ವಿಜಯನಗರ ಅರಸರ ಕಾಲದ ವೈಭವ, ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

Date:

Advertisements

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50″ನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ನೀಡಿದ್ದೇವೆ ಎಂದರು.

Advertisements

ಬಸವಣ್ಣನವರ ರೀತಿ ನಾನೂ ಮೌಢ್ಯ ನಂಬುವುದಿಲ್ಲ

ನನಗೆ ಮೌಢ್ಯದಲ್ಲಿ ನಂಬಿಕೆ ಇಲ್ಲ. ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ತಲೆಯೆತ್ತಿದೆ ಫೋನ್ ಬೇಹುಗಾರಿಕೆ ಭೂತ!

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50″ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದೆ. ಎಲ್ಲ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರಣೆ ನೀಡಿದ್ದೆ ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ ಎಂದು ಕರೆ ನೀಡಿ ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಿ ಎಂದು ಕರೆ ನೀಡಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ. ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಗೌರವ ಉಪಸ್ಥಿತಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಹಿರಿಯ ಶಾಸಕರಾದ ಈ. ತುಕಾರಾಂ, ಡಾ.ಎನ್.ಟಿ. ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ, ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ | ಪ್ರಕರಣದ ಸುತ್ತ ಒಂದು ರಾಜಕೀಯ ಒಳನೋಟ

ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯ ರಾಜಕಾರಣದಲ್ಲೂ...

ಅಲೆಮಾರಿ ಸಮುದಾಯಗಳಿಗಾಗಿರುವ ಘೋರ ಅನ್ಯಾಯ ಸರಿಪಡಿಸಿ: 277 ಸಮಾನ ಮನಸ್ಕರಿಂದ ಸಿಎಂಗೆ ಮನವಿ

ಅತೀ ಹಿಂದುಳಿದ ಅಲೆಮಾರಿ -ಅರೆ ಅಲೆಮಾರಿ ಸಮುದಾಯಗಳಿಗಾಗಿರುವ ಘೋರ ಅನ್ಯಾಯ ಸರಿಪಡಿಸಿ...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

Download Eedina App Android / iOS

X