ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

Date:

“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

- Advertisement -

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲ ವ್ಯಾಪಾರಿಗಳಿಗೆ ಲಾಭವಾಗಬೇಕು” ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಮೂಲಕ ಬೆಂಗಳೂರು ನಗರ ಇಂದು ಹೊಸ ಇತಿಹಾಸ ಪುಟಕ್ಕೆ ಸೇರಿದೆ. ಅಲ್ಲದೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗಿದೆ. ಇಲ್ಲಿ ಪ್ರತಿ ಗಂಟೆಗೆ ವಾಹನ ನಿಲುಗಡೆಗೆ ₹20 – ₹30 ನಿಗದಿ ಮಾಡಿದ್ದು, ಎರಡು ಮೂರು ಕಾರು ಹೊಂದಿರುವವರು ಕೂಡ ಇಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ” ಎಂದರು.

“ನಗರದ ಯಾವುದೇ ಭಾಗದಿಂದ ಜನ ತಮ್ಮ ವಾಹನದಲ್ಲಿ ಬಂದರೂ ಇಲ್ಲಿ ಅವರು ವಾಹನ ನಿಲುಗಡೆ ಮಾಡಿ, ಅವರು ವಿಧಾನಸೌಧ, ಹೈಕೋರ್ಟ್, ರೈಲ್ವೇ ನಿಲ್ದಾಣ ಸೇರಿದಂತೆ ಗಾಂಧಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋಗಲು ಗುತ್ತಿಗೆದಾರರು ಉಚಿತ ಸಂಚಾರ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಗಾಂಧಿ ನಗರದಲ್ಲಿ ದಿನೇಶ್ ಗುಂಡೂರಾವ್ ಅವರ ಮುಖಂಡತ್ವದಲ್ಲಿ ವಿಶೇಷ ಯೋಜನೆ ಜಾರಿ ಮಾಡಲಾಗಿದೆ” ಎಂದರು.

“ಗಾಂಧಿನಗರ ಎಂದರೆ ಮಧ್ಯಮ ವರ್ಗದ ಜನ ಹೆಚ್ಚಾಗಿ ಬರುತ್ತಿದ್ದಾರೆ. ವಾಹನ ನಿಲುಗಡೆ ಸಮಸ್ಯೆ ಎದುರಾಗುತ್ತಿತ್ತು. ಈಗ ಅದಕ್ಕೆ ಪರಿಹಾರ ನೀಡಲಾಗುತ್ತಿದೆ. ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ಮಾಡುವ ಹೊಸ ಪ್ರಯೋಗಕ್ಕೆ ಗುತ್ತಿಗೆದಾರರು ಕೈ ಹಾಕಿದ್ದಾರೆ. ಅವರು ಸರ್ಕಾರಕ್ಕೂ ₹1.50 ಕೋಟಿ ಹಣ ಪಾವತಿಸಿ, ಹೇಗೆ ಆದಾಯ ಮಾಡುತ್ತಾರೋ ಗೊತ್ತಿಲ್ಲ. ಇದು ಸುಲಭವಾದ ಕೆಲಸವಲ್ಲ. ಈ ವ್ಯವಸ್ಥೆ ಗಾಂಧಿನಗರಕ್ಕೆ ಬಹಳ ಅವಶ್ಯಕವಾಗಿದೆ” ಎಂದು ತಿಳಿಸಿದರು.

“ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲು ಬರುವವರಿಗೂ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲೋ ಗಾಡಿ ನಿಲ್ಲಿಸಿ ಬರುವುದಕ್ಕಿಂತ ಇಂತಹ ವ್ಯವಸ್ಥೆ ಬಳಸಿಕೊಳ್ಳುವುದು ಹೆಚ್ಚಿನ ಅನುಕೂಲವಾಗುತ್ತದೆ. ಖಾಸಗಿಯವರು, ವರ್ತಕರು, ಗ್ರಾಹಕರು ಸೇರಿದಂತೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು. ಇದು ಮಾದರಿ ಯೋಜನೆಯಾಗಿದ್ದು, ಬೆಂಗಳೂರಿನ ಇತರ ಕಡೆಗಳಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿ ಮಾಡಬಹುದು ಎಂದು ಚರ್ಚೆ ಮಾಡಿ ಜಾರಿ ಮಾಡುತ್ತೇವೆ” ಎಂದರು.

