ಚೀನಾದಲ್ಲಿ ನ್ಯುಮೋನಿಯಾ | ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Date:

  • ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ
  • ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ

ಚೀನಾದಲ್ಲಿ ನ್ಯುಮೋನಿಯಾ ಶುರುವಾಗಿದೆ. ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ. ಪ್ಯಾನಿಕ್ ಆಗುವಂತ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ನಾವು ಆಸ್ಪತ್ರೆಗಳಿಗೆ ಸೂಚನೆ ಕೊಟ್ಟಿದ್ದೇವೆ. ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ” ಎಂದರು.

“ಡಿಸೆಂಬರ್‌ನಲ್ಲಿ ಕೋಲ್ಡ್ ಹೆಚ್ಚಿರುತ್ತದೆ. ಕೆಮ್ಮು, ಜ್ವರ ಬಂದರೆ ತಕ್ಷಣ ಚಿಕಿತ್ಸೆ ಪಡೆಯಬೇಕು. ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇದೆ. ಸರಿಯಾಗಿ‌ ಆಸ್ಪತ್ರೆಗೆ ಡ್ರಗ್ಸ್ ಸಪ್ಲೈ ‌ಆಗ್ತಿಲ್ಲ. ಇದರಿಂದ ಸಮಸ್ಯೆಯಾಗ್ತಿದೆ. ಇದರ ಬಗ್ಗೆ ನಾವು ಗಮನಹರಿಸಿದ್ದೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಭ್ರೂಣ ಹತ್ಯೆಗಳು ನಡೆಯುತ್ತಿವೆ. ಹೆಣ್ಣುಮಕ್ಕಳ ಅನುಪಾತ ಕಡಿಮೆಯಾಗ್ತಿದೆ. ಇದರಿಂದ ಭ್ರೂಣ ಹತ್ಯೆ ಆಗ್ತಿದೆ ಅನ್ನೋದು ಅರ್ಥ ಒಂದೇ ಕಡೆ ಅಲ್ಲ, ರಾಜ್ಯದ ಹಲವು ಕಡೆ ಇದೆ. ಇದೊಂದು ಸಾಮಾಜಿಕ ಪಿಡುಗು. ಕೇವಲ ಆರೋಗ್ಯ ಇಲಾಖೆಗೆ ಸೀಮಿತವಲ್ಲ. ಇದೊಂದು ಸೋಶಿಯಲ್ ಪ್ರಾಬ್ಲಂ ಕೂಡ ಹೌದು. ನಾವು ಇದನ್ನ ಗಂಭೀರವಾಗಿ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

“ಭ್ರೂಣ ಹತ್ಯೆ ಪ್ರಕರಣ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ಕೊಡಬೇಕು. ಎಷ್ಟು ಅಬಾರ್ಷನ್ ಆಗ್ತಿದೆ ಐಡೆಂಟಿಫೈ ಮಾಡಬೇಕು. ರಿಜಿಸ್ಟರ್ ಆಗಿ ಬರದೇ ಹೋದರೆ ಚೆಕ್ ಮಾಡಬೇಕು. ಇದರ ಬಗ್ಗೆ ಸರಿಯಾದ ಪ್ರೊಸೀಜರ್ ಆಗಬೇಕು” ಎಂದು ಸೂಚಿಸಿದ್ದೇನೆ ಎಂದರು.

“ನಾಳೆ, ನಾಡಿದ್ದು ಇದರ ಬಗ್ಗೆ ಪ್ರೊಸೀಜರ್ ಮಾಡುತ್ತೇವೆ. ನಾವು ಕೂಡ ಇಡೀ ರಾಜ್ಯದಲ್ಲಿ ಪ್ರವಾಸ ಮಾಡ್ತೇವೆ. ಖುದ್ದು ನಾವೇ ಪರಿಶೀಲನೆ ಮಾಡ್ತೇವೆ. ಈ ಬಗ್ಗೆ ಸಚಿವರುಗಳ ಸಮಿತಿ ಕೂಡ ರಚನೆ ಮಾಡುತ್ತೇವೆ. ನಮ್ಮ ಅಧಿಕಾರಿಗಳು ಮಂಡ್ಯಕ್ಕೂ ‌ಹೋಗಿದ್ದಾರೆ” ಎಂದರು.

ಆಯುಷ್ಮಾನ್ ಭಾರತ್ ಕಾರ್ಡ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಸಚಿವರು, “ಕಾರ್ಡ್‌ಗಳು ವಿತರಣೆಯಾಗಬೇಕು. 1500 ಕೋಟಿ ರೂ.ಗಳನ್ನು ಆಯುಷ್ಮಾನ್ ಕಾರ್ಡ್ ಬಳಸುವ ಆಸ್ಪತ್ರೆಗಳಿಗೆ ಕೊಡ್ತಿದ್ದೇವೆ. ಬಿಪಿಎಲ್ ಕಾರ್ಡ್ ದಾರರಿಗೆ ಇದು ಉಪಯೋಗವಾಗಲಿದೆ. ಆಯುಷ್ಮಾನ್ ಕಾರ್ಡ್ ಇರಲೇಬೇಕೆಂದಿಲ್ಲ. ಬಿಪಿಎಲ್ ಕಾರ್ಡ್ ಇದ್ರೂ ಟ್ರೀಟ್ ಮೆಂಟ್ ಸಿಗಲಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ...