ಕಾಶ್ಮೀರದ ಪಹಲ್ಲಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ.
ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/ 6E 7731 ವಿಮಾನದ ಮೂಲಕ ತಲುಪಲಿದೆ. ಉಗ್ರರ ಗುಂಡೇಟಿಗೆ ಬಲಿಯಾದ ಮತ್ತೋರ್ವ ಕರ್ನಾಟಕದ ನಿವಾಸಿ ಭರತ್ ಭೂಷನ್ ಮೃತದೇಹವೂ, 6E 3105/ 6E 5252 ವಿಮಾನದಲ್ಲಿ ಮಧ್ಯಾಹ್ಮ 3 ಗಂಟೆಗೆ ಮುಂಬೈ ಮೂಲಕ ಬೆಂಗಳೂರಿಗೆ ತಲುಪಲಿದೆ.
ದಾಳಿಯಲ್ಲಿ ಮೃತಪಟ್ಟ ಮಧುಸೂದನ್ ರಾವ್ ಅವರು ಮೂಲತಃ ಅಂಧ್ರದವರಾಗಿದ್ದು ರಾಮಮೂರ್ತಿ ನಗರದಲ್ಲಿ ನೆಲೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮೃತದೇಹ ಮಧ್ಯಾಹ್ಮ 3 ಗಂಟೆಗೆ 6E 3105/ 6E 5015 ವಿಮಾನದಲ್ಲಿ ಮುಂಬೈ ಮೂಲಕ ಚೆನೈ ತಲುಪಲಿದೆ.
ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರ ಪಹಲ್ಲಾಮ್‌ಗೆ ತೆರಳಿದ್ದಾರೆ. ಆಸ್ಪತ್ರೆಗೆ ತೆರಳಿರುವ ಅವರು ಕನ್ನಡಿಗರಿಗನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ
ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಹೆಲ್ಪ್‌ಲೈನ್ ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.
ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಹೆಲ್ಪ್‌ಲೈನ್ ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.
ಹೆಲ್ಪ್‌ಲೈನ್ ನಂಬರ್ ಹೀಗಿದೆ
080-43344334
080-43344335
080-43344336
080-43344342
ಪ್ರಧಾನಿ ಮೋದಿ ಭದ್ರತಾ ಸಭೆ
ಅತ್ತ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಮರಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಉನನತ ಮಟ್ಟದ ಭದ್ರತಾ ಸಭೆ ನಡೆಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಈ ಉನ್ನತ ಮಟ್ಟದ ಭದ್ರತಾ ಸಮಿತಿ ಸಭೆಯಲ್ಲಿ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಹಿರಿಯ ಭದ್ರತಾ ಸಲಹೆಗಾರರು ಹಾಗೂ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.