ನಮ್ಮ ಮೆಟ್ರೋ | ರೈಲು ಹಳಿಗೆ ಹಾರಿದ ವ್ಯಕ್ತಿ; ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

Date:

ಇತ್ತಿಚೀನ ದಿನಗಳಲ್ಲಿ ಬೆಂಗಳೂರಿನ ‘ಮೆಟ್ರೋ’ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಇದೀಗ, ಗುರುವಾರ ಮಧ್ಯಾಹ್ನ 2.10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ವ್ಯಕ್ತಿಯೋರ್ವ ಹಾರಿದ ಘಟನೆ ನಡೆದಿದ್ದು, ಪರಿಣಾಮ ಈ ಮಾರ್ಗ (ನೇರಳೆ) ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

- Advertisement -

“ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮಾರ್ಚ್‌ 21ರಂದು ಮಧ್ಯಾಹ್ನ 2.10ಕ್ಕೆ ನಿಲ್ದಾಣಕ್ಕೆ ಟ್ರೈನ್ ಬರುವಾಗ ಹಳಿಗೆ ಒರ್ವ ವ್ಯಕ್ತಿ ಜಿಗಿದಿದ್ದಾರೆ. ಪ್ರಸ್ತುತ ರೈಲುಗಳು ಮಾಗಡಿ ರಸ್ತೆಯಿಂದ ವೈಟ್‌ಫೀಲ್ಡ್ ಫೀಲ್ಡ್ ನಡುವೆ ಮಾತ್ರ ಓಡಾಡುತ್ತಿವೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟಕ್ಕೆ ಯಾವುದೇ ಸೇವೆಗಳಿಲ್ಲ” ಎಂದು ನಮ್ಮ ಮೆಟ್ರೋ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಸದ್ಯ ಈ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಾರಣಕ್ಕೆ ಕಳೆದ 15 ನಿಮಿಷದಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ.

ಸದ್ಯ ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌ನಿಂದ ಮಾಗಡಿ ರಸ್ತೆ ನಿಲ್ದಾಣ ಹೊಸಹಳ್ಳಿವರೆಗೆ ಮಾತ್ರ ರೈಲು ಕಾರ್ಯಾಚರಣೆ ನಡೆಸುತ್ತಿದೆ. ಚಲಘಟ್ಟದಿಂದ ಮಾಗಡಿ ರಸ್ತೆವರೆಗಿನ ರೈಲು ಸಂಚಾರ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | 85 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತದಾನಕ್ಕೆ ಅವಕಾಶ

ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಎಕ್ಸ್‌ನಲ್ಲಿ ಅಧಿಕೃತ ಮಾಹಿತಿ ನೀಡಿದೆ.

ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...