ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸ್ ದೌರ್ಜನ್ಯ | ಪರಿಹಾರ ನೀಡಿದ ಸರ್ಕಾರದ ನಡೆಗೆ ಸ್ವಾಗತ ಎಂದ ಪಿಯುಸಿಎಲ್

Date:

ಪೊಲೀಸರಿಂದ ಹಲ್ಲೆಗೆ ತುತ್ತಾಗಿದ್ದ ಇಬ್ಬರು ಮಹಿಳಾ ಲೈಂಗಿಕ ಕಾರ್ಯಕರ್ತೆಯರಿಗೆ ಪರಿಹಾರವಾಗಿ ರಾಜ್ಯ ಸರ್ಕಾರವು ತಲಾ ₹20 ಸಾವಿರ ಪರಿಹಾರ ನೀಡಿದೆ. ಸರ್ಕಾರದ ಈ ಕ್ರಮವನ್ನು ಪೀಪಲ್ಸ್ ಯೂನಿಯನ್ ಫಾರ್ ಸಿಲ್ ಲೈಬರ್ಟೀಸ್ (ಪಿಯುಸಿಎಲ್) ಸ್ವಾಗತಿಸಿದೆ.

- Advertisement -

ಗೌರಮ್ಮ (ಹೆಸರು ಬದಲಾಯಿಸಲಾಗಿದೆ) ಮತ್ತು ಸುಮಾ (ಹೆಸರು ಬದಲಾಯಿಸಲಾಗಿದೆ) ವಿರುದ್ಧ ಪೊಲೀಸರು ನಡೆಸಿದ ಹಿಂಸಾಚಾರಕ್ಕಾಗಿ ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ 20,000 ಹಣವನ್ನು ಪರಿಹಾರ ನೀಡುವಂತೆ ಆದೇಶಿಸಿತ್ತು. ಅದರಂಗೆ, ಸರ್ಕಾರವು ಇಬ್ಬರಿಗೂ ಚೆಕ್ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪೊಲೀಸ್ ಠಾಣೆಯಲ್ಲಿ ತಮಗೆ ಕ್ರೂರ ದೈಹಿಕ ಹಿಂಸೆ ನೀಡಿದ್ದಾರೆ ಹಾಗೂ ತಮ್ಮ ಘನತೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಗಳು ಮತ್ತು ಗೃಹ ರಕ್ಷಕರ ವಿರುದ್ಧ ಸಂತ್ರಸ್ತರು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ಸಾರ್ವಜನಿಕ ವಿಚಾರಣೆಯ ಆಧಾರದ ಮೇಲೆ ಓಬವ್ವ ಪಡೆಯನ್ನು ವಿಸರ್ಜಿಸಲು ಶಿಫಾರಸನ್ನು ಮಾಡಿದೆ.

ಲೈಂಗಿಕ ಕೆಲಸದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಹಿಂಸೆಯಿಂದ ಮುಕ್ತವಾಗಿರುವ ಹಕ್ಕನ್ನು ಗುರುತಿಸುವ ಪರಿಹಾರದ ಹೊರತಾಗಿಯೂ ಕೂಡಾ, ಅಂತಹ ಹಿಂಸಾಚಾರ ಮರುಕಳಿಸದಂತೆ ನೋಡಿಕೊಳ್ಳಲು ರಾಜ್ಯ ಮಾನವ ಹಕ್ಕು ಆಯೋಗ ಆದೇಶ ನೀಡಿದೆ.

ಲೈಂಗಿಕ ಕೆಲಸದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಬ್ಬರ ಮೇಲಿನ ದೌರ್ಜನ್ಯದ ಭಯವನ್ನು ಕೊನೆಗೊಳಿಸುವ ಐತಿಹಾಸಿಕ ಮೊದಲ ಹೆಜ್ಜೆಯಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮವನ್ನು ಸ್ವಾಗತಿಸುತ್ತೇವೆ ಎಂದುಪಿಯುಸಿಎಲ್ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳ; ಐವರ ಬಂಧನ

ಪೊಲೀಸ್ ಸಂವೇದನಾ ತರಬೇತಿಗಳನ್ನು ನಡೆಸುವ ಮೂಲಕ ಲೈಂಗಿಕ ಕೆಲಸದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು, ರಾಜ್ಯವು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬ ನ್ಯಾಯಸಮ್ಮತವಾದ ನಿರೀಕ್ಷೆಯನ್ನು ಹೊಂದಿರುವುದಾಗಿ ಪಿಯುಸಿಎಲ್ ತಿಳಿಸಿದೆ.

“ಪೋಲೀಸ್ ಹಿಂಸಾಚಾರ ಮತ್ತು ಲೈಂಗಿಕ ಕಾರ್ಯಕರ್ತರ ಸಾಮಾಜಿಕ ತಿರಸ್ಕಾರದ ಸಮಸ್ಯೆಗೆ ದೀರ್ಘಾವಧಿಯ ಪರಿಹಾರವೆಂದರೆ ವಯಸ್ಕ ಲೈಂಗಿಕ ಕೆಲಸವನ್ನು ಅಪರಾಧೀಕರಣಗೊಳಿಸುವುದು” ಎಂದು ಪಿಯುಸಿಎಲ್ ಕರ್ನಾಟಕದ ಅಧ್ಯಕ್ಷ ಅರವಿಂದ್ ನೆರೈನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...