ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

Date:

ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರಿನಿಂದ ಬೆಂಗಳೂರಿಗೆ ಫೆಬ್ರುವರಿ 14ರಂದು ಆಗಮಿಸಿದೆ.

- Advertisement -

ನಮ್ಮ ಮೆಟ್ರೋದ ಚಾಲಕ ರಹಿತ ರೈಲು ಆರ್.ವಿ.ರಸ್ತೆ ಹಾಗೂ ಬೊಮ್ಮಸಂದ್ರ ಲೈನ್‌ನಲ್ಲಿ ಪ್ರಾಯೋಗಿಕವಾಗಿ ಸಂಚರಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚೀನಾದ ಶಾಂಘೈ ಬಂದರಿನಿಂದ ಜನವರಿ 24ರಂದು ಸಮುದ್ರ ಮಾರ್ಗವಾಗಿ ಚಾಲಕ ರಹಿತ ರೈಲು ಬೋಗಿಗಳನ್ನು ಸಾಗಿಸಲಾಗಿತ್ತು. ಫೆ.6ರಂದು ಚೆನ್ನೈ ಬಂದರಿಗೆ ಬಂದು ತಲುಪಿತ್ತು. ಫೆಬ್ರುವರಿ 14ರಂದು ಬೆಳಗ್ಗೆ 3.30ಕ್ಕೆ ಚೆನ್ನೈ ಬಂದರಿನಿಂದ ರಸ್ತೆ ಮಾರ್ಗದ ಮೂಲಕವಾಗಿ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಬಂದು ತಲುಪಿದೆ.

ಆರು ಬೋಗಿಗಳನ್ನು ಟ್ರೇಲರ್‌ಗಳ ಮೂಲಕ ಸಾಗಿಸಲಾಗಿದೆ. ಪ್ರತಿ ಕೋಚ್ 38.7 ಮೆಟ್ರಿಕ್ ಟನ್ ತೂಕವಿದೆ. ಈ ಚಾಲಕ ರಹಿತ ರೈಲು ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ನಲ್ಲಿ ಸಂಚರಿಸಲಿದೆ. ಚೀನಾದ ಸಿಆರ್‌ಆರ್‌ಸಿ ನಾನ್ ಜಿಂಗ್ ಪುಜೆನ್ ಕಂ. ಲಿಮಿಟೆಡ್‌ನಿಂದ ಈ ರೈಲು ತಯಾರಾಗಿದೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ನಮ್ಮ ಮೆಟ್ರೋದ ಫೇಸ್ 2 ಯೋಜನೆಯ ಕಾರಿಡಾರ್ 3ರ ಆರ್‌ವಿ ರಸ್ತೆ – ಬೊಮ್ಮಸಂದ್ರ ಮಾರ್ಗವಾಗಿ ಚಲಿಸಲಿದೆ. ಒಟ್ಟು 19.15 ಕಿಲೋಮೀಟರ್ ಉದ್ದದ ಈ ಹಳದಿ ಮಾರ್ಗಕ್ಕೆ 6 ಬೋಗಿಗಳ ಹೊಸ ರೈಲು ಆಗಮಿಸಿದೆ.

ಚಾಲಕ ಇಲ್ಲದಿದ್ದರೂ ಈಗಾಗಲೇ ಅಳವಡಿಸಲಾದ ಪ್ರೋಗ್ರಾಂ ಆಧಾರದ ಮೇಲೆ ಈ ರೈಲು ಸಂಚರಿಸಲಿದೆ. ರೈಲಿನ ಸಂಚಾರವನ್ನು ಕಂಟ್ರೋಲ್‌ ರೂಮ್​ನಲ್ಲಿ ನಿಗಾ ವಹಿಸಲಾಗುತ್ತದೆ. ಚಾಲಕ ಇಲ್ಲದೇ ಈ ಮೆಟ್ರೋ ಗಂಟೆಗೆ 80 ಕಿ.ಮೀ ವೇಗದಲ್ಲಿ ಚಲಿಸಲಿದೆ. 25 ಕೆವಿ ಸಾಮರ್ಥ್ಯದ ವಿದ್ಯುತ್‌ ಸಹಾಯದಿಂದ ಸಂಚರಿಸುತ್ತದೆ.

ಸಿಸಿಟಿವಿ ಕ್ಯಾಮೆರಾಗಳನ್ನೂ ಬೋಗಿಗಳಲ್ಲಿ ಅಳವಡಿಸಲಾಗಿದೆ. ಇನ್ನು ಸಂಚಾರದಲ್ಲಿ ಸಮಸ್ಯೆ ಉಂಟಾದರೆ ತಕ್ಷಣ ಓಸಿಸಿಗೆ ಸಂದೇಶ ರವಾನೆ ಆಗಲಿದೆ. ಆಗ ತಕ್ಷಣ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...