“ಇಂತಹ ಗುತ್ತಿಗೆದಾರರು ಶಕ್ತಿಶಾಲಿಯಾದರೆ ಮಾತ್ರ ಸರ್ಕಾರ ಶಕ್ತಿಶಾಲಿಯಾಗುತ್ತದೆ. ಅವರು ದುರ್ಬಲರಾದರೆ ಸರ್ಕಾರವೂ ದುರ್ಬಲವಾಗುತ್ತದೆ. ಈ ವಿಚಾರವಾಗಿ ಏಳು ಬಾರಿ ಟೆಂಡರ್ ಕರೆದು ವಿಫಲವಾಗಿದ್ದೆವು. ಇವರು ದೊಡ್ಡ ಧೈರ್ಯ ಮಾಡಿ ಮುಂದೆ ಬಂದಿದ್ದಾರೆ. ಅವರ ಧೈರ್ಯವನ್ನು ನಾನು ಮೆಚ್ಚುತ್ತೇನೆ. ನಮ್ಮ ಮಾಲ್‌ಗಳಲ್ಲೂ ಇಂತಹ ವ್ಯವಸ್ಥೆ ಇದೆ. ಅಲ್ಲಿನ ಗ್ರಾಹಕ ವರ್ಗವೇ ಬೇರೆ. ಇಲ್ಲಿ ಅಂತಹ ಗ್ರಾಹಕ ವರ್ಗ ಹೆಚ್ಚಾಗಿ ಬರುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಎರಡು ಮೂರು ದಿನಗಳಲ್ಲಿ ಜಾಹೀರಾತು ನೀತಿ

“ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ. ಈ ಕಾರ್ಯಕ್ರಮದ ನಂತರ ಜಾಹಿರಾತು ನೀತಿ ಬಗ್ಗೆ ಪಾಲಿಕೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಜಾಹೀರಾತು ನೀತಿಯನ್ನು ತರುತ್ತೇವೆ. ನಂತರ ಟಿಡಿಆರ್ ಸಮಸ್ಯೆ ಬಗೆಹರಿಸಲಾಗುವುದು. ನಂತರ ಪ್ರೀಮಿಯಂ ಎಫ್ಎಆರ್ ಸೇರಿದಂತೆ ಎಲ್ಲಾ ವಿಚಾರವಾಗಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದರು.

“ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಡಬಲ್ ಡೆಕ್ಕರ್ ಕಾರಿಡಾರ್ ಮೂಲಕ ಮೇಲ್ಸೇತುವೆ ಹಾಗೂ ಅದರ ಮೇಲೆ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ಮೆಟ್ರೋ ಮಾರ್ಗ ಮಾಡಿದರೂ ಮೇಲ್ಸೇತುವೆ ಜತೆಯಲ್ಲೇ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲಾಗುವುದು. ಇದರಿಂದ ಖಾಸಗಿ ಭೂಮಿ ವಶಕ್ಕೆ ಪಡೆಯುವ ಪ್ರಕ್ರಿಯೆಯಿಂದ ಮುಕ್ತರಾಗುತ್ತೇವೆ. ಬಿಬಿಎಂಪಿ ಹಾಗೂ ಬಿಎಂಆರ್‌ಸಿಎಲ್ ಸಹಯೋಗದಲ್ಲಿ ಈ ಕಾಮಗಾರಿಗಳನ್ನು ಮಾಡಲಾಗುವುದು” ಎಂದು ಹೇಳಿದರು.

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ದಿನೇಶ್ ಗುಂಡೂರಾವ್, ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...