ನಮ್ಮದು ಜಾತ್ಯತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ ನೋಡಿ ಕೊಟ್ಟಿಲ್ಲ. ಎಲ್ಲ ಜಾತಿಗಳನ್ನು ಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು. ಶ್ಯಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಹೇಳಿರುವ ಬಗ್ಗೆ ಮಾತನಾಡಿ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಈ ಸುದ್ದಿ ಓದಿದ್ದೀರಾ? 26/11 ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್‌ನ ಪ್ರಮುಖ ನಿಕಟವರ್ತಿ ಕರಾಚಿಯಲ್ಲಿ ಗುಂಡಿಕ್ಕಿ ಹತ್ಯೆ
ಹೆಚ್.ಡಿ.ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ
ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ. ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಶನಗೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್. ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂಬ ಭಾವನೆ ನನ್ನದು ಎಂದು ಸಿದ್ದರಾಮಯ್ಯ ತಿಳಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.