾರತದಲ್ಲಿ ಪಶ್ಚಿಮ ಬಂಗಾಳದ ಟಿಟಾಗಢ್ ರೈಲ್ ಸಿಸ್ಟಮ್ಸ್ ಲಿಮಿಟೆಡ್‌ನಲ್ಲಿ ತಯಾರಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ನಟ ದರ್ಶನ್ ಬಂಧನ | ಸಾಮಾಜಿಕ ಜಾಲತಾಣ, ನಾಗರಿಕ ಸಮಾಜ ಮತ್ತು ಕಾನೂನು ವೈಫಲ್ಯ

ಈ ರೈಲುಗಳನ್ನು ಸಂವಹನ-ಆಧಾರಿತ ರೈಲು ನಿಯಂತ್ರಣ (CBTC) ವ್ಯವಸ್ಥೆಯ ಭಾಗವಾಗಿ ಪರಿಚಯಿಸಲಾಗುವುದು, ಇದನ್ನು ಸಾಮಾನ್ಯವಾಗಿ ‘ಚಾಲಕರಹಿತ ತಂತ್ರಜ್ಞಾನ’ ಎಂದು ಕರೆಯಲಾಗುತ್ತದೆ. ಇದು ಅಸ್ತಿತ್ವದಲ್ಲಿರುವ ಎರಡೂವರೆ ನಿಮಿಷಗಳಿಗಿಂತ 90 ಸೆಕೆಂಡುಗಳ ಮಟ್ಟಿಗೆ ಹೆಡ್‌ವೇ ಅನ್ನು ಕಡಿಮೆ ಮಾಡುತ್ತದೆ. ಆದಾಗ್ಯೂ, ರೈಲುಗಳು ಚಾಲಕ ರಹಿತ ಕಾರ್ಯಾಚರಣೆಗೆ ಹೊಂದಿಕೆಯಾಗಿದ್ದರೂ, ನಿಗಮವು ಆರಂಭದಲ್ಲಿ ರೈಲನ್ನು ನಿರ್ವಹಿಸಲು ಲೊಕೊ ಪೈಲಟ್‌ಗಳನ್ನು ನಿಯೋಜಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕುವೆಂಪು ವಿವಿ ಅತಿಥಿ ಉಪನ್ಯಾಸಕರಿಂದ ಧರಣಿ

ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರುಗಳು...

ಕನ್ನಡಿಗರಿಗೆ ಉದ್ಯೋಗ | ಕಾರ್ಪೊರೇಟ್ ಲಾಬಿಗೆ ಮಣಿದ ಸರ್ಕಾರ: ಕರವೇ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆರೋಪ

"ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ...

ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ...

‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ...