ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

Date:

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಬೃಹತ್ ತಾರಾಗಣವೇ ಇದೆ. ಈ ಚಿತ್ರದ ಚಿತ್ರಕಥೆ, ನಿರ್ಮಾಣ ಸೇರಿದಂತೆ ಹಲವು ಕಾರಣಗಳಿಗೆ ಗಮನ ಸೆಳೆದಿದೆ.

‘ಕಲ್ಕಿ 2898 ಎಡಿ’ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಭಾರೀ ಬಜೆಟ್ ಸಿನಿಮಾ ಆಗಿದೆ. ಬಿಡುಗಡೆಗೆ ಮುನ್ನವೇ ಸಿನಿಮಾದ ಕೆಲವು ಹಕ್ಕುಗಳನ್ನು ಮಾರಾಟ ಮಾಡಲಾಗಿದೆ. ವಿಶೇಷವೆಂದರೆಕಲ್ಕಿಸಿನಿಮಾ ಒಟ್ಟೊಟ್ಟಿಗೆ ಮೂರು ಒಟಿಟಿಗಳಿಗೆ ಮಾರಾಟವಾಗಿದೆ. ಅಲ್ಲದೇ, ಕಲ್ಕಿ 2898 ಎಡಿಸಿನಿಮಾದ ಡಿಜಿಟಲ್ ಹಕ್ಕು ಸುಮಾರು 100 ಕೋಟಿಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ.

ಟಾಲಿವುಡ್ರೆಬೆಲ್ ಸ್ಟಾರ್ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಸಿನಿಮಾ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ರೆಬೆಲ್ಸ್ಟಾರ್ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಇದೇ ಜೂನ್​ 27ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಸಿನಿಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಗ್ಬಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಗ್ ಅಶ್ವಿನ್ ಚಿತ್ರವನ್ನು ನಿರ್ದೇಶಿಸಿದ್ದು, ವೈಜಯಂತಿ ಮೂವೀಸ್ ಅಡಿಯಲ್ಲಿ ಅಶ್ವಿನಿ ದತ್ ಚಿತ್ರವನ್ನು ನಿರ್ಮಿಸಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ.

ಹಿಂದೆಆರ್ಆರ್ಆರ್ಸಿನಿಮಾ ನೆಟ್ಫ್ಲಿಕ್ಸ್ಅದರ ನಂತರ ಜೀ 5ಗೆ ಮಾರಾಟವಾಗಿ ದಾಖಲೆ ಬರೆದಿತ್ತು. ಈಗಕಲ್ಕಿ 2898 ಎಡಿಸಿನಿಮಾ ಒಟ್ಟಿಗೆ ಮೂರು ಒಟಿಟಿಗೆ ಮಾರಾಟವಾಗಿ ದಾಖಲೆ ಬರೆದಿದೆ.

ಈ ಸುದ್ದಿ ಓದಿದ್ದೀರಾ?  ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಕಲ್ಕಿ 2898 ಎಡಿಸಿನಿಮಾ ನೆಟ್ಫ್ಲಿಕ್ಸ್, ಜೀ 5 ಹಾಗೂ ಅಮೆಜಾನ್ ಪ್ರೈಂ ಮೂರು ಪ್ರಮುಖ ಒಟಿಟಿಗಳಿಗೆ ಡಿಜಿಟಲ್ ಹಕ್ಕು ಮಾರಾಟ ಮಾಡಿದೆ. ನೆಟ್ಫ್ಲಿಕ್ಸ್ನಲ್ಲಿ ಹಿಂದಿ, ಇಂಗ್ಲೀಷ್ ಹಾಗೂ ಕೆಲವು ವಿದೇಶಿ ಭಾಷೆಗಳಲ್ಲಿಕಲ್ಕಿಸಿನಿಮಾ ಪ್ರದರ್ಶನವಾಗಲಿದೆ.

ಅಮೆಜಾನ್ ಹಾಗೂ ಜೀ 5ನಲ್ಲಿ ಹಿಂದಿ, ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿಕಲ್ಕಿಸಿನಿಮಾ ಸ್ಟ್ರೀಂ ಆಗಲಿದೆ. ನೆಟ್ಫ್ಲಿಕ್ಸ್, ಅಮೆಜಾನ್ ಮೂಲಕ ಅಂತಾರಾಷ್ಟ್ರೀಯ ವೀಕ್ಷಕರನ್ನು ಹಾಗೂ ಜೀ5 ಮೂಲಕ ಭಾರತದ ವೀಕ್ಷಕರನ್ನು ಪರಿಣಾಮಕಾರಿಯಾಗಿ ತಲುಪುವ ಯೋಜನೆ ಚಿತ್ರತಂಡದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....