ನಮ್ಮ ಮೆಟ್ರೋ | ಶರ್ಟ್‌ ಗುಂಡಿ ಇಲ್ಲದಕ್ಕೆ ಕಾರ್ಮಿಕನಿಗೆ ರೈಲು ಹತ್ತಲು ಬಿಡದ ಸಿಬ್ಬಂದಿ

Date:

Advertisements

ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿರೋ ನಮ್ಮ ಮೆಟ್ರೋ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದೆ. ಕೆಲ ದಿನಗಳ ಹಿಂದೆಯಷ್ಟೇ ರೈತರೊಬ್ಬರು ಕೊಳಕು ಬಟ್ಟೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬ್ಬಂದಿ ಅವರಿಗೆ ನಿಲ್ದಾಣದೊಳಗೆ ಪ್ರವೇಶ ನಿರ್ಬಂಧಿಸಿತ್ತು. ಇದೀಗ, ಅಂತಹದ್ದೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.

ಇದೀಗ, ಶರ್ಟ್‌ ಗುಂಡಿ ಹಾಕದ ಕಾರ್ಮಿಕನೊಬ್ಬನಿಗೆ ಮೆಟ್ರೋ ಒಳಗೆ ಪ್ರವೇಶವಿಲ್ಲ ಎಂದು ಹೇಳಿದ ಭದ್ರತಾ ಸಿಬ್ಬಂದಿ ಕಾರ್ಮಿಕನನ್ನು  ನಿಲ್ದಾಣದಲ್ಲಿಯೇ ನಿಲ್ಲಿಸಿದ ಘಟನೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೆಟ್ರೋ ಸಿಬ್ಬಂದಿಯ ವರ್ತನೆಯಿಂದಾಗಿ ಯುವಕ ನಿಲ್ದಾಣದಲ್ಲಿಯೇ ಕಾಯುವಂತಾಗಿದೆ. ಯುವಕನ ಪರಿಸ್ಥಿತಿಯನ್ನು ಗಮನಿಸಿದ ಪ್ರಯಾಣಿಕರೊಬ್ಬರುದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಓಲ್ಡ್‌ ಸ್ಯಾಫರಾನ್ ಎಂಬ ಹೆಸರಿನ ಎಕ್ಸ್ಖಾತೆಯಿಂದ ಈ ವಿಡಿಯೋವನ್ನು ಫೊಸ್ಟ್‌ ಮಾಡಲಾಗಿದ್ದು, “ಬೆಂಗಳೂರಿನ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಾಗರಿಕರ ಬಟ್ಟೆ/ಉಡುಗೆಗೆ ಸಂಬಂಧಿಸಿದ ಮತ್ತೊಂದು ಘಟನೆ ಇದೀಗ ನನ್ನ ಮುಂದೆ ನಡೆದಿದೆ. ಒಬ್ಬ ಕಾರ್ಮಿಕನ ಶರ್ಟ್‌ ಗುಂಡಿಗಳು ಇರದ ಕಾರಣ ಅವೆರಡು ಗುಂಡಿಗಳನ್ನು ಹೊಲಿದುಕೊಂಡು ಬಾ ಅಲ್ಲಿಯವರೆಗೂ ಮೆಟ್ರೋ ಹತ್ತಲು ಬಿಡುವುದಿಲ್ಲ ಎಂದು ಅವರನ್ನು ಭದ್ರತಾ ಸಿಬ್ಬಂದಿ ನಿಲ್ದಾಣದಲ್ಲಿಯೇ ನಿಲ್ಲಿಸಿದ್ದಾರೆ. ನಮ್ಮ ಮೆಟ್ರೋ ಯಾವಾಗಿನಿಂದ ಈ ರೀತಿ ಆಯಿತು” ಎಂದು ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೋಟೆಲ್‌ನ 19ನೇ ಮಹಡಿಯಿಂದ ಹಾರಿ ತಮಿಳುನಾಡಿನ ವ್ಯಕ್ತಿ ಸಾವು

ಅಲ್ಲದೇ, ಈ ಪೋಸ್ಟ್‌ ಅನ್ನು ಬಿಎಂಆರ್‌ಸಿಎಲ್‌ ಹಾಗೂ ತೇಜಸ್ವಿ ಸೂರ್ಯ ಅವರಿಗೆ ಟ್ಯಾಗ್ ಮಾಡಲಾಗಿದೆ.

ಮೆಟ್ರೋ ಸಿಬ್ಬಂದಿಯ ವರ್ತನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರಿಯಾದ ಬಟ್ಟೆಯಿಲ್ಲದವರಿಗೆ, ರೈತರಿಗೆ, ಕಾರ್ಮಿಕರಿಗೆ ಇಲ್ಲದ ಮೆಟ್ರೋ ಕೇವಲ ಸಿರಿವಂತರಿಗೆ ಮಾತ್ರ ಸೀಮಿತವಾಗಿದೆಯೇ ಎಂದು ಪ್ರಶ್ನಿಸಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X