ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಜಾಮೀನು ಮಂಜೂರು

Date:

ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ.

- Advertisement -

ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ಸುಪ್ರೀಂನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶಿಸಿತ್ತು. ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಸಂತ್ರಸ್ತೆಯರಿಬ್ಬರು ಸೇರಿ 12 ಜನ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಕೋರ್ಟ್‌ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ಬಳಿಕ ಮುರುಘಾಶ್ರೀ ಬಿಡುಗಡೆಯಾಗಿ ದಾವಣಗೆರೆಗೆ ತೆರಳುವ ಸಾಧ್ಯತೆಯಿದೆ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಭಾರತೀಯ ದಂಡ ಸಂಹಿತೆ-1860 ರ ಕಲಂ 376 (2) (ಎನ್‌), 376 (3), 504 ಮತ್ತು ಪೋಕ್ಸೊ ಕಾಯಿದೆ 2012ರ ಕಲಂ 5 (ಎಲ್‌) ಮತ್ತು 6ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದ್ದು, ಈ ಕುರಿತಂತೆ ಚಿತ್ರದುರ್ಗ ಜಿಲ್ಲಾಎರಡನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...