ಆಸ್ತಿ ತೆರಿಗೆ ಪಾವತಿ | ಜುಲೈ 31ರವರೆಗೆ ಮಾತ್ರ ಓಟಿಎಸ್‌ಗೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್

Date:

“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡಲಾಗಿರುವ ಒನ್ ಟೈಮ್ ಸೆಟ್ಲ್‌ಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ, ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

- Advertisement -

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಶಿವಕುಮಾರ್ ಅವರು, “ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲ್‌ಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಕಾಯ್ದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸಲು ಮುಂದಾಗಿದೆ. ನಾಗರಿಕರು ಈ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“20 ಲಕ್ಷ ಕಟ್ಟಡಗಳು ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿದ್ದು, ಅನೇಕರು ಹೊರಗಿದ್ದಾರೆ. ತೆರಿಗೆ ಪಾವತಿಸಲು ಅವರಿಗೂ ಅವಕಾಶ ಕಲ್ಪಿಸಲಾಗಿದೆ. ಅವರು ತೆರಿಗೆ ಪಾವತಿಸಿ 90 ದಿನದೊಳಗೆ ಸೂಕ್ತ ದಾಖಲೆ ಕೊಟ್ಟರೆ ಅವರಿಗೆ ಸೂಕ್ತ ಖಾತೆ ನೀಡಲಾಗುವುದು. ಇನ್ನು 4 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. ಈಗಾಗಲೇ 50 ಸಾವಿರ ಮಂದಿ ಈ ಅವಕಾಶ ಬಳಸಿಕೊಂಡು ಆಸ್ತಿ ತೆರಿಗೆ ಪಾವತಿಸಿದ್ದಾರೆ. ಆಗಸ್ಟ್ 1ರಿಂದ ತೆರಿಗೆ ಪಾವತಿಸದಿದ್ದರೆ ಡೀಫಾಲ್ಟರ್ ಪಟ್ಟಿಗೆ ಸೇರುತ್ತಾರೆ. ಹೀಗಾಗಿ ಜುಲೈ 31ರ ಒಳಗೆ ಆಸ್ತಿ ತೆರಿಗೆ ಪಾವತಿ ಮಾಡಿ. ಸದ್ಯದ ಲೆಕ್ಕಾಚಾರದ ಪ್ರಕಾರ 5,200 ಕೋಟಿಯಷ್ಟು ತೆರಿಗೆ ಸಂಗ್ರಹವಾಗಬೇಕಿತ್ತು. ಆದರೆ, ನಮಗೆ 1,300 ಕೋಟಿ ಮಾತ್ರ ಸಂಗ್ರಹವಾಗಿದೆ” ಎಂದರು.

ಮೂರು ತಿಂಗಳಲ್ಲಿ ಆಸ್ತಿ ದಾಖಲೆ ಡಿಜಿಟಲೀಕರಣ ಪೂರ್ಣ

“20 ಲಕ್ಷ ಆಸ್ತಿ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಮಾಡಲಾಗುತ್ತಿದೆ. ಈ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುವುದು. 20 ಲಕ್ಷ ಆಸ್ತಿಗಳ ಪೈಕಿ 8 ಲಕ್ಷ ಆಸ್ತಿಗಳ ದಾಖಲೆಗಳು ಡಿಜಿಟಲೀಕರಣವಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಉಳಿದ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.

ಹಸಿರು ರಕ್ಷಕ ಮೂಲಕ 2 ಲಕ್ಷ ಗಿಡ ನೆಡುವ ಗುರಿ

ಇನ್ನು ಕಳೆದ ವರ್ಷ ಹಸಿರು ರಕ್ಷಕ ಕಾರ್ಯಕ್ರಮ ಅನಾವರಣ ಮಾಡಿದ್ದೆವು. ಶಾಲಾ ಮಕ್ಕಳು ತಮ್ಮ ಪ್ರದೇಶದಲ್ಲಿ ಗಿಡ ನೆಟ್ಟು ಅವುಗಳನ್ನು ಅವರೇ ಬೆಳೆಸುವ ಕಾರ್ಯಕ್ರಮ ಇದಾಗಿತ್ತು. ಈಗಾಗಲೇ 250 ಶಾಲೆಗಳ ಸಹಯೋಗದಲ್ಲಿ 52 ಸಾವಿರ ಗಿಡಗಳನ್ನು ನೆಡಲಾಗಿದೆ. ಈ ಪೈಕಿ ಶೇ.80 ರಷ್ಟು ಗಿಡಗಳು ಉಳಿದುಕೊಂಡಿವೆ. 20% ಗೆ ಬದಲಿ ಗಿಡ ನೆಡಲಾಗುವುದು.

ಶಾಲೆಗಳು ಪಾಲಿಕೆ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಗಿಡಗಳು ಆರೋಗ್ಯಕರವಾಗಿ ಬೆಳೆಯುತ್ತಿವೆಯೇ ಎಂದು ಪರಿಶೀಲಿಸಲು ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ಈ ವರ್ಷ ಹೆಚ್ಚಿನ ಶಾಲೆಗಳನ್ನು ಸೇರಿಸಿಕೊಂಡು 2 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ. ಮೂರ್ನಾಲ್ಕು ಗಿಡ ನೆಟ್ಟು ಅವುಗಳನ್ನು ಬೆಳೆಸಿ ಹಸಿರು ಕಾಪಾಡಲು ನೆರವಾಗಿ ಎಂದು ಎಲ್ಲ ಶಿಕ್ಷಣ ಸಂಸ್ಥೆ ಮುಖ್ಯಸ್ಥರು, ಅಧ್ಯಾಪಕರು, ಮಕ್ಕಳಿಗೆ ಮನವಿ ಮಾಡುತ್ತೇನೆ.

ಬಿಬಿಎಂಪಿ ವತಿಯಿಂದ ವಲಯವಾರು ಮರಗಣತಿ ಮಾಡಲು ಟೆಂಡರ್ ಕರೆಯಲಾಗಿದೆ. ಬೊಮ್ಮನಹಳ್ಳಿ ವಲಯದ ವಿದ್ಯಾಪೀಠ, ಕತ್ತರಿಗುಪ್ಪೆ ವಾರ್ಡ್‌ಗಳಲ್ಲಿ ಈಗಾಗಲೇ 94 ಸಾವಿರ ಮರಗಳ ಸರಿಯಾದ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗಿದೆ.

ಇನ್ನು ಮೆಪಥಾನ್ ಕಾರ್ಯಕ್ರಮದ ಮೂಲಕ ಎಲ್ಲೆಲ್ಲಿ ಗಿಡ ನೆಡಲು ಅವಕಾಶವಿದೆ ಎಂದು ಸ್ಥಳ ಗುರುತಿಸಲು ಮುಂದಾಗಿದ್ದೇವೆ. ಬೊಮ್ಮನಹಳ್ಳಿ ವಲಯದಲ್ಲಿ ಈ ಪ್ರಾಯೋಗಿಕ ಪ್ರಕ್ರಿಯೆ ನಡೆದಿದ್ದು, ಸಾರ್ವಜನಿಕರು ಕೂಡ ಈ ವಿಚಾರದಲ್ಲಿ ನೆರವಾಗಬಹುದು.

ಇನ್ನು ನಗರದಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಬಾವಿಗಳ ರಕ್ಷಣೆಗೆ ಪಾಲಿಕೆ ಮುಂದಾಗಿದೆ. ಇನ್ನು ನಗರದಲ್ಲಿ ಎಲ್ಲೆಲ್ಲಿ ತೆರೆದ ಬಾವಿಗಳಿವೆ ಅವುಗಳ ಮಾಹಿತಿ ಪಡೆದು ಅವುಗಳನ್ನು ಅಭಿವೃದ್ಧಿಪಡಿಸಲಾಗುವುದು. ನಗರದಲ್ಲಿ 7 ಸಾವಿರ ಕೊಳವೆ ಬಾವಿಗಳು ಬತ್ತಿದ್ದವು. ಇವುಗಳ ಪುನಶ್ಚೇತನಕ್ಕಾಗಿ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ನಿರ್ಧರಿಸಿದ್ದೇವೆ.

ಬೆ.5 ರಿಂದ ರಾ.10 ರವರೆಗೆ ಪಾರ್ಕ್ ಓಪನ್

ಇನ್ನು ನಗರದಲ್ಲಿನ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆಯಲಾಗುತ್ತಿದೆ. ಸಾರ್ವಜನಿಕರು ಮಧ್ಯಾಹ್ನದ ವೇಳೆಯೂ ಉದ್ಯಾನಗಳನ್ನು ತೆರೆಯಬೇಕು ಎಂದು ಮನವಿ ನೀಡಿದ್ದು, ಹೀಗಾಗಿ ನಗರದ ಎಲ್ಲ ಉದ್ಯಾನಗಳನ್ನು ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ರವರೆಗೆ ತೆರೆಯಲು ನಿರ್ಧರಿಸಲಾಗಿದೆ.

ಕಬ್ಬನ್ ಪಾರ್ಕ್ ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿದ್ದು ಈ ಸಮಯ ಇಲ್ಲಿಗೆ ಅನ್ವಯವಾಗುವುದಿಲ್ಲ. ಉದ್ಯಾನವನಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪೊಲೀಸರ ಗಸ್ತು, ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು. ಇದರ ಜತೆಗೆ 22660000, 22221188 ಪಾಲಿಕೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. 9480685700 ಗೆ ವಾಟ್ಸಪ್ ಮೂಲಕ ಮಾಹಿತಿ ನೀಡಬಹುದು.

ಈ ಸುದ್ದಿ ಓದಿದ್ದೀರಾ? ಕೊಲೆಯ ಹಿಂದಿದೆಯೇ ನಟ ದರ್ಶನ್ ಕೈವಾಡ? ಏನಿದು ಪ್ರಕರಣ?

ಅನಧಿಕೃತ ಫ್ಲೆಕ್ಸ್; ಎಆರ್ ಓ ವಿರುದ್ಧವೂ ಪ್ರಕರಣ

ಪಾಲಿಕೆ ವತಿಯಿಂದ ಅನಧಿಕೃತ ಫ್ಲೆಕ್ಸ್ ನಿಷೇಧ ಮಾಡಿದ್ದರೂ, ಎಲ್ಲ ರಾಜಕೀಯ ಪಕ್ಷಗಳ ವತಿಯಿಂದ ಫ್ಲೆಕ್ಸ್ ಹಾಕಲಾಗುತ್ತಿದೆ. ಇದನ್ನು ನಿಯಂತ್ರಿಸುವುದು ಆಯಾ ಪ್ರದೇಶದ ಸಹಾಯಕ ಕಂದಾಯ ಅಧಿಕಾರಿಯ (ಎಆರ್‌ಒ) ಜವಾಬ್ದಾರಿಯಾಗಿದ್ದು, ಇನ್ನು ಮುಂದೆ ಅನಧಿಕೃತ ಫ್ಲೆಕ್ಸ್ ಇದ್ದರೆ, ಅನಧಿಕೃತ ಫ್ಲೆಕ್ಸ್ ಹಾಕಿದವರ ಜತೆಗೆ ಈ ಅಧಿಕಾರಿಗಳ ಮೇಲೂ ಶಿಸ್ತುಕ್ರಮ ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅನಧಿಕೃತ ಫ್ಲೆಕ್ಸ್‌ಗಳ ಬಗ್ಗೆ ಸಾರ್ವಜನಿಕರು ಪಾಲಿಕೆಗೆ ದೂರು ನೀಡಲು 1533 ಸಹಾಯವಾಣಿಯನ್ನು ಸಂಪರ್ಕಿಸಬಹುದು. 9480683939 ವಾಟ್ಸ್‌ಆಪ್ ಮೂಲಕ ಸಾರ್ವಜನಿಕರು ಅನಧಿಕೃತ ಫ್ಲೆಕ್ಸ್ ಹಾಕಿರುವ ಫೋಟೋ ಹಾಗೂ ವಿಳಾಸ ಕಳುಹಿಸಬಹುದು. ಆಗ ಪಾಲಿಕೆ ವತಿಯಿಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...